Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:16 - ಕನ್ನಡ ಸತ್ಯವೇದವು C.L. Bible (BSI)

16 ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನಾನು ಆಲೋಚನಾಮಂತ್ರಿಯನ್ನಾಗಿ ನೇಮಿಸಲಿಲ್ಲ; ಬಾಯಿಮುಚ್ಚುವಿಯೋ: ಅಥವಾ ಏಟು ತಿನ್ನುವಿಯೋ?’ ಎಂದನು. ಅದಕ್ಕೆ ಅವನು, “ನೀವು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುವುದರಿಂದ ದೇವರು ನಿಮ್ಮನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾರೆಂದು ನಾನು ಬಲ್ಲೆ,” ಎಂದು ಹೇಳಿ ಸುಮ್ಮನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನನಗೆ ಆಲೋಚನಾಮಂತ್ರಿಯನ್ನಾಗಿ ನೇಮಿಸಿದವರು ಯಾರು?; ಸುಮ್ಮನಿರು, ನಿನಗೆ ಪೆಟ್ಟು ಬೇಕೋ?” ಎಂದನು. ಅವನು, “ನೀನು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುತ್ತಿರುವುದರಿಂದ ದೇವರು ನಿನ್ನನ್ನು ನಾಶ ಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆ ಎಂಬುದನ್ನು ನಾನು ಬಲ್ಲೆ” ಎಂದು ಹೇಳಿ ಸುಮ್ಮನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು - ನಿನ್ನನ್ನು ರಾಜಮಂತ್ರಿಯನ್ನಾಗಿ ನೇವಿುಸಿದ್ದೇವೋ? ಸುಮ್ಮನಿರು, ನಿನಗೆ ಪೆಟ್ಟು ಬೇಕೋ ಅನ್ನಲು ಅವನು - ನೀನು ನನ್ನ ಬುದ್ಧಿವಾದವನ್ನು ಲಾಲಿಸದೆ ಹೀಗೆ ಮಾಡುವದರಿಂದ ದೇವರು ನಿನ್ನನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆಂಬದಾಗಿ ನನಗೆ ತಿಳಿಯಬಂತು ಎಂದು ಹೇಳಿ ಸುಮ್ಮನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆ ಪ್ರವಾದಿಯು ಈ ಮಾತುಗಳನ್ನು ಹೇಳಿದಾಗ ಅಮಚ್ಯನು, “ನಾವು ನಿನ್ನನ್ನು ಅರಸನ ಸಲಹೆಗಾರನನ್ನಾಗಿ ಮಾಡಲಿಲ್ಲವಲ್ಲಾ. ಆದ್ದರಿಂದ ಬಾಯಿಮುಚ್ಚಿಕೊಂಡು ಸುಮ್ಮನಿರು. ಇಲ್ಲದಿದ್ದರೆ ನೀನು ಸಾಯುವೆ” ಅಂದನು. ಆದರೆ ಅವನು, “ದೇವರು ನಿನ್ನನ್ನು ನಾಶಮಾಡಲು ನಿರ್ಧರಿಸಿದ್ದಾನೆ; ಯಾಕೆಂದರೆ ನೀನು ನನ್ನ ಸಲಹೆಯನ್ನು ಕೇಳದೆ ದುಷ್ಟತನ ಮಾಡುತ್ತಿರುವೆ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಪ್ರವಾದಿಯು ಅರಸನ ಸಂಗಡ ಮಾತನಾಡುತ್ತಿರುವಾಗಲೇ ಅರಸನು ಅವನಿಗೆ, “ಅರಸನ ಆಲೋಚನಾ ಮಂತ್ರಿಯನ್ನಾಗಿ ನಿನ್ನನ್ನು ನೇಮಿಸಿದವರು ಯಾರು? ಸುಮ್ಮನಿರು! ನೀನು ಏಕೆ ಮರಣಹೊಂದಬೇಕೆಂದಿರುವೆ?” ಎಂದನು. ಆಗ ಪ್ರವಾದಿಯು, “ನೀನು ನನ್ನ ಯೋಚನೆಯನ್ನು ಕೇಳದೆ ಇದನ್ನು ಮಾಡಿದ್ದರಿಂದ, ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾರೆಂದು ನಾನು ಬಲ್ಲೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:16
29 ತಿಳಿವುಗಳ ಹೋಲಿಕೆ  

ಭೂನಿವಾಸಿಗಳನ್ನು ಪೀಡಿಸಿದ್ದ ಆ ಇಬ್ಬರು ಪ್ರವಾದಿಗಳು ಸತ್ತದ್ದಕ್ಕಾಗಿ ಲೋಕದ ಜನರು ಸಂತೋಷದಿಂದ ಸಂಭ್ರಮಿಸುವರು. ಒಬ್ಬರಿಗೊಬ್ಬರು ಬಹುಮಾನಗಳನ್ನು ಹಂಚಿಕೊಳ್ಳುವರು.


ಜನರು ಸದ್ಬೋಧನೆಯನ್ನು ಸಹಿಸದೆ, ಸ್ವೇಚ್ಛಾಚಾರಿಗಳಾಗುವ ಕಾಲವು ಬರುತ್ತದೆ. ತಮ್ಮ ದುರಿಚ್ಛೆಗಳಿಗೆ ಅನುಗುಣವಾಗಿ ಬೋಧಿಸುವವರಿಗೆ ಕಾತರದಿಂದ ಕಿವಿಗೊಡಲು ಕೂಡಿಕೊಳ್ಳುತ್ತಾರೆ.


ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಿಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು.


ದೇವರ ವಿಷಯದಲ್ಲಿಯೂ ಅಂತೆಯೇ. ದೇವರು ತಮ್ಮ ಕೋಪಾಗ್ನಿಯನ್ನು ಪ್ರದರ್ಶಿಸಿ, ತಮ್ಮ ಶಕ್ತಿಯನ್ನು ಪ್ರಕಟಿಸಲು ಬಯಸಿದರು. ಹಾಗೆಮಾಡದೆ ವಿಕೋಪಕ್ಕೂ ವಿನಾಶಕ್ಕೂ ಮಾಡಲಾಗಿದ್ದ ಕುಡಿಕೆಯನ್ನು ಹೋಲುವವರನ್ನು ಅತ್ಯಂತ ಸಹನೆಯಿಂದ ಸೈರಿಸಿಕೊಂಡರಾದರೆ, ಯಾರು ಏನನ್ನು ತಾನೇ ಹೇಳಲಾದೀತು?


ನೀವು ಸಂಯೋಜಿಸಿದ್ದು ಹಾಗೂ ಸಂಕಲ್ಪಿಸಿದ್ದು ಈಡೇರುವಂತೆ ಅವರು ಹೀಗೆ ವರ್ತಿಸಿದರು.


ತರುವಾಯ ಯೇಸುಸ್ವಾಮಿ ಮಹಾದೇವಾಲಯದ ಒಳಕ್ಕೆ ಹೋಗಿ ಅಲ್ಲಿ ಬೋಧನೆಮಾಡತೊಡಗಿದರು. ಮುಖ್ಯಯಾಜಕರೂ ಪ್ರಜಾಪ್ರಮುಖರೂ ಅವರ ಬಳಿಗೆ ಬಂದು, “ಇದನ್ನೆಲ್ಲಾ ನೀನು ಯಾವ ಅಧಿಕಾರದಿಂದ ಮಾಡುತ್ತಿರುವೆ? ನಿನಗೆ ಈ ಅಧಿಕಾರವನ್ನು ಕೊಟ್ಟವರಾರು?” ಎಂದು ಪ್ರಶ್ನಿಸಿದರು.


‘ಸರ್ವೇಶ್ವರ ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ದೇವಾಲಯದ ಯಾಜಕನನ್ನಾಗಿ ನೇಮಿಸಿದ್ದಾರೆ. ಯಾವನಾದರು ಮೈದುಂಬಿ ಪ್ರವಾದಿಯಾಗಿ ನಟಿಸಿದ್ದೇ ಆದರೆ ಅವನನ್ನು ಕೊಳಕ್ಕೆಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ನಿನಗೆ ವಹಿಸಿದ್ದಾರೆ.


ಆರಂಭದಲ್ಲಿಯೇ ಅಂತ್ಯವನು ತಿಳಿಸಿದವನು ನಾನು ಭೂತಕಾಲದಲ್ಲಿಯೆ ಭವಿಷ್ಯವನು ಅರುಹಿದವನು ನಾನು. ಸ್ಥಿರವಿರುವುದು ನನ್ನ ಸಂಕಲ್ಪ, ನೆರವೇರುವುದು ನನ್ನ ಇಷ್ಟಾರ್ಥ


ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ,ಸರ್ವೇಶ್ವರನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.


ಆಗ ಇಸ್ರಯೇಲರ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿರಿ; ಅವರಿಗೆ,


ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಿಯ ಮೇಲೆ ಕುಪಿತನಾಗಿ, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳಹಾಕಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.


ಮನುಷ್ಯನು ಮನುಷ್ಯನಿಗೆ ವಿರುದ್ಧ ಅಪರಾಧ ಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುತ್ತಾರೆ. ಆದರೆ ಮನುಷ್ಯನು ಸರ್ವೇಶ್ವರನಿಗೆ ವಿರುದ್ಧ ಅಪರಾಧ ಮಾಡಿದರೆ ಮಧ್ಯಸ್ಥಿಕೆ ವಹಿಸುವವರಾರು?” ಎಂದು ಎಚ್ಚರಿಸಿದನು. ಆದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ. ಎಂದೇ ಅವರನ್ನು ಕೊಲ್ಲಬೇಕೆಂಬುದು ಸರ್ವೇಶ್ವರನ ಚಿತ್ತವಾಗಿತ್ತು.


ಆದರೆ ಸರ್ವೇಶ್ವರ ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು, ಹಟಮಾರಿಯನ್ನಾಗಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ನಿಮ್ಮಿಂದ ಅವನು ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಸರ್ವೇಶ್ವರನ ಸಂಕಲ್ಪವಾಗಿತ್ತು. ಅದು ಈಗಾಗಲೇ ನೆರವೇರಿದೆ.


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೆ ನಿನ್ನನ್ನು ಸಾಯಿಸದೆ ಉಳಿಸಿದ್ದೇನೆ.


ಅರಸನು ಜನರ ಮಾತನ್ನು ಕೇಳದೆ ಹೋದದ್ದು ದೈವಯೋಗದಿಂದಲೇ. ಈ ಪ್ರಕಾರ ಸರ್ವೇಶ್ವರ ಶಿಲೋವಿನವನಾದ ಅಹೀಯನ ಮುಖಾಂತರ ನೆಬಾಟನ ಮಗ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.


ಆಗ ಸರ್ವೇಶ್ವರ ಅಮಚ್ಯನ ಮೇಲೆ ಬಹಳವಾಗಿ ಕೋಪಗೊಂಡು, ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿ, “ನಿನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಲಾರದೆಹೋದ ಅನ್ಯದೇವತೆಗಳಲ್ಲಿ ಏಕೆ ಇಷ್ಟು ಭಕ್ತಿ?” ಎಂದು ಹೇಳಿಸಿದರು.


ಅನಂತರ ಜುದೇಯದ ಅರಸ ಅಮಚ್ಯನು ಸಮಾಲೋಚನೆ ನಡೆಸಿ, ಯೇಹುವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಇಸ್ರಯೇಲರ ಅರಸನೂ ಆದ ಯೋವಾಷನಿಗೆ, “ನಾವು ಒಬ್ಬರನ್ನೊಬ್ಬರು ಎದುರುಗೊಳ್ಳೋಣ,” ಎಂದು ದೂತರ ಮುಖಾಂತರ ಹೇಳಿಸಿದನು.


ಅವರನ್ನು ನಾನು ಕಳಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತ ಇದ್ದಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಹೊರದೂಡಬೇಕಾಗುವುದು, ನೀವು ನಾಶವಾಗುವಿರಿ, ಎಂದು ಸರ್ವೇಶ್ವರನೇ ನುಡಿದಿದ್ದಾರೆ.”


ಹೀಗೆ ಜುದೇಯ ನಾಡಿನಲ್ಲೇ ವಾಸಮಾಡಿರೆಂಬ ಸರ್ವೇಶ್ವರನ ಮಾತನ್ನು ಕಾರೇಹನ ಮಗ ಯೋಹಾನಾನನು, ಸಮಸ್ತ ಸೇನಾಪತಿಗಳು, ಹಾಗು ಸಕಲ ಜನರು ಕೇಳದೆಹೋದರು.


ಕೇಳಿಯೂ ಯಾವನಾದರು ಎಚ್ಚರಗೊಳ್ಳದೆ ಬೀಳುವ ಖಡ್ಗಕ್ಕೆ ಸಿಕ್ಕಿ ನಾಶವಾದರೆ, ತನ್ನ ಮರಣಕ್ಕೆ ತಾನೇ ಕಾರಣನಾಗುತ್ತಾನೆ.


ಅವನು ಮೋಶೆಗೆ, “ಇಲ್ಲಿಂದ ಹೊರಡು; ಇನ್ನು ಮುಂದೆ ನನ್ನ ಸಮ್ಮುಖಕ್ಕೆ ಬರಲೇ ಬೇಡ, ಎಚ್ಚರಿಕೆ! ತಿರುಗಿ ಬಂದೆಯಾದರೆ ಮರಣದಂಡನೆ ಆಗುವುದು,” ಎಂದು ಹೇಳಿದನು.


ಆಗ ಯಾಜಕ ಯೆಹೋಯಾದನ ಮಗ ಜೆಕರ್ಯನುದೇವಾತ್ಮನಿಂದ ಆವೇಶ ಉಳ್ಳವನಾದನು. ಅವನು ಜನರ ಎದುರಿಗೆ ಉನ್ನತಸ್ಥಾನದಲ್ಲಿ ನಿಂತು, “ದೇವರ ಮಾತನ್ನು ಕೇಳಿರಿ; ನೀವೇಕೆ ಸರ್ವೇಶ್ವರನ ಆಜ್ಞೆಗಳನ್ನು ಮೀರಿ, ನಿಮ್ಮನ್ನೆ ನಾಶಮಾಡಿಕೊಳ್ಳುತ್ತೀರಿ? ನೀವು ಸರ್ವೇಶ್ವರಸ್ವಾಮಿಯನ್ನು ಬಿಟ್ಟದ್ದರಿಂದ ಅವರೂ ನಿಮ್ಮನ್ನು ಬಿಟ್ಟುಬಿಟ್ಟಿದ್ದಾರೆ,” ಎಂದನು.


ಏಕೆಂದರೆ ಸುಜ್ಞಾನವನ್ನೇ ಅವರು ದ್ವೇಷಿಸಿದರು, ಸರ್ವೇಶ್ವರನಲ್ಲಿ ಭಯಭಕ್ತಿಯಿರಿಸದೆ ಹೋದರು.


ನನ್ನ ಆಲೋಚನೆಯನ್ನು ಅವರು ಕೇಳಲಿಲ್ಲ, ನನ್ನ ಪ್ರತಿಯೊಂದು ಎಚ್ಚರಿಕೆಯ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವುವು. ನಿನಗೆ ನನ್ನ ಭಯವಿಲ್ಲದೆ ನಿನ್ನ ದೇವರಾದ ಸರ್ವೇಶ್ವರನಾದ ನನ್ನನ್ನು ತೊರೆದುಬಿಟ್ಟದ್ದು ನಿನಗೆ ಕೆಟ್ಟದ್ದಾಗಿಯೂ ಕಹಿಯಾಗಿಯೂ ಪರಿಣಮಿಸುವುದು. ಇದನ್ನು ಚೆನ್ನಾಗಿ ಗ್ರಹಿಸಿಕೊ, ಕಣ್ಣಾರೆ ನೋಡು. ಇದು ಸರ್ವಶಕ್ತನೂ, ಸ್ವಾಮಿ ಸರ್ವೇಶ್ವರನೂ ಆದ ನನ್ನ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು