Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:21 - ಕನ್ನಡ ಸತ್ಯವೇದವು C.L. Bible (BSI)

21 ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ,ಸರ್ವೇಶ್ವರನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಯೆಹೋವನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸನಾದ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಯೆಹೋವನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸನಾದ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದರೆ ಅವರು ಜೆಕರ್ಯನ ವಿರೋಧವಾಗಿ ಒಳಸಂಚು ಮಾಡಿದರು. ಅವನನ್ನು ಕೊಲ್ಲಲು ಅರಸನು ಅವರಿಗೆ ಆಜ್ಞಾಪಿಸಿದನು. ಆಗ ಅವರು ಅವನನ್ನು ದೇವಾಲಯದ ಅಂಗಳದಲ್ಲಿಯೇ ಕಲ್ಲೆಸೆದು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದ್ದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಯೆಹೋವ ದೇವರ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:21
16 ತಿಳಿವುಗಳ ಹೋಲಿಕೆ  

ಬಳಿಕ ಅವಿಧೇಯರಾದರು, ನಿಮಗೆ ವಿರುದ್ಧ ದಂಗೆ ಎದ್ದರು; ನಿಮ್ಮ ಉಪದೇಶವನು ಉಲ್ಲಂಘಿಸಿದರು, ನಿಮ್ಮ ಪ್ರವಾದಿಗಳನು ಕೊಂದರು; ಹೌದು, ನಿಮಗೆ ಅಭಿಮುಖರಾಗಲು ಎಚ್ಚರಿಸಿದವರನೆ ಕೊಂದರು. ಕಡೆಗೆ ನಿಮ್ಮನ್ನೇ ಅಸಡ್ಡೆಮಾಡಿ, ಘೋರ ಅಪರಾಧಿಗಳಾದರು.


ಇವರು ಆ ಆಳುಗಳ ಮೇಲೆ ಬಿದ್ದು ಒಬ್ಬನನ್ನು ಬಡಿದರು, ಇನ್ನೊಬ್ಬನನ್ನು ಕಡಿದರು, ಮತ್ತೊಬ್ಬನ ಮೇಲೆ ಕಲ್ಲು ತೂರಿದರು.


ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು.


ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಯಂತೆ ಇದ್ದೆ. “ಮರವನ್ನು ಫಲಸಹಿತ ನಾಶಪಡಿಸೋಣ, ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ. ಅವನ ಹೆಸರೇ ಇಲ್ಲದಂತಾಗಲಿ,” ಎಂದು ಅವರು ಕುಯುಕ್ತಿ ಕಲ್ಪಿಸಿದ್ದರು. ಆದರೆ ನನಗೆ ಅದು ತಿಳಿದಿರಲಿಲ್ಲ.


ಮತ್ತೆ ಕೆಲವರನ್ನು ಜನರು ಕಲ್ಲೆಸೆದು ಕೊಂದರು; ಗರಗಸದಿಂದ ಸೀಳಿ ಸಾಯಿಸಿದರು; ಖಡ್ಗದಿಂದ ಕಡಿದುಹಾಕಿದರು. ಇನ್ನೂ ಕೆಲವರು ನಿರ್ಗತಿಕರಾಗಿ ಕುರಿಮೇಕೆಗಳ ಚರ್ಮಗಳನ್ನು ಹೊದ್ದುಕೊಂಡು ಅಲೆದಾಡಿದರು. ಬಡತನಕ್ಕೂ ಹಿಂಸೆಬಾಧೆಗಳಿಗೂ ಕಷ್ಟಸಂಕಟಗಳಿಗೂ ಈಡಾದರು;


ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತರು. ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬುದಾಗಿ ಜನರ ಎದುರಿನಲ್ಲೆ ಅವನಿಗೆ ವಿರುದ್ಧ ಸಾಕ್ಷಿಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.


ಅವನು ಪ್ರವಾದಿ ಯೆರೆಮೀಯನನ್ನು ಹೊಡೆಯಿಸಿ ಸರ್ವೇಶ್ವರನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲ ಬಳಿಯಲ್ಲಿದ್ದ ಸೆರೆಗೆ ಹಾಕಿಸಿದನು.


“ನೀನು ನನ್ನ ದೇವಾಲಯದ ಪ್ರಾಕಾರದಲ್ಲಿ ನಿಂತು, ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಜುದೇಯದ ಎಲ್ಲ ಊರಿನವರಿಗೆ ನಾನು ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದನ್ನೂ ಬಿಡಬೇಡ.


ಅರಸ ಯೆಹೋಯಾಕೀಮನು ಮತ್ತು ಅವನ ಎಲ್ಲ ವೀರಶೂರರು ಹಾಗು ನಾಯಕರು ಆ ಊರೀಯನ ಮಾತುಗಳನ್ನು ಕೇಳಿಸಿಕೊಂಡರು. ಕೂಡಲೆ ಅರಸ ಅವನನ್ನು ಕೊಂದುಹಾಕಲು ಮನಸ್ಸುಮಾಡಿದ. ಈ ಸುದ್ದಿಯನ್ನು ಕೇಳಿದ ಊರೀಯ ಭಯಪಟ್ಟು ಓಡಿಹೋಗಿ ಈಜಿಪ್ಟನ್ನು ಸೇರಿಕೊಂಡ.


ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನಾನು ಆಲೋಚನಾಮಂತ್ರಿಯನ್ನಾಗಿ ನೇಮಿಸಲಿಲ್ಲ; ಬಾಯಿಮುಚ್ಚುವಿಯೋ: ಅಥವಾ ಏಟು ತಿನ್ನುವಿಯೋ?’ ಎಂದನು. ಅದಕ್ಕೆ ಅವನು, “ನೀವು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುವುದರಿಂದ ದೇವರು ನಿಮ್ಮನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾರೆಂದು ನಾನು ಬಲ್ಲೆ,” ಎಂದು ಹೇಳಿ ಸುಮ್ಮನಾದನು.


ಹೊಂಚುಹಾಕುವರವರು ನೀತಿವಂತರ ಪ್ರಾಣಕೆ I ಮರಣಶಿಕ್ಷೆ ವಿಧಿಸುವರವರು ನಿರಪರಾಧಿಗಳಿಗೆ II


ಕಂಡ ದೋಷವನ್ನು ಮಂಟಪದಲ್ಲಿ ಖಂಡಿಸುವವನನ್ನು ನೀವು ಹಗೆಮಾಡುತ್ತೀರಿ; ನ್ಯಾಯವಾದಿಗಳ ಮೇಲೆ ದ್ವೇಷ ಸಾಧಿಸುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು