Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 21:3 - ಕನ್ನಡ ಸತ್ಯವೇದವು C.L. Bible (BSI)

3 ಇವರ ತಂದೆ ಇವರಿಗೆ ಜುದೇಯದ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನು ಅಲ್ಲದೆ, ಬೆಳ್ಳಿಬಂಗಾರ, ಅಮೂಲ್ಯ ವಸ್ತು ಇತ್ಯಾದಿ ವಿಶೇಷ ದಾನಗಳನ್ನು ಕೊಟ್ಟನು. ಆದರೆ ಯೆಹೋರಾಮನು ಹಿರಿಯ ಮಗನಾಗಿದ್ದುದರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇವರ ತಂದೆಯು ಇವರಿಗೆ ಯೆಹೂದದ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನಲ್ಲದೆ ಬೆಳ್ಳಿ ಬಂಗಾರ, ಶ್ರೇಷ್ಠವಸ್ತು ಇತ್ಯಾದಿ ವಿಶೇಷ ದಾನಗಳನ್ನು ಕೊಟ್ಟನು. ಆದರೆ ಯೆಹೋರಾಮನು ಹಿರಿಯ ಮಗನಾಗಿದ್ದುದರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇವರ ತಂದೆಯು ಇವರಿಗೆ ಯೆಹೂದದ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನಲ್ಲದೆ ಬೆಳ್ಳಿ ಬಂಗಾರ ಶ್ರೇಷ್ಠವಸ್ತು ಇತ್ಯಾದಿ ವಿಶೇಷದಾನಗಳನ್ನು ಕೊಟ್ಟನು; ಆದರೆ ಯೆಹೋರಾಮನು ಹಿರಿಯ ಮಗನಾಗಿದ್ದದರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋಷಾಫಾಟನು ತನ್ನ ಮಕ್ಕಳಿಗೆ ಅನೇಕ ಬೆಳ್ಳಿಬಂಗಾರದ ಮತ್ತು ಬೆಲೆಬಾಳುವ ವಸ್ತುಗಳನ್ನು ಉಡುಗೊರೆಯಾಗಿ ಕೊಟ್ಟನು. ಮಾತ್ರವಲ್ಲದೆ ಕೋಟೆಯಿಂದ ಭದ್ರಪಡಿಸಲ್ಪಟ್ಟ ಪಟ್ಟಣಗಳನ್ನು ಕೊಟ್ಟನು. ಆದರೆ ಯೆಹೂದ ರಾಜ್ಯವನ್ನು ತನ್ನ ಚೊಚ್ಚಲ ಮಗನಾದ ಯೆಹೋರಾಮನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರ ತಂದೆ ಯೆಹೂದದಲ್ಲಿ ಕೋಟೆಯುಳ್ಳ ಪಟ್ಟಣಗಳ ಸಂಗಡ ಬೆಳ್ಳಿಯನ್ನೂ, ಬಂಗಾರವನ್ನೂ, ಬೆಲೆಯುಳ್ಳ ವಸ್ತುಗಳನ್ನೂ ಅವರಿಗೆ ದಾನಗಳಾಗಿ ಕೊಟ್ಟನು. ಆದರೆ ಯೆಹೋರಾಮನು ಚೊಚ್ಚಲ ಮಗನಾದುದರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 21:3
5 ತಿಳಿವುಗಳ ಹೋಲಿಕೆ  

ತನ್ನ ಉಳಿದ ಎಲ್ಲ ಮಕ್ಕಳನ್ನು ಜಾಣತನದಿಂದ ವಿಂಗಡಿಸಿ ಯೆಹೂದ-ಬೆನ್ಯಾಮೀನ್ ಕುಲಪ್ರದೇಶಗಳಲ್ಲಿ ಇದ್ದ ಕೋಟೆ ಕೊತ್ತಲುಗಳಿಂದ ಕೂಡಿದ ಆಯಾ ಪಟ್ಟಣಗಳಲ್ಲಿಟ್ಟು, ಅವರಿಗೆ ಬೇಕಾದಷ್ಟು ಜೀವನಾಂಶವನ್ನು ಏರ್ಪಡಿಸಿ, ಹಲವಾರು ಹೆಂಡತಿಯರನ್ನೂ ಗೊತ್ತುಮಾಡಿಕೊಟ್ಟನು.


ರೆಹಬ್ಬಾಮನು ಜೆರುಸಲೇಮಿನಲ್ಲಿ ವಾಸವಾಗಿದ್ದು ಜುದೇಯದ ಈ ಕೆಳಕಂಡ ಪಟ್ಟಣಗಳನ್ನು ಭದ್ರಪಡಿಸಿದನು:


ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗಲೇ ಅವರನ್ನು ತನ್ನ ಮಗ ಇಸಾಕನ ಬಳಿಯಿಂದ ದೂರಕ್ಕೆ ಪೂರ್ವದಿಕ್ಕಿನಲ್ಲಿದ್ದ ಕೆದೆಮ್ ನಾಡಿಗೆ, ಕಳಿಸಿಬಿಟ್ಟನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ರಾಜನು ತನ್ನ ಮಕ್ಕಳಲ್ಲಿ ಒಬ್ಬನಿಗೆ ಭೂದಾನ ಮಾಡಿದರೆ ಅದು ತಂದೆಯ ಸೊತ್ತಾದ ಕಾರಣ ಮಕ್ಕಳಿಗೆ ಹಕ್ಕು ಬರುವುದು, ಅದು ಬಾಧ್ಯವಾಗಿ ಸಿಕ್ಕಿದ ಸೊತ್ತೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು