2 ಪೂರ್ವಕಾಲ ವೃತ್ತಾಂತ 25:9 - ಕನ್ನಡ ಸತ್ಯವೇದವು C.L. Bible (BSI)9 ಅಮಚ್ಯನು ಆ ದೈವಪುರುಷನನ್ನು, “ಹಾಗಾದರೆ ನಾನು ಇಸ್ರಯೇಲ್ ಸೈನ್ಯಕ್ಕಾಗಿ 3400 ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟುಬಿಟ್ಟೆನಲ್ಲಾ, ಏನು ಮಾಡುವುದು?,” ಎಂದು ಕೇಳಿದನು. ಅವನು, “ಸರ್ವೇಶ್ವರ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಕೊಡಬಲ್ಲರು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅಮಚ್ಯನು ದೇವರ ಮನುಷ್ಯನನ್ನು, “ಹಾಗಾದರೆ ನಾನು ಇಸ್ರಾಯೇಲ್ ಸೈನ್ಯಕ್ಕೋಸ್ಕರ ನೂರು ತಲಾಂತುಗಳನ್ನು ಕೊಟ್ಟ ವಿಷಯದಲ್ಲಿ ನಾನೇನು ಮಾಡಬೇಕು?” ಎಂದು ಕೇಳಲು ಅವನು, “ಯೆಹೋವನು ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿನಗೆ ಕೊಡಬಲ್ಲನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅಮಚ್ಯನು ದೇವರ ಮನುಷ್ಯನನ್ನು - ಹಾಗಾದರೆ ನಾನು ಇಸ್ರಾಯೇಲ್ ಸೈನ್ಯಕ್ಕೋಸ್ಕರ ನೂರು ತಲಾಂತುಗಳನ್ನು ಕೊಟ್ಟ ವಿಷಯದಲ್ಲಿ ಮಾಡುವದೇನು ಎಂದು ಕೇಳಲು ಅವನು ಯೆಹೋವನು ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿನಗೆ ಕೊಡಬಲ್ಲನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅಮಚ್ಯನು ಆ ದೇವರ ಮನುಷ್ಯನಿಗೆ, “ಹಾಗಾದರೆ, ನಾನು ಈಗಾಗಲೇ ಅವರಿಗೆ ಕೊಟ್ಟಿರುವ ಹಣಕ್ಕೇನು ಮಾಡಲಿ?” ಎಂದು ಕೇಳಿದನು. ದೇವರ ಮನುಷ್ಯನು ಉತ್ತರಿಸಿದ್ದೇನೆಂದರೆ, “ಯೆಹೋವನ ಬಳಿಯಲ್ಲಿ ಯಾವ ಕೊರತೆಯೂ ಇಲ್ಲ. ನಿನಗೆ ಅದಕ್ಕಿಂತ ಅಧಿಕವಾಗಿ ಕೊಡಲು ಆತನು ಶಕ್ತನಾಗಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ಅಮಚ್ಯನು ದೇವರ ಮನುಷ್ಯನಿಗೆ, “ಆದರೆ ಇಸ್ರಾಯೇಲಿನ ದಂಡಿಗೆ ನಾನು ಕೊಟ್ಟ 3,400 ಕಿಲೋಗ್ರಾಂ ಬೆಳ್ಳಿಯನ್ನು ಏನು ಮಾಡಬೇಕು?” ಎಂದನು. ಅದಕ್ಕೆ ದೇವರ ಮನುಷ್ಯನು, “ಯೆಹೋವ ದೇವರು ಇದಕ್ಕಿಂತ ಅಧಿಕವಾಗಿಯೇ ನಿನಗೆ ಕೊಡಲು ಶಕ್ತರು,” ಎಂದನು. ಅಧ್ಯಾಯವನ್ನು ನೋಡಿ |