2 ಪೂರ್ವಕಾಲ ವೃತ್ತಾಂತ 23:1 - ಕನ್ನಡ ಸತ್ಯವೇದವು C.L. Bible (BSI)1 ಏಳನೆಯ ವರ್ಷದಲ್ಲಿ ಯೆಹೋಯಾದನು ಧೈರ್ಯತಂದುಕೊಂಡು ಯೆರೋಹಾಮನ ಮಗ ಅಜರ್ಯ, ಯೆಹೋಹಾನಾನನ ಮಗ ಇಷ್ಮಾಯೇಲ್, ಓಬೇದನ ಮಗ ಅಜರ್ಯ, ಅದಾಯನ ಮಗ ಮಾಸೇಯ, ಜಿಕ್ರಿಯ ಮಗ ಎಲೀಷಾಫಾಟ್ ಎಂಬ ಶತಾಧಿಪತಿಗಳೊಡನೆ ಒಂದು ಒಪ್ಪಂದ ಮಾಡಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಏಳನೆಯ ವರ್ಷದಲ್ಲಿ ಯೆಹೋಯಾದನು ಧೈರ್ಯತಂದುಕೊಂಡು ಯೆರೋಹಾಮನ ಮಗನಾದ ಅಜರ್ಯ, ಯೆಹೋಹಾನಾನನ ಮಗನಾದ ಇಷ್ಮಾಯೇಲ್, ಓಬೇದನ ಮಗನಾದ ಅಜರ್ಯ, ಅದಾಯನ ಮಗನಾದ ಮಾಸೇಯ, ಜಿಕ್ರಿಯ ಮಗನಾದ ಎಲೀಷಾಫಾಟ್ ಎಂಬ ಶತಾಧಿಪತಿಗಳೊಡನೆ ಒಪ್ಪಂದ ಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಏಳನೆಯ ವರುಷದಲ್ಲಿ ಯೆಹೋಯಾದನು ಧೈರ್ಯತಂದುಕೊಂಡು ಯೆರೋಹಾಮನ ಮಗನಾದ ಅಜರ್ಯ, ಯೆಹೋಹಾನಾನನ ಮಗನಾದ ಇಷ್ಮಾಯೇಲ್, ಓಬೇದನ ಮಗನಾದ ಅಜರ್ಯ, ಅದಾಯನ ಮಗನಾದ ಮಾಸೇಯ, ಜಿಕ್ರಿಯ ಮಗನಾದ ಎಲೀಷಾಫಾಟ್ ಎಂಬ ಶತಾಧಿಪತಿಗಳೊಡನೆ ಒಡಂಬಡಿಕೆಯನ್ನು ಮಾಡಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆರು ವರ್ಷದ ನಂತರ ಯೆಹೋಯಾದನು ತನ್ನ ಬಲವನ್ನು ಪ್ರದರ್ಶಿಸಿದನು. ಅವನು ಸೇನಾಪತಿಗಳೊಂದಿಗೆ ಒಪ್ಪಂದ ಮಾಡಿಕೊಂಡನು. ಅವರು ಯಾರೆಂದರೆ: ಯೆರೋಹಾಮನ ಮಗನಾದ ಅಜರ್ಯ, ಯೆಹೋಹಾನಾನನ ಮಗನಾದ ಇಷ್ಮಾಯೇಲ್, ಓಬೇದನ ಮಗನಾದ ಅಜರ್ಯ, ಅದಾಯನ ಮಗನಾದ ಮಾಸೇಯ ಮತ್ತು ಜಿಕ್ರಿಯ ಮಗನಾದ ಎಲೀಷಾಫಾಟ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಏಳನೆಯ ವರ್ಷದಲ್ಲಿ ಯೆಹೋಯಾದಾವನು ತನ್ನನ್ನು ಬಲಪಡಿಸಿಕೊಂಡು ಶತಾಧಿಪತಿಗಳಾಗಿರುವ ಯೆರೋಹಾಮನ ಮಗ ಅಜರ್ಯನನ್ನೂ, ಯೆಹೋಹಾನಾನನ ಮಗ ಇಷ್ಮಾಯೇಲನನ್ನೂ, ಓಬೇದನ ಮಗ ಅಜರ್ಯನನ್ನೂ, ಅದಾಯನ ಮಗ ಮಾಸೇಯನನ್ನೂ, ಜಿಕ್ರಿಯ ಮಗ ಎಲಿಷಾಫಾಟನನ್ನೂ ಕರೆದುಕೊಂಡು, ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು. ಅಧ್ಯಾಯವನ್ನು ನೋಡಿ |