2 ಪೂರ್ವಕಾಲ ವೃತ್ತಾಂತ 24:24 - ಕನ್ನಡ ಸತ್ಯವೇದವು C.L. Bible (BSI)24 ಸಿರಿಯಾದ ಸೈನ್ಯದಿಂದ ಬಂದ ಗುಂಪು ಚಿಕ್ಕದಾಗಿದ್ದರೂ ಯೆಹೂದ್ಯರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನನ್ನು ಬಿಟ್ಟುಬಿಟ್ಟದ್ದರಿಂದ ಶಿಕ್ಷೆಗೆ ಗುರಿಯಾದರು. ತಮ್ಮದು ಮಹಾಸೈನ್ಯವಾಗಿದ್ದರೂ ಸಿರಿಯಾದವರ ಕೈಯಲ್ಲಿ ಸೋಲನ್ನು ಅನುಭವಿಸಿದರು; ಯೆಹೋವಾಷನಿಗೆ ದಂಡನೆಯಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅರಾಮ್ಯ ಸೈನ್ಯದಿಂದ ಬಂದ ಗುಂಪು ಚಿಕ್ಕದಾಗಿದ್ದರೂ ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿದ್ದರಿಂದ ಮಹಾಸೈನ್ಯವಾಗಿದ್ದ ಅವರನ್ನು ಯೆಹೋವನು ಅರಾಮ್ಯರ ಕೈಯಲ್ಲಿ ಸೋಲುವಂತೆ ಮಾಡಿ, ಯೆಹೋವಾಷನನ್ನು ಅವರ ಮುಖಾಂತರ ಶಿಕ್ಷಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅರಾಮ್ಯರ ಸೈನ್ಯದಿಂದ ಬಂದು ಗುಂಪು ಚಿಕ್ಕದಾಗಿದ್ದರೂ ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಯೆಹೋವನನ್ನು ಬಿಟ್ಟುಬಿಟ್ಟದ್ದರಿಂದ ಮಹಾಸೈನ್ಯವಾಗಿದ್ದ ಅವರನ್ನು ಆತನು ಅರಾಮ್ಯರ ಕೈಯಲ್ಲಿ ಬೀಳುವಂತೆ ಮಾಡಿ ಯೆಹೋವಾಷನನ್ನು ಇವರ ಮುಖಾಂತರ ಶಿಕ್ಷಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಅರಾಮ್ಯರ ಸೈನ್ಯವು ಸ್ವಲ್ಪ ಮಂದಿಯಿಂದ ಕೂಡಿದ್ದರೂ ಯೆಹೂದದ ದೊಡ್ಡ ಸೈನ್ಯವನ್ನು ಸೋಲಿಸಿಬಿಟ್ಟಿತು. ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತೊರೆದುದರಿಂದ ದೇವರಾದ ಯೆಹೋವನು ಹಾಗೆ ಮಾಡಿದನು. ಈ ರೀತಿಯಾಗಿ ಯೆಹೋವಾಷನು ಶಿಕ್ಷಿಸಲ್ಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ ಅರಾಮ್ಯರು ಚಿಕ್ಕ ಗುಂಪಿನ ಸೈನ್ಯದ ಸಂಗಡ ಬಂದಿದ್ದರೂ, ಯೆಹೋವ ದೇವರು ಅವರ ಮಹಾ ಸೈನ್ಯವನ್ನು ಶತ್ರುಗಳ ಕೈಯಲ್ಲಿ ಒಪ್ಪಿಸಿದನು. ಹೀಗೆಯೇ ಯೆಹೋವ ದೇವರು ಯೋವಾಷನಿಗೆ ವಿರೋಧವಾಗಿ ತೀರ್ಪು ಮಾಡಿದರು. ಅಧ್ಯಾಯವನ್ನು ನೋಡಿ |