Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 23:18 - ಕನ್ನಡ ಸತ್ಯವೇದವು C.L. Bible (BSI)

18 ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಸರ್ವೇಶ್ವರನ ಆಲಯದ ಕಾವಲುಗಾರರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಸರ್ವೇಶ್ವರನ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇಮಿಸಿದ್ದ ಉತ್ಸಾಹ ಗಾಯನದೊಡನೆ, ಮೋಶೆಯ ಧರ್ಮಶಾಸ್ತ್ರಾನುಸಾರ ಸರ್ವೇಶ್ವರನಿಗೆ ದಹನಬಲಿ ಸಮರ್ಪಣೆ ಮಾಡುವುದು ಅವರ ಕರ್ತವ್ಯವಾಗಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವನ ಆಲಯದ ಕಾವಲುಗಾರರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಯೆಹೋವನ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇಮಿಸಿದ್ದ ಉತ್ಸಾಹ ಗಾಯನದೊಡನೆ ಮೋಶೆಯ ಧರ್ಮಶಾಸ್ತ್ರಾನುಸಾರ ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆ ಮಾಡುವುದೇ ಅವರ ಕರ್ತವ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವನ ಆಲಯದ ಕಾವಲುಗಾರರನ್ನು ನೇವಿುಸಿದನು. ದಾವೀದನು ಆ ಯಾಜಕರನ್ನು ಯೆಹೋವನ ಆಲಯದ ಸೇವೆಗೋಸ್ಕರ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇವಿುಸಿದ ಉತ್ಸಾಹ ಗಾಯನದೊಡನೆ ಮೋಶೆಯ ಧರ್ಮಶಾಸ್ತ್ರಾನುಸಾರ ಯೆಹೋವನಿಗೆ ಸರ್ವಾಂಗಹೋಮಸಮರ್ಪಣೆ ಮಾಡುವದೇ ಅವರ ಕರ್ತವ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆ ಬಳಿಕ ಯೆಹೋಯಾದನು ದೇವಾಲಯದೊಳಗೆ ಸೇವೆಮಾಡುವ ಜವಾಬ್ದಾರಿಕೆಯನ್ನು ಕೆಲವು ಯಾಜಕರಿಗೆ ವಹಿಸಿದನು. ಅವರೆಲ್ಲಾ ಲೇವಿಯರಾಗಿದ್ದರು. ದಾವೀದನು ಅವರಿಗೆ ದೇವಾಲಯದ ಜವಾಬ್ದಾರಿಕೆಯನ್ನು ಕೊಟ್ಟಿದ್ದನು. ಮೋಶೆಯು ಕೊಟ್ಟಿದ್ದ ನಿಯಮಕ್ಕನುಸಾರವಾಗಿ ಅವರು ಸರ್ವಾಂಗಹೋಮವನ್ನು ಅರ್ಪಿಸಿದರು. ದಾವೀದನು ಆಜ್ಞಾಪಿಸಿದಂತೆ ಅವರು ಹೋಮಗಳನ್ನೂ ಯಜ್ಞಗಳನ್ನೂ ಅರ್ಪಿಸುವಾಗ ಹಾಡುತ್ತಾ ಸಂತೋಷದಿಂದ ತಮ್ಮ ಕೆಲಸವನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಯೆಹೋಯಾದಾವನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವ ದೇವರ ಆಲಯದ ಪರಿಚಾರಕರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಯೆಹೋವ ದೇವರ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ಬೇರ್ಪಡಿಸಿದ್ದನು. ದಾವೀದನಿಂದ ನೇಮಕವಾದ ಪ್ರಕಾರ ಸಂತೋಷದಿಂದ ಹಾಡುತ್ತಾ ಮೋಶೆಯ ನಿಯಮದಲ್ಲಿ ಬರೆದಿರುವಂತೆ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸುವುದು ಅವರ ಕರ್ತವ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 23:18
13 ತಿಳಿವುಗಳ ಹೋಲಿಕೆ  

ಯಾಜಕರಾದ ಲೇವಿಯರು ದೇವದರ್ಶನದ ಗುಡಾರವನ್ನೂ ಅದರಲ್ಲಿದ್ದ ಎಲ್ಲ ಪರಿಶುದ್ಧ ಉಪಕರಣಗಳನ್ನೂ ಹೊತ್ತುಕೊಂಡುಹೋದರು.


ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕಾಗಿ ಲೇವಿಯರನ್ನು ನೇಮಿಸಿದನು. ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿ ನಾತಾನ್ ಇವರ ಆಜ್ಞಾನುಸಾರ ಸರ್ವೇಶ್ವರನ ಆಲಯದಲ್ಲಿ ಈ ಗಾಯಕರನ್ನು ಇರಿಸಿದ್ದನು. ಸರ್ವೇಶ್ವರಸ್ವಾಮಿಯೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದರು.


ಇಸ್ರಯೇಲ್ ದೇವರಾದ ಸರ್ವೇಶ್ವರ, ತಮ್ಮ ಪ್ರಜೆಗೆ ನೆಮ್ಮದಿಯನ್ನು ಅನುಗ್ರಹಿಸಿ, ಸದಾ ಜೆರುಸಲೇಮಿನಲ್ಲಿ ವಾಸಿಸುವವರಾದ ಕಾರಣ,


ಹೀಗೆ ದಹನಬಲಿ ಸಮರ್ಪಣೆ ಪ್ರಾರಂಭಿಸಿದೊಡನೆ ಇಸ್ರಯೇಲ್ ಅರಸ ದಾವೀದನ ವಾದ್ಯಗಳಿಂದ ಸರ್ವೇಶ್ವರನನ್ನು ಭಜಿಸುವುದೂ ತುತೂರಿ ಊದುವುದೂ ಆರಂಭವಾಯಿತು.


ಯಾಜಕರು ಆಗಿದ್ದ ಲೇವಿಯರು ಆಮೇಲೆ ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಸ್ವರ ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆ ಪರಲೋಕದಲ್ಲಿರುವ ಆ ದೇವರ ಪರಿಶುದ್ಧ ನಿವಾಸಕ್ಕೆ ಮುಟ್ಟಿತು.


ಯಾಜಕರೂ ಲೇವಿಯರೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತರು. ದಾವೀದನು ಸರ್ವೇಶ್ವರನ ಗಾಯನಸೇವೆಗಾಗಿ ಮಾಡಿಸಿದ ವಾದ್ಯಗಳು ಈ ಲೇವಿಯರ ಕೈಯಲ್ಲಿ ಇದ್ದವು. ಇವರು ರಾಜಸೇವೆಯಲ್ಲಿದ್ದುಕೊಂಡು ದೇವಾರಾಧನೆ ನಡೆಸುತ್ತಾ, “ಸರ್ವೇಶ್ವರನಿಗೆ ಕೃತಜ್ಞತಾ ಸ್ತುತಿಯನ್ನು ಸಮರ್ಪಿಸಿರಿ; ಅವರ ಅಚಲಪ್ರೀತಿ ಶಾಶ್ವತ” ಎಂಬುದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಇವರ ಎದುರಾಗಿ ನಿಂತು ತುತೂರಿಯೂದುತ್ತಿದ್ದರು. ಇಸ್ರಯೇಲರೆಲ್ಲರೂ ನಿಂತಿದ್ದರು.


ಅರಸ ಹಿಜ್ಕೀಯನೂ ಪದಾಧಿಕಾರಿಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಸರ್ವೇಶ್ವರನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಿದರು. ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.


ಯೋಷೀಯನು ಯಾಜಕರನ್ನು ಅವರವರ ಕೆಲಸಕ್ಕೆ ನೇಮಿಸಿ, ಸರ್ವೇಶ್ವರನ ಸೇವೆಮಾಡುವಂತೆ ಪ್ರೋತ್ಸಾಹಿಸಿದನು.


ಇದಲ್ಲದೆ, ಆಡಂಬರದಿಂದ ಏಳು ದಿವಸಗಳವರೆಗೂ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಿದರು. ಏಕೆಂದರೆ, ಇಸ್ರಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಸ್ಸೀರಿಯದ ಅರಸ, ತಮಗೆ ಸಹಾಯಮಾಡುವಂತೆ ಸರ್ವೇಶ್ವರ ಅವನ ಮನಪರಿವರ್ತಿಸಿ, ಅವರಿಗೆ ಸಂತೋಷವನ್ನು ಉಂಟುಮಾಡಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು