2 ಪೂರ್ವಕಾಲ ವೃತ್ತಾಂತ 24:18 - ಕನ್ನಡ ಸತ್ಯವೇದವು C.L. Bible (BSI)18 ಅಂದಿನಿಂದ ಅವರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನ ಆಲಯವನ್ನು ನಿರಾಕರಿಸಿ, ಅಶೇರ ಸ್ತಂಭಗಳನ್ನೂ ವಿಗ್ರಹಗಳನ್ನೂ ಪೂಜಿಸ ತೊಡಗಿದರು. ಅವರ ಈ ಅಪರಾಧದಿಂದ ಜುದೇಯದ ಮೇಲೂ ಜೆರುಸಲೇಮಿನ ಮೇಲೂ ದೈವಕೋಪ ಎರಗಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅಂದಿನಿಂದ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಆಲಯವನ್ನು ನಿರಾಕರಿಸಿ, ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಪೂಜಿಸುವವರಾದರು. ಅವರ ಈ ಅಪರಾಧದ ದೆಸೆಯಿಂದ ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಯೆಹೋವನಿಗೆ ಕೋಪವುಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅಂದಿನಿಂದ ಅವರು ತಮ್ಮ ಪಿತೃಗಳ ದೇವರಾದ ಯೆಹೋವನ ಆಲಯವನ್ನು ನಿರಾಕರಿಸಿ ಅಶೇರಸ್ತಂಭಗಳನ್ನೂ ವಿಗ್ರಹಗಳನ್ನೂ ಪೂಜಿಸುವವರಾದರು. ಅವರ ಈ ಅಪರಾಧದ ದೆಸೆಯಿಂದ ಯೆಹೂದದ ಮೇಲೆಯೂ ಯೆರೂಸಲೇವಿುನ ಮೇಲೆಯೂ ದೇವಕೋಪವುಂಟಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅರಸನೂ ಆ ನಾಯಕರುಗಳೂ ದೇವಾಲಯವನ್ನು ನಿರಾಕರಿಸಿ ಅಶೇರ ಸ್ತಂಭಗಳನ್ನೂ ಇತರ ವಿಗ್ರಹಗಳನ್ನೂ ಆರಾಧಿಸಿದರು. ಯೆಹೋವನು ಜೆರುಸಲೇಮಿನ ಮತ್ತು ಯೆಹೂದದ ಜನರ ಮೇಲೆ ಕೋಪಗೊಂಡನು. ಯಾಕೆಂದರೆ ಅರಸನೂ ಆ ನಾಯಕರುಗಳೂ ಯೆಹೋವನ ಮುಂದೆ ದೋಷಿಗಳಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರ ಆಲಯವನ್ನು ಬಿಟ್ಟು, ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ದೇವರ ಕೋಪಾಗ್ನಿಯು ಬಂತು. ಅಧ್ಯಾಯವನ್ನು ನೋಡಿ |