Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:19 - ಕನ್ನಡ ಸತ್ಯವೇದವು C.L. Bible (BSI)

19 ಸರ್ವೇಶ್ವರ ಅವರನ್ನು ತಮ್ಮ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಇವರ ಮುಖಾಂತರ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೋವನು ಅವರನ್ನು ತನ್ನ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಅವರ ಮುಖಾಂತರವಾಗಿ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆಹೋವನು ಅವರನ್ನು ತನ್ನ ಕಡೆಗೆ ತಿರುಗಿಸಿಕೊಳ್ಳುವದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿ ಇವರ ಮುಖಾಂತರ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆತನು ಅವರನ್ನು ತನ್ನ ಕಡೆಗೆ ತಿರುಗಿಕೊಳ್ಳುವಂತೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು. ಪ್ರವಾದಿಗಳು ಜನರನ್ನು ಎಚ್ಚರಿಸಿದರೂ ಅವರ ಮಾತುಗಳಿಗೆ ಅವರು ಗಮನಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೂ ಯೆಹೋವ ದೇವರು ತನ್ನ ಕಡೆಗೆ ಅವರನ್ನು ತಿರುಗಿಸುವುದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು. ಇವರು ಅವರಿಗೆ ಸಾಕ್ಷಿಗಾಗಿ ಮಾತನಾಡಿದರು. ಆದರೂ ಅವರು ಕಿವಿಗೊಡದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:19
23 ತಿಳಿವುಗಳ ಹೋಲಿಕೆ  

ಅದಕ್ಕೆ ಅಬ್ರಹಾಮನು, ‘ಮೋಶೆಗೂ ಪ್ರವಾದಿಗಳಿಗೂ ಅವರು ಕಿವಿಗೊಡದಿದ್ದರೆ, ಸತ್ತವನು ಜೀವಂತನಾಗಿ ಎದ್ದುಬಂದರೂ ಅವರು ನಂಬುವುದಿಲ್ಲ,’ ಎಂದ.”


ಕೇಳಲು ಕಿವಿಯುಳ್ಳವನು ಕೇಳಿಸಿಕೊಳ್ಳಲಿ,” ಎಂದು ಒತ್ತಿ ಹೇಳಿದರು.


ಹಾಗು ನೀವು ಕೇಳದಿದ್ದರೂ ನಿಮ್ಮ ಬಳಿಗೆ ನಾನು ಪದೇಪದೇ ಕಳಿಸುತ್ತಾ ಬಂದಿರುವ ನನ್ನ ದಾಸರಾದ ಪ್ರವಾದಿಗಳ ಮಾತುಗಳನ್ನೂ ಆಲಿಸದೆಹೋದರೆ,


ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


ಆಲಿಸಿರಿ ನನ್ನ ಜನರೆ, ಕಿವಿಗೊಡಿ ನನ್ನ ಪ್ರಜೆಗಳೆ : ಧರ್ಮೋಪದೇಶ ಹೊರಡುವುದು ರಾಷ್ಟ್ರಗಳಿಗೆ ನನ್ನಿಂದಲೆ; ಬೆಳಗುವುದು ಜಗಜ್ಯೋತಿಯಾಗಿ ನನ್ನ ನ್ಯಾಯಬೋಧೆ.


ಈ ಮಾತಿಗೆ ನಿಮ್ಮಲ್ಲಿ ಕಿವಿಗೊಡುವವರಾರು? ಮುಂದಕ್ಕಾದರೂ ಕಿವಿಗೊಟ್ಟು ಆಲಿಸುವವರಾರು?


ನನ್ನ ಮಾತಿಗೆ ಕಿವಿಗೊಡಿ, ನಾನು ಹೇಳುವುದನ್ನು ಗಮನವಿಟ್ಟು ಆಲಿಸಿ.


ಬಳಿಕ ಅವಿಧೇಯರಾದರು, ನಿಮಗೆ ವಿರುದ್ಧ ದಂಗೆ ಎದ್ದರು; ನಿಮ್ಮ ಉಪದೇಶವನು ಉಲ್ಲಂಘಿಸಿದರು, ನಿಮ್ಮ ಪ್ರವಾದಿಗಳನು ಕೊಂದರು; ಹೌದು, ನಿಮಗೆ ಅಭಿಮುಖರಾಗಲು ಎಚ್ಚರಿಸಿದವರನೆ ಕೊಂದರು. ಕಡೆಗೆ ನಿಮ್ಮನ್ನೇ ಅಸಡ್ಡೆಮಾಡಿ, ಘೋರ ಅಪರಾಧಿಗಳಾದರು.


ನಿಮ್ಮ ಪಿತೃಗಳಂತೆ ಆಗಬೇಡಿ. ಅವರಿಗೆ ಪೂರ್ವಕಾಲದ ಪ್ರವಾದಿಗಳು, ‘ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ನಿಮ್ಮ ದುರ್ಮಾರ್ಗಗಳನ್ನೂ ದುಷ್ಕೃತ್ಯಗಳನ್ನೂ ಬಿಟ್ಟು ಹಿಂದಿರುಗಿ’ ಎಂದು ಸಾರಿದರು. ಆದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ.


ಇದಲ್ಲದೆ, ನೆಬೂಕದ್ನೆಚ್ಚರನಿಗೆ ಒಳಗಾಗುತ್ತೇನೆಂದು, ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದ್ದರೂ, ಅವನಿಗೆ ವಿರುದ್ಧ ದಂಗೆ ಎದ್ದನು. ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಅಭಿಮುಖನಾಗಲೊಲ್ಲದೆ, ಹಟಹಿಡಿದು ಮನಸ್ಸನ್ನು ಕಠಿಣಮಾಡಿಕೊಂಡನು.


ತಾಳಿಕೊಂಡಿರಿ ಅವರನು ನೀವೆಷ್ಟೋ ವರ್ಷಗಳ ತನಕ ಎಚ್ಚರಿಸಿದಿರಿ ನಿಮ್ಮಾತ್ಮ ಪ್ರೇರಣೆಯಿಂದ, ಪ್ರವಾದಿಗಳ ಮೂಲಕ ಕಿವಿಗೊಡದಾ ಜನರನು ಹೊರದೂಡಿದಿರಿ ಅನ್ಯದೇಶದ ಪರಿಯಂತ.


“ಆಮೋನನ ಮಗನೂ ಜುದೇಯದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೇ ವರ್ಷದಿಂದ ಈ ದಿನದವರೆಗೆ, ಅಂದರೆ ಕಳೆದ ಇಪ್ಪತ್ತು ಮೂರು ವರ್ಷಗಳಿಂದ ಸರ್ವೇಶ್ವರ ಸ್ವಾಮಿ ತಮ್ಮ ವಾಕ್ಯವನ್ನು ನನಗೆ ತಿಳಿಸಿದ್ದಾರೆ. ಅದನ್ನು ನಾನು ನಿಮಗೆ ತಡಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ. ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.


ಆದರೆ ಸರ್ವೇಶ್ವರ ಸ್ವಾಮಿಯೇ ಹೇಳುವಂತೆ ನೀವು ಅವರಿಗೆ ಕಿವಿಗೊಡದೆ ನಿಮ್ಮ ಕೈಕೃತಿಗಳಾದ ವಿಗ್ರಹಗಳಿಂದ ಅವರನ್ನು ಕೆಣಕಿ ನಿಮಗೇ ಕೇಡನ್ನು ತಂದುಕೊಂಡಿದ್ದೀರಿ.


“ಆದುದರಿಂದ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಈ ನುಡಿಯನ್ನು ಕೇಳಿರಿ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು