2 ಪೂರ್ವಕಾಲ ವೃತ್ತಾಂತ 25:4 - ಕನ್ನಡ ಸತ್ಯವೇದವು C.L. Bible (BSI)4 ಆದರೆ ‘ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆ ಮಾಡಿದ ಪಾಪಕ್ಕೆ ಮಕ್ಕಳಿಗಾಗಲಿ ಮರಣ ಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪದ ಫಲವನ್ನು ತಾನೇ ಅನುಭವಿಸಬೇಕು’ ಎಂಬುದಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿರುವ ಸರ್ವೇಶ್ವರನ ಅಪ್ಪಣೆಯನ್ನು ನೆನಪುಮಾಡಿಕೊಂಡು, ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದರೆ, “ಮಕ್ಕಳ ಪಾಪದ ದೆಸೆಯಿಂದ ತಂದೆಗೂ ತಂದೆಯ ಪಾಪದ ದೆಸೆಯಿಂದ ಮಕ್ಕಳಿಗೂ ಮರಣ ಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪದ ಫಲವನ್ನು ತಾನೇ ಅನುಭವಿಸಬೇಕು” ಎಂಬುದಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿರುವ ಯೆಹೋವನ ಅಪ್ಪಣೆಯನ್ನು ನೆನಪು ಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆದರೆ ಮಕ್ಕಳ ಪಾಪದ ದೆಸೆಯಿಂದ ತಂದೆಗೂ ತಂದೆಯ ಪಾಪದ ದೆಸೆಯಿಂದ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪದ ಫಲವನ್ನು ತಾನೇ ಅನುಭವಿಸಬೇಕು ಎಂಬದಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿರುವ ಯೆಹೋವನ ಅಪ್ಪಣೆಯನ್ನು ನೆನಪುಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದರೆ ಆ ಸೇವಕರ ಮಕ್ಕಳನ್ನು ಕೊಲ್ಲಿಸಲಿಲ್ಲ. ಯಾಕೆಂದರೆ ಮೋಶೆಯ ಧರ್ಮಶಾಸ್ತ್ರದ ಪ್ರಕಾರ, ಮಕ್ಕಳು ಮಾಡಿದ ಪಾಪಕ್ಕಾಗಿ ಅವರ ತಂದೆತಾಯಿಗಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು; ತಂದೆತಾಯಿಗಳು ಮಾಡಿದ ಪಾಪಕ್ಕಾಗಿ ಅವರ ಮಕ್ಕಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ಪಾಪ ಮಾಡಿದವರಿಗೇ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೆ, “ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆಯ ಪಾಪಕ್ಕಾಗಿ ಮಕ್ಕಳಿಗಾಗಲಿ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪದ ನಿಮಿತ್ತವೇ ಮರಣಶಿಕ್ಷೆಯನ್ನು ಹೊಂದಬೇಕು,” ಎಂದು ಯೆಹೋವ ದೇವರು ಆಜ್ಞಾಪಿಸಿದ ಮೋಶೆಯ ನಿಯಮ ಗ್ರಂಥದಲ್ಲಿ ಬರೆದಿರುವ ಪ್ರಕಾರ, ಅಮಚ್ಯನು ಕೊಲೆಗಾರರ ಮಕ್ಕಳನ್ನು ಕೊಂದುಹಾಕಲಿಲ್ಲ. ಅಧ್ಯಾಯವನ್ನು ನೋಡಿ |
ಆಮೇಲೆ ಅಮಚ್ಯನು ಯೆಹೂದ್ಯರನ್ನು ಸಹಸ್ರಾಧಿಪತಿ ಹಾಗು ಶತಾಧಿಪತಿಗಳ ಕೈಕೆಳಗೆ ಒಟ್ಟುಗೂಡಿಸಿ, ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಜನರನ್ನು ಆಯಾ ಗೋತ್ರಗಳ ಪ್ರಕಾರ ಅವರನ್ನು ನಿಲ್ಲಿಸಿ, ಇಪ್ಪತ್ತು ವರ್ಷದವರು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳವರನ್ನು ಲೆಕ್ಕಮಾಡಿಸಿದನು. ಅವರಲ್ಲಿ ಬರ್ಜಿ, ಗುರಾಣಿಗಳನ್ನು ಹಿಡಿದುಕೊಂಡು ಯುದ್ಧಕ್ಕೆ ಹೊರಡತಕ್ಕ ಶೂರರು ಮೂರು ಲಕ್ಷಮಂದಿ ಸಿಕ್ಕಿದರು.