Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:7 - ಕನ್ನಡ ಸತ್ಯವೇದವು C.L. Bible (BSI)

7 ಆಗ ದೈವಪುರುಷನೊಬ್ಬನು ಅವನ ಬಳಿಗೆ ಬಂದು, “ಅರಸರೇ, ಇಸ್ರಯೇಲ್ ಸೈನ್ಯದವರು ನಿಮ್ಮ ಜೊತೆಯಲ್ಲಿ ಯುದ್ಧಕ್ಕೆ ಹೋಗಬಾರದು. ಸರ್ವೇಶ್ವರ ಎಫ್ರಯಿಮರಾದ ಇಸ್ರಯೇಲರನ್ನೆಲ್ಲಾ ಕೈಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ದೇವರ ಮನುಷ್ಯನೊಬ್ಬನು ಅವನ ಬಳಿಗೆ ಬಂದು ಅವನಿಗೆ, “ಅರಸನೇ, ಇಸ್ರಾಯೇಲ್ ಸೈನ್ಯದವರು ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಹೋಗಬಾರದು. ಯೆಹೋವನು ಎಫ್ರಾಯೀಮ್ಯರಾದ ಇಸ್ರಾಯೇಲರನ್ನೆಲ್ಲಾ ಕೈಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ದೇವರ ಮನುಷ್ಯನೊಬ್ಬನು ಅವನ ಬಳಿಗೆ ಬಂದು ಅವನಿಗೆ - ಅರಸನೇ, ಇಸ್ರಾಯೇಲ್ ಸೈನ್ಯದವರು ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಹೋಗಬಾರದು. ಯೆಹೋವನು ಎಫ್ರಾಯೀಮ್ಯರಾದ ಇಸ್ರಾಯೇಲ್ಯರನ್ನೆಲ್ಲಾ ಕೈಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಒಬ್ಬ ದೇವರ ಮನುಷ್ಯನು ಅಮಚ್ಯನ ಬಳಿಗೆ ಬಂದು, “ಅರಸನೇ, ಇಸ್ರೇಲಿನ ಸೈನಿಕರು ನಿನ್ನೊಂದಿಗೆ ಯುದ್ಧಕ್ಕೆ ಹೋಗಲು ಬಿಡಬೇಡ. ಯೆಹೋವನು ಇಸ್ರೇಲರೊಂದಿಗೂ ಎಫ್ರಾಯೀಮಿನ ಜನರೊಂದಿಗೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ದೇವರ ಮನುಷ್ಯನೊಬ್ಬನು ಅವನ ಬಳಿಗೆ ಬಂದು ಅವನಿಗೆ, “ಅರಸನೇ, ಇಸ್ರಾಯೇಲಿನ ಸೈನ್ಯವು ನಿನ್ನ ಸಂಗಡ ಹೋಗದಿರಲಿ. ಏಕೆಂದರೆ ಯೆಹೋವ ದೇವರು ಇಸ್ರಾಯೇಲರಾದ ಎಫ್ರಾಯೀಮನ ಸಮಸ್ತ ಜನರ ಸಂಗಡ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:7
12 ತಿಳಿವುಗಳ ಹೋಲಿಕೆ  

ಅವನು ಜೆರುಸಲೇಮಿಗೆ ಬಂದಾಗ ಹನಾನೀಯನ ಮಗ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು, “ನೀವು ಕೆಟ್ಟವನಿಗೆ ಸಹಾಯಮಾಡಬಹುದೇ? ಸರ್ವೇಶ್ವರನ ಹಗೆಗಾರರನ್ನು ಪ್ರೀತಿಸಬಹುದೇ? ನೀವು ಹೀಗೆ ಮಾಡಿದ್ದರಿಂದ ಸರ್ವೇಶ್ವರನ ಕೋಪ ನಿಮ್ಮ ಮೇಲಿರುತ್ತದೆ.


ಅದರ ಮೂಲಕ ದೈವಭಕ್ತರು ಸಿದ್ಧರೂ ಸಕಲ ಸತ್ಕಾರ್ಯಗಳಿಗೆ ಸನ್ನದ್ಧರೂ ಆಗಬಲ್ಲರು.


ದೇವರ ಭಕ್ತನಾದ ನೀನು ಈ ಎಲ್ಲಾ ಕೇಡುಗಳಿಂದ ದೂರವಿರು. ದೇವರೊಡನೆ ಸತ್ಸಂಬಂಧ, ಭಕ್ತಿ, ವಿಶ್ವಾಸ, ಪ್ರೀತಿ, ಸ್ಥಿರಚಿತ್ತ, ಸಾತ್ವಿಕತೆ - ಇವೇ ಮೊದಲಾದ ಸದ್ಗುಣಗಳನ್ನು ಸಂಪಾದಿಸಲು ಪ್ರಯತ್ನಿಸು.


ಎಫ್ರಯಿಮಿನ ಮಕ್ಕಳು ಬೇಟೆಗೆ ಗುರಿ ಆದವರಂತೆ ಕಾಣಿಸುತ್ತಾರೆ. ಎಫ್ರಯಿಮ್ ತನ್ನ ಪುತ್ರರನ್ನು ವಧ್ಯಸ್ಥಾನಕ್ಕೆ ಕರೆದೊಯ್ಯಬೇಕಾಗುವುದು.


ಇಗೋ, ದೇವರೇ ನಾಯಕರಾಗಿ ನಮ್ಮೊಂದಿಗಿರುತ್ತಾರೆ; ನಿಮಗೆ ವಿರುದ್ಧ ಯುದ್ಧ ಕಹಳೆಗಳನ್ನು ಮೊಳಗಿಸುವ ಯಾಜಕರೂ ನಮ್ಮೊಂದಿಗೆ ಇರುತ್ತಾರೆ. ಇಸ್ರಯೇಲರೇ, ನಿಮ್ಮ ಪೂರ್ವಜರ ದೇವರಾದ ಸರ್ವೇಶ್ವರನೊಡನೆ ಯುದ್ಧಮಾಡಬೇಡಿ; ನೀವು ಜಯಿಸಲಾರಿರಿ,” ಎಂದು ಕೂಗಿ ಹೇಳಿದನು.


ಜುದೇಯ ನಾಡಿನವನಾದ ಒಬ್ಬ ದೈವಭಕ್ತನು ಸರ್ವೇಶ್ವರನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಾರತಿ ಎತ್ತಲು ಪೀಠದ ಹತ್ತಿರ ನಿಂತುಕೊಂಡನು.


ಬಹಳವಾಗಿ ಆಲೋಚಿಸಿ, ಕಡೆಗೆ ಬಂಗಾರದ ಎರಡು ಹೋರಿಕರುಗಳ ಮೂರ್ತಿಗಳನ್ನು ಮಾಡಿಸಿ, ಇಸ್ರಯೇಲರಿಗೆ, “ನೀವು ಜಾತ್ರೆಗಾಗಿ ಜೆರುಸಲೇಮಿಗೆ ಹೋದದ್ದು ಇನ್ನು ಸಾಕು. ಇಗೋ, ನಿಮ್ಮನ್ನು ಈಜಿಪ್ಟಿನಿಂದ ಕರೆದುತಂದ ದೇವರುಗಳು ಇಲ್ಲಿರುತ್ತವೆ,” ಎಂದು ಹೇಳಿ


ಸರ್ವೇಶ್ವರಸ್ವಾಮಿ ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದರು. ಅವನು ದಾವೀದನ ಬಳಿಗೆ ಬಂದು ಹೀಗೆಂದು ಹೇಳಿದನು: “ಒಂದು ಊರಲ್ಲಿ ಇಬ್ಬರು ವ್ಯಕ್ತಿಗಳಿದ್ದರು. ಒಬ್ಬನು ಐಶ್ವರ್ಯವಂತ, ಇನ್ನೊಬ್ಬನು ಬಡವ.


ಆ ಮಹಿಳೆ ತನ್ನ ಗಂಡನಿಗೆ, “ಯಾವಾಗಲೂ ಈ ದಾರಿಯಿಂದ ಹೋಗುತ್ತಾ ಬರುತ್ತಾ ಇರುವ ಆ ವ್ಯಕ್ತಿ ಒಬ್ಬ ಸಂತನು ಹಾಗು ದೈವಪುರುಷನು ಆಗಿರುತ್ತಾನೆಂದು ನನಗೆ ಗೊತ್ತಾಯಿತು.


ಇದಲ್ಲದೆ 3400 ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟು ಇಸ್ರಯೇಲರಿಂದಲೂ ಲಕ್ಷಮಂದಿ ಯೋಧರನ್ನು ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು