Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:15 - ಕನ್ನಡ ಸತ್ಯವೇದವು C.L. Bible (BSI)

15 ಆಗ ಮೇಲೆ ಹೇಳಿದ ಪುರುಷರು ಎದ್ದುಬಂದು ಸೆರೆಯವರಲ್ಲಿ ಬೆತ್ತಲೆಯಾದವರೆಲ್ಲರಿಗೆ ಕೊಳ್ಳೆಯಿಂದ ಬಂದ ಬಟ್ಟೆಗಳನ್ನೂ, ಕಾಲಿಗೆ ಕೆರಗಳನ್ನೂ ಕೊಟ್ಟರು; ಅನ್ನಪಾನಗಳನ್ನಿತ್ತು, ತೈಲಹಚ್ಚಿದರು; ಬಳಲಿಹೋದವರನ್ನು ಕತ್ತೆಗಳ ಮೇಲೆ ಕುಳ್ಳಿರಿಸಿ, ಎಲ್ಲರನ್ನೂ ಜೆರಿಕೋ ಎಂಬ ಖರ್ಜೂರ ನಗರಕ್ಕೆ ಕರೆದುಕೊಂಡು ಹೋದರು; ಅಲ್ಲಿ ಅವರ ಬಂಧುಗಳ ಹತ್ತಿರ ಬಿಟ್ಟು, ಸಮಾರಿಯಕ್ಕೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಹೆಸರು ಕೂಗಿದ ಪುರುಷರು ಎದ್ದು ಬಂದು ಸೆರೆಯವರಲ್ಲಿ ಬೆತ್ತಲೆಯಾದವರೆಲ್ಲರಿಗೆ ಕೊಳ್ಳೆಯಿಂದ ಉಡುವುದಕ್ಕೆ ಬಟ್ಟೆಗಳನ್ನೂ, ಕಾಲಿಗೆ ಚಪ್ಪಲಿಗಳನ್ನು ಕೊಟ್ಟರು. ಎಲ್ಲರಿಗೂ ಅನ್ನಪಾನಗಳನ್ನಿಟ್ಟು ತೈಲಹಚ್ಚಿದರು. ಬಳಲಿ ಹೋದವರನ್ನು ಕತ್ತೆಗಳ ಮೇಲೆ ಕುಳ್ಳಿರಿಸಿ, ಎಲ್ಲರನ್ನೂ ಯೆರಿಕೋವೆಂಬ ಖರ್ಜೂರ ನಗರಕ್ಕೆ ಕರೆದುಕೊಂಡು ಹೋಗಿ, ಅವರ ಬಂಧುಗಳ ಹತ್ತಿರ ಬಿಟ್ಟು, ಸಮಾರ್ಯಕ್ಕೆ ಹಿಂತಿರುಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಮೇಲೆ ಹೇಳಿದ ಪುರುಷರು ಎದ್ದುಬಂದು ಸೆರೆಯವರಲ್ಲಿ ಬೆತ್ತಲೆಯಾದವರೆಲ್ಲರಿಗೆ ಕೊಳ್ಳೆಯಿಂದ ಉಡುವದಕ್ಕೆ ಬಟ್ಟೆಗಳನ್ನೂ ಕಾಲಿಗೆ ಕೆರಗಳನ್ನೂ ಕೊಟ್ಟು ಅನ್ನಪಾನಗಳನ್ನಿತ್ತು ತೈಲಹಚ್ಚಿ ಬಳಲಿ ಹೋದವರನ್ನು ಕತ್ತೆಗಳ ಮೇಲೆ ಕುಳ್ಳಿರಿಸಿ ಎಲ್ಲರನ್ನೂ ಯೆರಿಕೋವೆಂಬ ಖರ್ಜೂರ ನಗರಕ್ಕೆ ಕರಕೊಂಡುಹೋಗಿ ಅವರ ಬಂಧುಗಳ ಹತ್ತಿರ ಬಿಟ್ಟು ಸಮಾರ್ಯಕ್ಕೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆ ನಾಯಕರುಗಳು ಎದ್ದು ಸೆರೆಯವರಿಗೆ ಸಹಾಯ ಮಾಡಿದರು. ಇಸ್ರೇಲ್ ಸೈನಿಕರು ಸೂರೆಮಾಡಿದ ಬಟ್ಟೆಬರೆಗಳನ್ನು ಈ ನಾಯಕರು ಪಡೆದುಕೊಂಡು ಬೆತ್ತಲೆಯಾಗಿದ್ದ ಸೆರೆಯವರಿಗೆ ಕೊಟ್ಟರು. ಅವರ ಕಾಲಿಗೆ ಕೆರಗಳನ್ನು ಕೊಟ್ಟು, ಊಟೋಪಚಾರಗಳಿಂದ ಸತ್ಕರಿಸಿದರು. ಗಾಯಗೊಂಡವರಿಗೆ ಎಣ್ಣೆ ಹಚ್ಚಿ ಅವರಲ್ಲಿದ್ದ ಬಲಹೀನರನ್ನು ಕತ್ತೆಯ ಮೇಲೆ ಕುಳ್ಳಿರಿಸಿ ಜೆರಿಕೊವಿನಲ್ಲಿದ್ದ ಅವರವರ ಮನೆಗಳಿಗೆ ಕರೆದುಕೊಂಡು ಹೋದರು. ಜೆರಿಕೊವಿಗೆ “ಖರ್ಜೂರ ಮರಗಳ ಊರು” ಎಂಬ ಹೆಸರಿದೆ. ಅನಂತರ ಆ ನಾಲ್ಕು ಮಂದಿ ನಾಯಕರು ಸಮಾರ್ಯದಲ್ಲಿದ್ದ ತಮ್ಮ ಮನೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದವರು ಎದ್ದು ಸೆರೆಯವರನ್ನು ತೆಗೆದುಕೊಂಡು, ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ, ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವುದಕ್ಕೂ, ಕುಡಿಯುವುದಕ್ಕೂ ಕೊಟ್ಟು, ಅವರ ತಲೆಗಳಿಗೆ ಎಣ್ಣೆಯನ್ನು ಹಚ್ಚಿ, ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ, ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ತೆಗೆದುಕೊಂಡು ಬಂದರು. ಆಗ ಅವರು ಸಮಾರ್ಯಕ್ಕೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:15
21 ತಿಳಿವುಗಳ ಹೋಲಿಕೆ  

ದಕ್ಷಿಣ ಪ್ರದೇಶ, ಚೋಗರೂರಿನ ತನಕ ಇದ್ದ ಜೆರಿಕೋ ಖರ್ಜೂರಗಳ ಪಟ್ಟಣದ ಸುತ್ತಲಿನ ಬಯಲು, ಇದನ್ನೆಲ್ಲಾ ಅವನಿಗೆ ತೋರಿಸಿದರು.


ಅವನು, “ಬೇಡ; ನೀನು ಸ್ವಾಧೀನಪಡಿಸಿಕೊಂಡು ಸೆರೆಯಾಗಿ ತಂದವರನ್ನು ಕತ್ತಿಬಿಲ್ಲುಗಳಿಂದ ಸಂಹರಿಸುವೆಯೋ? ಅವರಿಗೆ ಅನ್ನಪಾನಗಳನ್ನು ಕೊಡು; ಉಂಡುಕುಡಿದು ತಮ್ಮ ಯಜಮಾನನ ಬಳಿಗೆ ಹಿಂದಿರುಗಿ ಹೋಗಲಿ,” ಎಂದು ಉತ್ತರಕೊಟ್ಟನು.


ಕೇನ್ಯನೂ ಮೋಶೆಯ ಮಾವನೂ ಆದ ಹೋಬಾಬನ ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ ಕುಲದವರ ಜೊತೆಯಲ್ಲಿ ಆರಾದಿನ ದಕ್ಷಿಣದಲ್ಲಿರುವ ಯೆಹೂದ ಮರುಭೂಮಿಗೆ ಬಂದು ಅಲ್ಲಿಯ ಜನರ ಸಂಗಡ ವಾಸಮಾಡಿದರು.


“ನನ್ನನ್ನು ಆಲಿಸುತ್ತಿರುವವರೇ, ನನ್ನ ಮಾತನ್ನು ಕೇಳಿರಿ: ‘ನಿಮ್ಮ ಶತ್ರುಗಳನ್ನು ಪ್ರೀತಿಸಿರಿ, ನಿಮ್ಮನ್ನು ದ್ವೇಷಿಸುವವರನ್ನು ಸತ್ಕರಿಸಿರಿ.


ಹಸಿದವರಿಗೆ ಅನ್ನ ಹಾಕುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯಾದವರನ್ನು ಕಂಡಾಗ ಅವರಿಗೆ ಬಟ್ಟೆಹೊದಿಸುವುದು, ನಿನ್ನ ರಕ್ತಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೆ ನನಗೆ ಇಷ್ಟಕರವಾದ ಉಪವಾಸವ್ರತ?


ಆಕೆ ಮಕ್ಕಳನ್ನು ಯೋಗ್ಯವಾಗಿ ಸಾಕಿಸಲಹಿದವಳೂ ಅತಿಥಿಸತ್ಕಾರ ಮಾಡಿದವಳೂ ಆಗಿರಬೇಕು. ಅಲ್ಲದೆ, ದೇವಜನರ ಪಾದಸೇವೆ ಮಾಡಿದವಳೂ ಸಂಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಇಂಥಾ ಪುಣ್ಯಕಾರ್ಯಗಳನ್ನು ಮಾಡಿ ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ವಿಶ್ವಾಸದಲ್ಲಿ ದೃಢವಾಗಿರುವ ನಾವು ನಮ್ಮ ಹಿತವನ್ನೇ ಬಯಸದೆ ವಿಶ್ವಾಸದಲ್ಲಿ ದೃಢವಲ್ಲದವರ ಲೋಪದೋಷಗಳನ್ನು ಸಹಿಸಿಕೊಳ್ಳಬೇಕು.


ಪೇತ್ರನು ಎದ್ದು ಅವರ ಜೊತೆಯಲ್ಲೇ ಹೊರಟುಬಂದನು. ಅವನನ್ನು ಮೇಲಂತಸ್ತಿನ ಕೋಣೆಗೆ ಕರೆದುಕೊಂಡು ಹೋದರು. ಅಲ್ಲಿ ಕೂಡಿದ್ದ ವಿಧವೆಯರೆಲ್ಲರೂ ಅವನ ಸುತ್ತುವರಿದು ಅಳುತ್ತಾ, ದೋರ್ಕಳು ಜೀವದಿಂದ ಇದ್ದಾಗ ತಮಗೆ ಮಾಡಿಕೊಟ್ಟ ಬಟ್ಟೆಬರೆಗಳನ್ನು ಅವನಿಗೆ ತೋರಿಸಿದರು.


ಅದನ್ನು ನೋಡಲು ಜನರು ಹೊರಟು ಯೇಸುವಿನ ಬಳಿಗೆ ಬಂದರು. ಪಿಶಾಚಿಗಳಿಂದ ಬಿಡುಗಡೆಯಾಗಿದ್ದ ಆ ವ್ಯಕ್ತಿ ಬಟ್ಟೆಯನ್ನು ತೊಟ್ಟುಕೊಂಡು, ಸ್ವಸ್ಥಬುದ್ಧಿಯುಳ್ಳವನಾಗಿ, ಯೇಸುವಿನ ಪಾದಗಳ ಬಳಿ ಕುಳಿತಿದ್ದನ್ನು ಅವರೆಲ್ಲರೂ ಕಂಡು ಗಾಬರಿಗೊಂಡರು.


ಯೇಸು ದಡದ ಮೇಲೆ ಕಾಲಿಟ್ಟದ್ದೇ ತಡ, ಆ ಊರಿನವನೊಬ್ಬನು ಬಂದು ಅವರನ್ನು ಎದುರುಗೊಂಡನು. ಅವನಿಗೆ ಪಿಶಾಚಿ ಹಿಡಿದಿತ್ತು. ಅವನು ಬಟ್ಟೆತೊಟ್ಟು ಬಹಳ ದಿನಗಳಾಗಿತ್ತು; ಮನೆ ಬಿಟ್ಟು ಸಮಾಧಿಗಳ ಗುಹೆಗಳಲ್ಲೇ ವಾಸಿಸುತ್ತಿದ್ದನು.


ಆಗ ಎಫ್ರಯಿಮರಲ್ಲಿ ಮುಖಂಡರಾಗಿದ್ದ ಯೆಹೋಹಾನಾನನ ಮಗ ಅಜರ್ಯ, ಮೆಷಿಲ್ಲೇಮೋತನ ಮಗ ಬೆರೆಕ್ಯ, ಶಲ್ಲೂಮನ ಮಗ ಹಿಜ್ಕೀಯ, ಹದ್ಲೈಯನ ಮಗ ಅಮಾಸ ಎಂಬವರು ಯುದ್ಧದಿಂದ ಬರುತ್ತಿದ್ದವರ ಮುಂದೆ ನಿಂತು,


ಯೋಧರು ಇದನ್ನು ಕೇಳಿ ಸೆರೆಯವರನ್ನೂ ಕೊಳ್ಳೆಯನ್ನೂ ಅಧಿಪತಿಗಳ ಮತ್ತು ಸಮೂಹದವರ ಮುಂದೆಯೇ ಬಿಟ್ಟುಬಿಟ್ಟರು.


ಅವರು, “ಹಿಂದಕ್ಕೆ ಕೊಡುತ್ತೇವೆ; ಅವರಿಂದ ಏನೂ ಕೇಳುವುದಿಲ್ಲ. ನೀವು ಹೇಳಿದಂತೆಯೇ, ಮಾಡುತ್ತೇವೆ,” ಎಂದು ಉತ್ತರಕೊಟ್ಟರು. ಆಗ ನಾನು ಯಾಜಕರನ್ನು ಕರೆಯಿಸಿದೆ; ಯಾಜಕರ ಮುಂದೆ, ತಾವು ಕೊಟ್ಟ ಮಾತಿನಂತೆ ನಡೆಯುವುದಾಗಿ ಪ್ರಮಾಣ ಮಾಡಿಸಿದೆ.


ಆಗ ಅರಸನು ಅವರಿಗಾಗಿ ಒಂದು ದೊಡ್ಡ ಔತಣವನ್ನು ಮಾಡಿಸಿ, ಅವರು ಅನ್ನಪಾನಗಳನ್ನು ತೆಗೆದುಕೊಂಡ ಮೇಲೆ, ಅವರನ್ನು ಅವರ ಯಜಮಾನನ ಬಳಿಗೆ ಕಳುಹಿಸಿದನು. ಅಂದಿನಿಂದ ಸುಲಿಗೆಮಾಡುವ ಸಿರಿಯಾದ ಗುಂಪುಗಳು ಇಸ್ರಯೇಲರ ಪ್ರಾಂತದೊಳಗೆ ಮತ್ತೆ ಬರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು