Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:16 - ಕನ್ನಡ ಸತ್ಯವೇದವು C.L. Bible (BSI)

16 ಅವನು ಇಸ್ರಯೇಲರ ವಿಷಯದಲ್ಲೂ ದೇವರ ಮತ್ತು ದೇವಾಲಯದ ವಿಷಯದಲ್ಲೂ ಹಲವಾರು ಸತ್ಕಾರ್ಯಗಳನ್ನು ಮಾಡಿದ್ದರಿಂದ ಅವನ ಶವವನ್ನು ದಾವೀದ ನಗರದೊಳಗೆ ರಾಜಸ್ಮಶಾನದಲ್ಲಿ ಸಮಾಧಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವನು ಇಸ್ರಾಯೇಲರ ಕುರಿತಾಗಿಯೂ ದೇವರ ಮತ್ತು ದೇವಾಲಯದ ವಿಷಯದಲ್ಲಿಯೂ ಸತ್ಕಾರ್ಯಗಳನ್ನು ಮಾಡಿದ್ದರಿಂದ ಅವನ ಶವವನ್ನು ದಾವೀದನಗರದೊಳಗೆ ರಾಜಸ್ಮಶಾನದಲ್ಲಿ ಸಮಾಧಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವನು ಇಸ್ರಾಯೇಲ್ಯರ ವಿಷಯದಲ್ಲಿಯೂ ದೇವರ ಮತ್ತು ದೇವಾಲಯದ ವಿಷಯದಲ್ಲಿಯೂ ಸತ್ಕಾರ್ಯಮಾಡಿದ್ದರಿಂದ ಅವನ ಶವವನ್ನು ದಾವೀದನಗರದೊಳಗೆ ರಾಜಶ್ಮಶಾನದಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅವನ ದೇಹವನ್ನು ದಾವೀದ ನಗರದಲ್ಲಿ ಅರಸುಗಳ ಸಮಾಧಿಯ ಬಳಿಯಲ್ಲಿ ಸಮಾಧಿ ಮಾಡಿದರು. ಯಾಕೆಂದರೆ ಅವನು ಜೀವಂತನಾಗಿದ್ದಾಗ ಇಸ್ರೇಲಿನ ದೇವರಿಗೂ ಆತನ ಆಲಯಕ್ಕೂ ಒಳ್ಳೆಯದನ್ನೇ ಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವನು ದೇವರಿಗೋಸ್ಕರವಾಗಿಯೂ, ಆತನ ಆಲಯಕ್ಕೋಸ್ಕರವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೆಯದನ್ನು ಮಾಡಿದ್ದರಿಂದ, ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅರಸರ ಬಳಿಯಲ್ಲಿ ಹೂಳಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:16
13 ತಿಳಿವುಗಳ ಹೋಲಿಕೆ  

ನೀವು ದೇವಜನರಿಗೆ ಉಪಚಾರಮಾಡಿದ್ದೀರಿ, ಮಾಡುತ್ತಲೂ ಇದ್ದೀರಿ. ದೇವರ ಹೆಸರಿನಲ್ಲಿ ನೀವು ಮಾಡಿದ ಪ್ರೀತಿಪೂರ್ವಕವಾದ ಸೇವೆಯನ್ನು ದೇವರು ಮರೆಯುವಂತಿಲ್ಲ, ಅವರು ಅನ್ಯಾಯ ಮಾಡುವವರೇನೂ ಅಲ್ಲ.


ಹಿಜ್ಕೀಯನು ಜುದೇಯದಲ್ಲೆಲ್ಲಾ ಇದೇ ವ್ಯವಸ್ಥೆಯನ್ನು ಮಾಡಿದನು. ಅವನು ತನ್ನ ದೇವರಾದ ಸರ್ವೇಶ್ವರನಿಗೆ ಒಳ್ಳೆಯವನು, ನೀತಿವಂತನು ಹಾಗು ನಂಬಿಗಸ್ತನು ಆಗಿ ನಡೆದನು.


ಅನಂತರ ದಾವೀದನು ಮರಣಹೊಂದಿ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿ ಮಾಡಿದರು.


“ಪ್ರಿಯ ಸಹೋದರರೇ, ಪಿತಾಮಹ ದಾವೀದರಸನ ವಿಷಯದಲ್ಲಿ ನಾನು ನಿಮಗೆ ಸ್ಪಷ್ಟವಾಗಿ ಮಾತನಾಡಬೇಕಾಗಿದೆ. ಆತನು ಮೃತನಾದನು; ಆತನನ್ನು ಸಮಾಧಿಮಾಡಲಾಯಿತು. ನಿಮಗೆಲ್ಲರಿಗೆ ತಿಳಿದಿರುವಂತೆ ಆತನ ಸಮಾಧಿ ನಮ್ಮ ಮಧ್ಯೆ ಇಂದಿನವರೆಗೂ ಇದೆ.


ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ಸ್ಮರಿಸಿಕೊಳ್ಳಿ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು ನಿಮ್ಮ ನೆನಪಿನಿಂದ ಅಳಿಸಿಬಿಡಬೇಡಿ.


ನಿನ್ನ ಗೋತ್ರದವರೂ ಸಂತಾನದವರೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಯೇಲರ ದೇವರಾದ ಸರ್ವೇಶ್ವರನೆಂಬ ನಾನು ಈಗ ತಿಳಿಸುವುದನ್ನು ಕೇಳು: ಇನ್ನು ಇದೆಲ್ಲ ನನ್ನಿಂದ ದೂರ ತೊಲಗಲಿ; ನನ್ನನ್ನು ಸನ್ಮಾನಿಸುವವನನ್ನು ನಾನು ಸನ್ಮಾನಿಸುವೆನು; ನನ್ನನ್ನು ಉಪೇಕ್ಷಿಸುವವನನ್ನು ನಾನು ತಿರಸ್ಕರಿಸುವೆನು.


ಇವನಿಗೆ ಅಜರ್ಯ, ಯೆಹೀಯೇಲ್, ಜೆಕರ್ಯ, ಅಜರ್ಯ, ಮೀಕಾಯೇಲ್, ಶೆಫಟ್ಯ ಎಂಬ ತಮ್ಮಂದಿರಿದ್ದರು. ಇವರೆಲ್ಲರು ಯೆಹೂದ್ಯರ ಅರಸ ಯೆಹೋಷಾಫಾಟನ ಮಕ್ಕಳು.


ಅವನು ಪಟ್ಟಕ್ಕೆ ಬಂದಾಗ ಮೂವತ್ತ ಎರಡು ವರ್ಷದವನಾಗಿದ್ದನು. ಜೆರುಸಲೇಮಿನಲ್ಲಿ ಎಂಟುವರ್ಷ ಆಳಿದನು. ಅವನು ತೀರಿಹೋದಾಗ ಯಾರೂ ಶೋಕಿಸಲಿಲ್ಲ. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು; ಆದರೆ ರಾಜಸ್ಮಶಾನದಲ್ಲಿ ಮಾಡಲಿಲ್ಲ.


ಅವನು ಮುಪ್ಪಿನ ಮುದುಕನಾಗಿ ಮರಣಹೊಂದಿದನು. ಸಾಯುವಾಗ ಅವನಿಗೆ ನೂರಮೂವತ್ತು ವರ್ಷವಾಗಿತ್ತು.


ಯೆಹೋಯಾದನು ಮೃತನಾದ ಮೇಲೆ, ಜುದೇಯದ ಪದಾಧಿಕಾರಿಗಳು ಅರಸ ಯೆಹೋವಾಷನ ಬಳಿಗೆ ಬಂದು, ಅವನಿಗೆ ಅಡ್ಡಬಿದ್ದು ಅವನನ್ನು ಒಲಿಸಿಕೊಂಡರು.


ಆದುದರಿಂದ ಅವನು ಯೆಹೋಯಾದಾವ ಮೊದಲಾದ ಯಾಜಕರನ್ನು ಕರೆದು, “ನೀವು ಈವರೆಗೂ ದೇವಾಲಯವನ್ನೇಕೆ ದುರಸ್ತು ಮಾಡಲಿಲ್ಲ? ಇನ್ನು ಮುಂದೆ ನಿಮ್ಮ ಪರಿಚಿತರು ತಂದುಕೊಡುವ ಹಣವನ್ನು ನಿಮ್ಮ ಕೈಯಲ್ಲಿಟ್ಟುಕೊಳ್ಳದೆ. ಕೂಡಲೆ ಅದನ್ನು ದೇವಾಲಯದ ದುರಸ್ತಿಗಾಗಿ ಕೊಡಿ,” ಎಂದು ಹೇಳಿದನು.


ಇದನ್ನು ಕೇಳಿದ ಯೊವಾನ್ನನ ಶಿಷ್ಯರು ಅಲ್ಲಿಗೆ ಬಂದು ಶವವನ್ನು ತೆಗೆದುಕೊಂಡು ಹೋಗಿ ಸಮಾಧಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು