2 ಪೂರ್ವಕಾಲ ವೃತ್ತಾಂತ 24:22 - ಕನ್ನಡ ಸತ್ಯವೇದವು C.L. Bible (BSI)22 ಜೆಕರ್ಯನ ತಂದೆ ಯೆಹೋಯಾದನಿಂದ ತನಗಾದ ಉಪಕಾರವನ್ನು ನೆನಪುಮಾಡಿಕೊಳ್ಳದೆ ಈ ಯೆಹೋವಾಷನು ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ, “ಸರ್ವೇಶ್ವರಸ್ವಾಮಿಯೇ ಇದನ್ನು ನೋಡಿ ತಕ್ಕ ಶಾಸ್ತಿಮಾಡಲಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೆಹೋವಾಷನು ಜೆಕರೀಯನ ತಂದೆಯಾದ ಯೆಹೋಯಾದನಿಂದ ತನಗಾದ ಕೃಪೆಯನ್ನು ಮರೆತು ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ, “ಯೆಹೋವನೇ ಇದನ್ನು ನೋಡಿ, ತಕ್ಕ ಶಿಕ್ಷೆಯನ್ನು ವಿಧಿಸಲಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಇವನು ಜೆಕರೀಯನ ತಂದೆಯಾದ ಯೆಹೋಯಾದನಿಂದ ತನಗುಂಟಾದ ಕೃಪೆಯನ್ನು ನೆನಪುಮಾಡಿಕೊಳ್ಳದೆ ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ - ಯೆಹೋವನೇ ನೋಡಿ ವಿಚಾರಿಸಲಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೆಹೋವಾಷನು ಯೆಹೋಯಾದನ ಉಪಕಾರವನ್ನು ನೆನಸಲಿಲ್ಲ. ಯೆಹೋಯಾದನು ಜೆಕರ್ಯನ ತಂದೆ. ಯೆಹೋಯಾದನ ಮಗನನ್ನು ಯೆಹೋವಾಷನು ಕೊಂದನು. ಜೆಕರ್ಯನು ಸಾಯುವಾಗ, ಹೇಳಿದ್ದೇನೆಂದರೆ, “ನೀನು ಮಾಡುತ್ತಿರುವದನ್ನು ಯೆಹೋವನೇ ನೋಡಿ ನ್ಯಾಯ ತೀರಿಸಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಹಾಗೆಯೇ ಅರಸನಾದ ಯೋವಾಷನು, ಇವನ ತಂದೆಯಾದ ಯೆಹೋಯಾದಾವನು ತನಗೆ ತೋರಿಸಿದ ದಯೆಯನ್ನು ಜ್ಞಾಪಕಮಾಡದೆ ಅವನ ಮಗನನ್ನು ಕೊಂದುಹಾಕಿದನು. ಜೆಕರ್ಯನು ಸಾಯುವಾಗ, “ಯೆಹೋವ ದೇವರು ನೋಡಿ ವಿಚಾರಿಸಲಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |