2 ಪೂರ್ವಕಾಲ ವೃತ್ತಾಂತ 26:18 - ಕನ್ನಡ ಸತ್ಯವೇದವು C.L. Bible (BSI)18 “ಉಜ್ಜೀಯರೇ, ಸರ್ವೇಶ್ವರನಿಗೆ ಧೂಪಾರತಿ ಎತ್ತುವುದು ನಿಮ್ಮ ಕೆಲಸವಲ್ಲ; ಅದಕ್ಕೆ ಆರೋನನ ಸಂತಾನದವರ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟು ಹೋಗಿ; ನೀವು ಮಾಡುತ್ತಿರುವುದು ದ್ರೋಹ. ಇದಕ್ಕೆ ದೇವರಾದ ಸರ್ವೇಶ್ವರನಿಂದ ನಿಮಗೆ ಮರ್ಯಾದೆ ದೊರಕಲಾರದು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅರಸನ ಎದುರಿಗೆ ನಿಂತು ಅವನಿಗೆ, “ಉಜ್ಜೀಯನೇ, ಯೆಹೋವನಿಗೋಸ್ಕರ ಧೂಪ ಹಾಕುವುದು ನಿನ್ನ ಕೆಲಸವಲ್ಲ; ಅದಕ್ಕೋಸ್ಕರ ಆರೋನನ ಸಂತಾನದವರಾದ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟುಹೋಗು; ನೀನು ಮಾಡುತ್ತಿರುವುದು ದ್ರೋಹ. ಇದಕ್ಕೆ ದೇವರಾದ ಯೆಹೋವನಿಂದ ನಿನಗೆ ಗೌರವ ದೊರಕಲಾರದು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವನಿಗೆ - ಉಜ್ಜೀಯನೇ, ಯೆಹೋವನಿಗೋಸ್ಕರ ಧೂಪ ಹಾಕುವದು ನಿನ್ನ ಕೆಲಸವಲ್ಲ; ಅದಕ್ಕೋಸ್ಕರ ಆರೋನನ ಸಂತಾನದವರಾದ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟುಹೋಗು; ನೀನು ದ್ರೋಹಿ. ಇದಕ್ಕಾಗಿ ದೇವರಾದ ಯೆಹೋವನಿಂದ ನಿನಗೆ ಮಾನವುಂಟಾಗಲಾರದು ಅನ್ನಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ಉಜ್ಜೀಯನೇ, ಯೆಹೋವನಿಗೆ ಧೂಪ ಹಾಕುವದು ನಿನ್ನ ಕೆಲಸವಲ್ಲ. ನೀನು ಹೀಗೆ ಮಾಡುವದು ಸರಿಯಲ್ಲ. ಆರೋನನ ಸಂತತಿಯವರಾದ ಯಾಜಕರೇ ಧೂಪ ಹಾಕಬೇಕಾದದ್ದು. ಅವರು ಪವಿತ್ರ ಸೇವೆಗೆ ನೇಮಿಸಲ್ಪಟ್ಟಿದ್ದಾರೆ. ನೀನು ಈ ಮಹಾ ಪವಿತ್ರಸ್ಥಾನದಿಂದ ಹೊರಗೆ ಹೋಗು. ನೀನು ದೇವರಾದ ಯೆಹೋವನಿಗೆ ವಿಧೇಯನಾಗಿಲ್ಲ. ಈ ಕಾರ್ಯವನ್ನು ಮಾಡಿದ್ದರಿಂದ ದೇವರು ನಿನ್ನನ್ನು ಮೆಚ್ಚುವದಿಲ್ಲ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅವನನ್ನು ಎದುರಿಸಿ, “ಉಜ್ಜೀಯನೇ, ಯೆಹೋವ ದೇವರಿಗೆ ಧೂಪ ಸುಡುವುದು ಪ್ರತಿಷ್ಠಿತರಾದ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು. ನೀನು ಪರಿಶುದ್ಧ ಸ್ಥಳದಿಂದ ಹೊರಟು ಹೋಗು, ಅಪರಾಧ ಮಾಡಿದೆ. ದೇವರಾದ ಯೆಹೋವ ದೇವರಿಂದ ನಿನಗೆ ಗೌರವ ದೊರಕದು,” ಎಂದನು. ಅಧ್ಯಾಯವನ್ನು ನೋಡಿ |