Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:17 - ಕನ್ನಡ ಸತ್ಯವೇದವು C.L. Bible (BSI)

17 ಏಕೆಂದರೆ ಎದೋಮ್ಯರು ಯೆಹೂದ್ಯರ ಮೇಲೆ ಮರಳಿ ಯುದ್ಧಕ್ಕೆ ಬಂದು ಅವರನ್ನು ಸೋಲಿಸಿ ಅನೇಕ ಜನರನ್ನು ಸೆರೆಗೊಯ್ದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಏಕೆಂದರೆ ಎದೋಮ್ಯರು ಯೆಹೂದ್ಯರ ಮೇಲೆ ತಿರುಗಿ ಯುದ್ಧಕ್ಕೆ ಬಂದು ಅವರನ್ನು ಸೋಲಿಸಿ ಅನೇಕ ಜನರನ್ನು ಸೆರೆಯಾಗಿ ಒಯ್ದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯಾಕಂದರೆ ಎದೋಮ್ಯರು ಯೆಹೂದ್ಯರ ಮೇಲೆ ತಿರಿಗಿ ಯುದ್ಧಕ್ಕೆ ಬಂದು ಅವರನ್ನು ಸೋಲಿಸಿ ಅನೇಕಾನೇಕರನ್ನು ಸೆರೆಯೊಯ್ದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಏಕೆಂದರೆ ಎದೋಮ್ಯರು ತಿರುಗಿಬಂದು ಯೆಹೂದದವರನ್ನು ಸಂಹರಿಸಿ, ಕೆಲವರನ್ನು ಸೆರೆಯಾಗಿ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:17
9 ತಿಳಿವುಗಳ ಹೋಲಿಕೆ  

“ನಿನ್ನ ತಮ್ಮನಾದ ಯಕೋಬನ ವಿರುದ್ಧ ನಡೆಸಿದ ಹಿಂಸಾಕೃತ್ಯಗಳಿಗಾಗಿ ನೀನು ಅವಮಾನಕ್ಕೊಳಗಾಗುವೆ. ನಿತ್ಯನಾಶನಕ್ಕೆ ಈಡಾಗುವೆ.


“ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಗೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ದಂಡಿಸುವೆನು; ನಿಮ್ಮ ಗರ್ವವನ್ನು ಅಡಗಿಸುವೆನು.


ಅದೇ ಕಾರಣದಿಂದ ನಮ್ಮ ಹಿರಿಯರು ಕತ್ತಿಗೆ ತುತ್ತಾಗಿದ್ದಾರೆ. ನಮ್ಮ ಗಂಡುಹೆಣ್ಣುಮಕ್ಕಳೂ ಹೆಂಡತಿಯರೂ ಸೆರೆಯಾಳುಗಳಾಗಿ ಹೋಗಬೇಕಾಯಿತು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ಎದೋಮ್ ಯೆಹೂದವಂಶಕ್ಕೆ ಪ್ರತೀಕಾರಮಾಡಿದೆ; ಮುಯ್ಯಿಗೆ ಮುಯ್ಯಿ ತೀರಿಸಿ ಮಹಾಪರಾಧವನ್ನು ನಡೆಸಿದೆ;


ಸರ್ವೇಶ್ವರ ಇಂತೆನ್ನುತ್ತಾರೆ: ಎದೋಮ್ ಪ್ರಾಂತ್ಯದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ತಮ್ಮ ಸೋದರ ನಾಡಿನವರಾದ ಇಸ್ರಯೇಲರನ್ನು ಓಡಿಸಿದರು. ಅವರಿಗೆ ಕರುಣೆತೋರದೆ, ಕೊನೆಯವರೆವಿಗೂ ರೋಷವನ್ನೇ ಸಾಧಿಸಿದರು.


ಹೀಗೆ ಎದೋಮ್ಯರು ಯೆಹೂದ್ಯರಿಗೆ ವಿರುದ್ಧ ದಂಗೆ ಎದ್ದರು. ಅವರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿರುತ್ತಾರೆ. ಅದೇ ಕಾಲದಲ್ಲಿ ಲಿಬ್ನದವರೂ ಸ್ವತಂತ್ರರಾದರು.


ಯೆಹೋರಾಮನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರುದ್ಧ ದಂಗೆಯೆದ್ದರು; ಸ್ವತಂತ್ರರಾಗಿ ತಾವೇ ತಮಗೊಬ್ಬ ಅರಸನನ್ನು ನೇಮಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು