Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 21:9 - ಕನ್ನಡ ಸತ್ಯವೇದವು C.L. Bible (BSI)

9 ಆಗ ಯೆಹೋರಾಮನು ತನ್ನ ಸರದಾರರನ್ನೂ ಎಲ್ಲ ರಥಬಲವನ್ನೂ ಕೂಡಿಸಿಕೊಂಡು ಜೋರ್ಡನ್ ನದಿಯನ್ನು ದಾಟಿದನು. ಎದೋಮ್ಯರು ಬಂದು ಅವನನ್ನು ಸುತ್ತಿಕೊಳ್ಳಲು ಅವನು ರಾತ್ರಿಯಲ್ಲೇ ದಂಡೆತ್ತಿಹೋಗಿ ಅವರನ್ನೂ ಅವರ ರಥಬಲದ ಅಧಿಪತಿಗಳನ್ನೂ ಸೋಲಿಸಿ ಪಾರಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಯೆಹೋರಾಮನು ರಾತ್ರಿಯಲ್ಲಿ ತನ್ನ ಸರದಾರರನ್ನೂ ಎಲ್ಲಾ ರಥಬಲವನ್ನೂ ಕೂಡಿಸಿಕೊಂಡು ಯೊರ್ದನ್ ಹೊಳೆಯನ್ನು ದಾಟಿದನು.ಎದೋಮ್ಯರು ಬಂದು ಅವನನ್ನು ಸುತ್ತಿಕೊಳ್ಳಲು ಅವನು ರಾತ್ರಿಯಲ್ಲೇ ದಂಡೆತ್ತಿ ಹೋಗಿ ಅವರನ್ನೂ ಅವರ ರಥಬಲದ ಅಧಿಪತಿಗಳನ್ನೂ ಸೋಲಿಸಿ ಪಾರಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಯೆಹೋರಾಮನು ತನ್ನ ಸರದಾರರನ್ನೂ ಎಲ್ಲಾ ರಥಬಲವನ್ನೂ ಕೂಡಿಸಿಕೊಂಡು [ಯೊರ್ದನ್ ಹೊಳೆಯನ್ನು] ದಾಟಿದನು. ಎದೋಮ್ಯರು ಬಂದು ಅವನನ್ನು ಸುತ್ತಿಕೊಳ್ಳಲು ಅವನು ರಾತ್ರಿಯಲ್ಲೇ ದಂಡೆತ್ತಿ ಹೋಗಿ ಅವರನ್ನೂ ಅವರ ರಥಬಲದ ಅಧಿಪತಿಗಳನ್ನೂ ಸೋಲಿಸಿ ಪಾರಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇದನ್ನರಿತ ಯೆಹೋರಾಮನು ತನ್ನ ರಥಬಲದೊಡನೆ ಎದೋಮಿಗೆ ಹೋದನು. ಅಲ್ಲಿ ಎದೋಮ್ಯರ ಸೈನ್ಯ ಇವರಿಗೆ ಮುತ್ತಿಗೆ ಹಾಕಿತು. ಆದರೆ ರಾತ್ರಿ ಸಮಯದಲ್ಲಿಯೇ ಯೆಹೋರಾಮನು ಅವರನ್ನು ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಯೆಹೋರಾಮನು ತನ್ನ ಪ್ರಧಾನರ ಸಂಗಡ, ಎಲ್ಲಾ ರಥಬಲವನ್ನು ತೆಗೆದುಕೊಂಡುಹೋಗಿ, ರಾತ್ರಿಯಲ್ಲಿ ಎದ್ದು, ತನ್ನನ್ನೂ, ತನ್ನ ರಥಗಳ ಅಧಿಪತಿಗಳನ್ನೂ ಸುತ್ತುವರೆದಿದ್ದ ಎದೋಮ್ಯರನ್ನು ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 21:9
3 ತಿಳಿವುಗಳ ಹೋಲಿಕೆ  

“ಜೆರುಸಲೇಮ್ ಪಟ್ಟಣವನ್ನು ಸೈನ್ಯಗಳು ಸುತ್ತುಗಟ್ಟುತ್ತಿರುವುದನ್ನು ನೀವು ಕಾಣುವಾಗ ಅದರ ವಿನಾಶ ಸಮೀಪಿಸಿತೆಂದು ತಿಳಿದುಕೊಳ್ಳಿ.


ಯೆಹೋರಾಮನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರುದ್ಧ ದಂಗೆಯೆದ್ದರು; ಸ್ವತಂತ್ರರಾಗಿ ತಾವೇ ತಮಗೊಬ್ಬ ಅರಸನನ್ನು ನೇಮಿಸಿಕೊಂಡರು.


ಯೆಹೂದ್ಯರಿಗೆ ವಿರುದ್ಧ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿದ್ದಾರೆ. ಆ ಕಾಲದಲ್ಲೇ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು. ಯೆಹೋರಾಮನು ತನ್ನ ಪಿತೃಗಳ ದೇವರಾದ ಸರ್ವೇಶ್ವರನನ್ನು ಬಿಟ್ಟದ್ದೇ ಇದಕ್ಕೆ ಕಾರಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು