ಆಮೇಲೆ ಅಮಚ್ಯನು ಯೆಹೂದ್ಯರನ್ನು ಸಹಸ್ರಾಧಿಪತಿ ಹಾಗು ಶತಾಧಿಪತಿಗಳ ಕೈಕೆಳಗೆ ಒಟ್ಟುಗೂಡಿಸಿ, ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಜನರನ್ನು ಆಯಾ ಗೋತ್ರಗಳ ಪ್ರಕಾರ ಅವರನ್ನು ನಿಲ್ಲಿಸಿ, ಇಪ್ಪತ್ತು ವರ್ಷದವರು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳವರನ್ನು ಲೆಕ್ಕಮಾಡಿಸಿದನು. ಅವರಲ್ಲಿ ಬರ್ಜಿ, ಗುರಾಣಿಗಳನ್ನು ಹಿಡಿದುಕೊಂಡು ಯುದ್ಧಕ್ಕೆ ಹೊರಡತಕ್ಕ ಶೂರರು ಮೂರು ಲಕ್ಷಮಂದಿ ಸಿಕ್ಕಿದರು.
ಆಗ ದೈವಪುರುಷನೊಬ್ಬನು ಅವನ ಬಳಿಗೆ ಬಂದು, “ಅರಸರೇ, ಇಸ್ರಯೇಲ್ ಸೈನ್ಯದವರು ನಿಮ್ಮ ಜೊತೆಯಲ್ಲಿ ಯುದ್ಧಕ್ಕೆ ಹೋಗಬಾರದು. ಸರ್ವೇಶ್ವರ ಎಫ್ರಯಿಮರಾದ ಇಸ್ರಯೇಲರನ್ನೆಲ್ಲಾ ಕೈಬಿಟ್ಟಿದ್ದಾರೆ.
ತಾವು ದಾವೀದನಿಗೆ ವೈರಿಗಳಾದೆವು ಎಂದು ಹಾನೂನನಿಗೂ ಅಮ್ಮೋನಿಯರಿಗೂ ತಿಳಿಯಿತು. ಆದುದರಿಂದ ಅವರು ಎರಡು ನದಿಗಳ ಮಧ್ಯದಲ್ಲಿರುವ ಸಿರಿಯಾ ಸೀಮೆಯಿಂದಲೂ ಸಿರಿಯಾದ ಮಾಕದಿಂದಲೂ ಚೊಬಾ ರಾಜ್ಯದಿಂದಲೂ ರಥಗಳನ್ನೂ ರಾಹುತರನ್ನೂ ತರಿಸುವುದಕ್ಕಾಗಿ ಮೂವತ್ತನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕಳುಹಿಸಿದರು.