Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 23:14 - ಕನ್ನಡ ಸತ್ಯವೇದವು C.L. Bible (BSI)

14 ಆಗ ಯಾಜಕ ಯೆಹೋಯಾದನು ಸೇನಾನಿಗಳಾದ ಶತಾಧಿಪತಿಗಳನ್ನು ಹೊರಗೆ ಕರೆದುಕೊಂಡು ಹೋಗಿ ಅವರಿಗೆ, “ಈಕೆಯನ್ನು ಸರ್ವೇಶ್ವರನ ಆಲಯದಲ್ಲಿ ಕೊಲ್ಲಬೇಡಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಸಾಗಿಸಿಕೊಂಡು ಹೊರಗೆ ತಳ್ಳಲಿ; ಮತ್ತು ಈಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಯಾಜಕನಾದ ಯೆಹೋಯಾದನು ಸೇನಾನಿಗಳಾದ ಶತಾಧಿಪತಿಗಳನ್ನು ಹೊರಗೆ ಕರೆದುಕೊಂಡು ಹೋಗಿ ಅವರಿಗೆ, “ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಸಾಗಿಸಿಕೊಂಡು ಹೊರಗೆ ತಳ್ಳಲಿ; ಮತ್ತು ಈಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಯಾಜಕನಾದ ಯೆಹೋಯಾದನು ಸೇನಾನಿಗಳಾದ ಶತಾಧಿಪತಿಗಳನ್ನು ಹೊರಗೆ ಕರಕೊಂಡು ಹೋಗಿ ಅವರಿಗೆ - ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಸಾಗಿಸಿಕೊಂಡು ಹೊರಗೆ ತಳ್ಳಲಿ; ಮತ್ತು ಈಕೆಯನ್ನು ಹಿಂಬಾಲಿಸುವಂಥವರನ್ನು ಕತ್ತಿಯಿಂದ ಕೊಲ್ಲಿರಿ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯಾಜಕನಾದ ಯೆಹೋಯಾದನು ಸೈನ್ಯಾಧಿಕಾರಿಗಳನ್ನು ಹೊರತಂದು, “ಅತಲ್ಯಳನ್ನು ಹೊರಗೆ ಎಳೆದುಕೊಂಡು ಹೋಗಿ, ಯಾರಾದರೂ ಆಕೆಯನ್ನು ಹಿಂಬಾಲಿಸಿದರೆ ಖಡ್ಗದಿಂದ ಅವರನ್ನು ಸಂಹರಿಸಿರಿ” ಎಂದು ಹೇಳಿದನು. ಆಗ ಯಾಜಕರು ಸಿಪಾಯಿಗಳಿಗೆ, “ಅತಲ್ಯಳನ್ನು ದೇವಾಲಯದೊಳಗೆ ಕೊಲ್ಲಬೇಡಿ” ಎಂದು ಎಚ್ಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಯಾಜಕನಾದ ಯೆಹೋಯಾದಾವನು ಸೈನ್ಯದ ಮೇಲೆ ಇರುವ ಶತಾಧಿಪತಿಗಳನ್ನು ಹೊರಗೆ ಕರೆತಂದು ಅವರಿಗೆ, “ಅವಳನ್ನು ಯೆಹೋವ ದೇವರ ಆಲಯದಲ್ಲಿ ಕೊಲ್ಲಬೇಡಿರಿ, ಎರಡು ಸಾಲು ಸಿಪಾಯಿಗಳು ಅವಳನ್ನು ನಡುವೆ ಸಾಗಿಸಿಕೊಂಡು ಹೋಗಿ ಹೊರಗೆ ತಳ್ಳಲಿ ಮತ್ತು ಅವಳನ್ನು ಹಿಂಬಾಲಿಸುವಂಥವರನ್ನು ಖಡ್ಗದಿಂದ ಕೊಂದುಹಾಕಿರಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 23:14
7 ತಿಳಿವುಗಳ ಹೋಲಿಕೆ  

ದೇವರು ಅವರಿಗೆ, “ಹೊರಡಿ, ಪ್ರಾಕಾರಗಳನ್ನು ಶವಗಳಿಂದ ತುಂಬಿಸಿ, ದೇವಾಲಯವನ್ನು ಹೊಲೆಗೆಡಿಸಿ,” ಎಂದು ಅಪ್ಪಣೆಕೊಡಲು ಅವರು ಹೊರಟು ಪಟ್ಟಣದಲ್ಲಿದ್ದವರನ್ನು ಹತಿಸಿದರು.


ಆಗ ಯಾಜಕನಾದ ಯೆಹೋಯಾದಾವನು ಸೇನಾನಿಗಳಾದ ಶತಾಧಿಪತಿಗಳಿಗೆ, “ಈಕೆಯನ್ನು ಸರ್ವೇಶ್ವರನ ಆಲಯದಲ್ಲಿ ಕೊಲ್ಲಬೇಡಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಮಾಡಿ, ಹೊರಗೆ ಕರೆದುಕೊಂಡು ಹೋಗಲಿ; ಮತ್ತು ಈಕೆಯನ್ನು ಹಿಂಬಾಲಿಸುವಂಥವರನ್ನು ಕತ್ತಿಯಿಂದ ಕೊಲ್ಲಿರಿ,” ಎಂದು ಆಜ್ಞಾಪಿಸಿದನು.


ನೀವು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು, ಅವನ ಸುತ್ತಲೂ ನಿಂತು, ನಿಮ್ಮ ಗುಂಪಿನಲ್ಲಿ ನುಗ್ಗುವಂಥವನನ್ನು ಸಂಹರಿಸಬೇಕು. ಅರಸನು ಹೊರಗೆ ಹೋಗಿ ಬರುವಾಗಲೆಲ್ಲಾ ನೀವು ಅವನ ಜೊತೆಯಲ್ಲೇ ಇರಬೇಕು; ಇದು ನನ್ನ ಅಪ್ಪಣೆ,” ಎಂದು ಹೇಳಿದನು.


ದಹನಬಲಿಯನ್ನು ಅರ್ಪಿಸಿದ ಕೂಡಲೆ ಯೇಹುವು ಕಾವಲುಗಾರರಿಗೂ ಸೇನಾಪತಿಗಳಿಗೂ, “ಒಳಗೆ ಹೋಗಿ ಅವರನ್ನೆಲ್ಲಾ ಸಂಹರಿಸಿರಿ; ಒಬ್ಬನೂ ತಪ್ಪಿಸಿಕೊಳ್ಳಕೂಡದು,” ಎಂದು ಹೇಳಿದನು. ಅವರು ಒಳಗೆ ಹೋಗಿ ಅವರನ್ನು ಕತ್ತಿಯಿಂದ ಕೊಂದು ಅವರ ಶವಗಳನ್ನು ಹೊರಗೆ ಹಾಕಿದರು.


ಕೊಲ್ಲಬೇಕೆಂಬ ಉದ್ದೇಶದಿಂದಲೆ ಮತ್ತೊಬ್ಬನನ್ನು ಮೋಸದಿಂದ ಕೊಂದವನನ್ನು ನನ್ನ ಬಲಿಪೀಠದ ಬಳಿಯಿದ್ದರೂ ಎಳೆದು ಅವನಿಗೆ ಮರಣ ದಂಡನೆ ಕೊಡಬೇಕು.”


ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತೂರಿಗಳನ್ನು ಊದುವವರು ಅರಸನ ಹತ್ತಿರವಿದ್ದರು; ಜನಸಾಮಾನ್ಯರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಾ ಜನಪದ ಕೀರ್ತನೆಗಳನ್ನು ನುಡಿಸುತ್ತಿದ್ದರು. ಇದನ್ನು ಕಂಡಕೂಡಲೆ ಆಕೆ ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.


ಅವರು ಆಕೆಯನ್ನು ಹಿಡಿದು ಅರಮನೆಗೆ ಹೋಗುವ ಕುದುರೆಬಾಗಿಲಿನ ತನಕ ಒಯ್ದು, ಅಲ್ಲಿ ಕೊಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು