Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 26:3 - ಕನ್ನಡ ಸತ್ಯವೇದವು C.L. Bible (BSI)

3 ಉಜ್ಜೀಯನು ಪಟ್ಟಕ್ಕೆ ಬಂದಾಗ ಅವನಿಗೆ ಹದಿನಾರು ವರ್ಷ ವಯಸ್ಸು. ಅವನು ಜೆರುಸಲೇಮಿನಲ್ಲಿ ಐವತ್ತ ಎರಡು ವರ್ಷ ಆಳಿದನು. ಜೆರುಸಲೇಮಿನವಳಾದ ಯೆಕೊಲ್ಯ ಎಂಬಾಕೆ ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷಗಳ ಕಾಲ ಆಳಿದನು. ಯೆರೂಸಲೇಮಿನವಳಾದ ಯೆಕೊಲ್ಯ ಎಂಬಾಕೆಯು ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಉಜ್ಜೀಯನು ಪಟ್ಟಕ್ಕೆ ಬಂದಾಗ ಹದಿನಾರು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಐವತ್ತೆರಡು ವರುಷ ಆಳಿದನು. ಯೆರೂಸಲೇವಿುನವಳಾದ ಯೆಕೊಲ್ಯ ಎಂಬಾಕೆಯು ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಉಜ್ಜೀಯನು ಪಟ್ಟಕ್ಕೆ ಬಂದಾಗ ಹದಿನಾರು ವರ್ಷದವನಾಗಿದ್ದನು. ಅವನು ಐವತ್ತೆರಡು ವರ್ಷ ಕಾಲ ಜೆರುಸಲೇಮಿನಲ್ಲಿ ರಾಜ್ಯಭಾರ ಮಾಡಿದನು. ಅವನ ತಾಯಿಯ ಹೆಸರು ಯೆಕೊಲ್ಯ. ಆಕೆ ಜೆರುಸಲೇಮಿನವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಉಜ್ಜೀಯನು ಅರಸನಾದಾಗ, ಹದಿನಾರು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು, ಅವಳು ಯೆರೂಸಲೇಮಿನವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 26:3
8 ತಿಳಿವುಗಳ ಹೋಲಿಕೆ  

ನೀವು ಆ ಗುಡ್ಡಗಳ ನಡುವೆ ಉಂಟಾಗುವ ಕಣಿವೆಯ ಮೂಲಕ ಪಲಾಯನಗೈಯುವಿರಿ. ಆ ಕಣಿವೆ ಆಚೆಲಿನವರೆಗೆ ಹಬ್ಬಿರುವುದು. ಜುದೇಯದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪವಾದಾಗ ನೀವು ಮಾಡಿದಂತೆ ಪಲಾಯನ ಗೈಯುವಿರಿ. ಆಗ ನನ್ನ ದೇವರಾದ ಸರ್ವೇಶ್ವರ ತಮ್ಮ ದೂತರ ಸಮೇತ ಬರುವರು.


ಜುದೇಯದಲ್ಲಿ ಮಹಾ ಭೂಕಂಪ ಆಗುವುದಕ್ಕೆ ಎರಡು ವರ್ಷಗಳ ಮುಂಚೆ, ತೆಕೋವದ ಕುರುಬರಲ್ಲೊಬ್ಬನಾದ ಆಮೋಸನಿಗೆ ಇಸ್ರಯೇಲಿನ ವಿಷಯವಾಗಿ ದೇವರಿಂದ ಬಂದ ಪ್ರಕಟನೆಗಳು ಇವು. ಆಗ ಜುದೇಯ ನಾಡನ್ನು ಉಜ್ಜೀಯನೆಂಬ ಅರಸನು ಆಳುತ್ತಿದ್ದ ಕಾಲ. ಅಂತೆಯೇ, ಯೋವಾಷನ ಮಗನಾದ ಯಾರೊಬ್ಬಾಮನು ಇಸ್ರಯೇಲನ್ನು ಆಳುತ್ತಿದ್ದ ಕಾಲ.


ಜುದೇಯ ನಾಡಿನಲ್ಲಿ ಉಜ್ಜೀಯ, ಯೋತಾಮ, ಆಹಾಜ ಮತ್ತು ಹಿಜ್ಕೀಯ ಇವರು ಅರಸರಾಗಿದ್ದಾಗ ಹಾಗೂ ಇಸ್ರಯೇಲ್ ನಾಡಿನಲ್ಲಿ ಯೋವಾಷನ ಮಗ ಯಾರೊಬ್ಬಾಮನು ಆಳುತ್ತಿದ್ದ ಕಾಲದಲ್ಲಿ, ಬೆಯೇರಿಯನ ಮಗನಾದ ಹೊಶೇಯನಿಗೆ ದೇವರು ದಯಪಾಲಿಸಿದ ಸಂದೇಶವಿದು:


ಅರಸ ಉಜ್ಜೀಯನು ಕಾಲವಾದ ವರ್ಷದಲ್ಲಿ ನನಗೆ ಸರ್ವೇಶ್ವರಸ್ವಾಮಿಯಿಂದ ದರ್ಶನವಾಯಿತು: ಉನ್ನತೋನ್ನತ ಸಿಂಹಾಸನದಲ್ಲಿ ಅವರು ಆಸೀನರಾಗಿದ್ದರು. ಅವರ ಮೇಲುವಸ್ತ್ರ ನೆರಿಗೆ ನೆರಿಗೆಯಾಗಿ ದೇವಾಲಯವನ್ನೆಲ್ಲ ಆವರಿಸಿತ್ತು.


ಜುದೇಯ ನಾಡಿನ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಜುದೇಯ ಮತ್ತು ಜೆರುಸಲೇಮ್ ನಗರವನ್ನು ಕುರಿತು ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ ಇದು :


ಅರಸನು ಸತ್ತು ಪಿತೃಗಳ ಬಳಿಗೆ ಸೇರಿದ ಮೇಲೆ ಇವನು ಏಲೋತ್ ಪಟ್ಟಣವನ್ನು ಮತ್ತೆ ಜುದೇಯ ರಾಜ್ಯಕ್ಕೆ ಸೇರಿಸಿಕೊಂಡು ಭದ್ರಪಡಿಸಿದನು.


ಅವನು ತನ್ನ ತಂದೆ ಅಮಚ್ಯನಂತೆ ಸರ್ವೇಶ್ವರನ ಚಿತ್ತಾನುಸಾರವಾಗಿ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು