2 ಪೂರ್ವಕಾಲ ವೃತ್ತಾಂತ 23:20 - ಕನ್ನಡ ಸತ್ಯವೇದವು C.L. Bible (BSI)20 ಆಮೇಲೆ ಅವನು ಶತಾಧಿಪತಿಗಳು, ಶ್ರೀಮಂತರು, ಜನನಾಯಕರು ಹಾಗು ಶ್ರೀಸಾಮಾನ್ಯರು ಇವರೊಡನೆ ಅರಸನನ್ನು ಸರ್ವೇಶ್ವರನ ಆಲಯದಿಂದ ಮೇಲಣ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಮೇಲೆ ಅವನು ಶತಾಧಿಪತಿಗಳು, ಶ್ರೀಮಂತರು, ಜನನಾಯಕರು ಹಾಗೂ ಸಾಧಾರಣ ಜನರು ಇವರೊಡನೆ ಅರಸನನ್ನು ಯೆಹೋವನ ಆಲಯದಿಂದ ಮೇಲಣ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆಮೇಲೆ ಅವನು ಶತಾಧಿಪತಿಗಳು ಶ್ರೀಮಂತರು ಜನನಾಯಕರು ಸಾಧಾರಣಜನರು ಇವರೊಡನೆ ಅರಸನನ್ನು ಯೆಹೋವನ ಆಲಯದಿಂದ ಮೇಲಣ ಬಾಗಲಿನ ಮಾರ್ಗವಾಗಿ ಅರಮನೆಗೆ ಕರಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೆಹೋಯಾದನು ಸೇನಾಧಿಪತಿಗಳಿಗೂ ಅಧಿಪತಿಗಳಿಗೂ ಎಲ್ಲಾ ಜನರಿಗೂ ತನ್ನನ್ನು ಹಿಂಬಾಲಿಸುವಂತೆ ಹೇಳಿ, ಅರಸನನ್ನು ದೇವಾಲಯದೊಳಗಿಂದ ಹೊರತಂದನು. ಅವರೆಲ್ಲಾ ಮೇಲಿನ ಬಾಗಿಲಿನ ಮೂಲಕ ರಾಜನಿವಾಸಕ್ಕೆ ಹೋದರು. ಅಲ್ಲಿ ರಾಜನನ್ನು ಸಿಂಹಾಸನದಲ್ಲಿ ಕುಳ್ಳಿರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವನು ಶತಾಧಿಪತಿಗಳನ್ನೂ, ಗೌರವಸ್ಥರನ್ನೂ, ಜನರ ಅಧಿಪತಿಗಳನ್ನೂ, ದೇಶದ ಜನರೆಲ್ಲರನ್ನೂ ಕರೆದುಕೊಂಡು ಹೋಗಿ, ಅರಸನನ್ನು ಯೆಹೋವ ದೇವರ ಆಲಯದಿಂದ ಕರೆತಂದನು. ಅವರು ಹೆಬ್ಬಾಗಿಲಿನಿಂದ ಅರಮನೆಗೆ ಬಂದು, ಅರಸನನ್ನು ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದರು. ಅಧ್ಯಾಯವನ್ನು ನೋಡಿ |