Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:18 - ಕನ್ನಡ ಸತ್ಯವೇದವು C.L. Bible (BSI)

18 ಫಿಲಿಷ್ಟಿಯರು ಜುದೇಯದ ಇಳಕಲಿನ ಪ್ರದೇಶದ ಮತ್ತು ದಕ್ಷಿಣಪ್ರಾಂತದ ಪಟ್ಟಣಗಳ ಮೇಲೆ ದಾಳಿಮಾಡಿ ಬೇತ್ಷೆಮೆಷ್, ಅಯ್ಯಾಲೋನ್, ಗೆದೇರೋತ್ ಇವುಗಳನ್ನೂ ಸೋಕೋ, ತಿಮ್ನಾ, ಗಿಮ್ಜೋ ಇವುಗಳನ್ನೂ ಇವುಗಳಿಗೆ ಸೇರಿದ ಗ್ರಾಮಗಳನ್ನೂ ಸ್ವಾಧೀನಮಾಡಿಕೊಂಡು ಅವುಗಳಲ್ಲಿ ವಾಸವಾಗಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಫಿಲಿಷ್ಟಿಯರು ಯೆಹೂದದ ತಗ್ಗಾದ ಪ್ರದೇಶದ ಮತ್ತು ದಕ್ಷಿಣಪ್ರಾಂತ್ಯದ ಪಟ್ಟಣಗಳ ಮೇಲೆ ಬಿದ್ದು ಬೇತ್‌ಷೆಮೆಷ್‌, ಅಯ್ಯಾಲೋನ್, ಗೆದೇರೋತ್ ಇವುಗಳನ್ನೂ ಸೋಕೋ, ತಿಮ್ನಾ, ಗಿಮ್ಜೋ ಇವುಗಳನ್ನೂ ಇವುಗಳಿಗೆ ಸೇರಿದ ಗ್ರಾಮಗಳನ್ನೂ ಸ್ವಾಧೀನಮಾಡಿಕೊಂಡು ಅವುಗಳಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಫಿಲಿಷ್ಟಿಯರು ಯೆಹೂದದ ಇಳಕಲಿನ ಪ್ರದೇಶದ ಮತ್ತು ದಕ್ಷಿಣಪ್ರಾಂತದ ಪಟ್ಟಣಗಳ ಮೇಲೆ ಬಿದ್ದು ಬೇತ್ಷೆಮೆಷ್, ಅಯ್ಯಾಲೋನ್, ಗೆದೇರೋತ್ ಇವುಗಳನ್ನೂ ಸೋಕೋ, ತಿಮ್ನಾ, ಗಿಮ್ಜೋ ಇವುಗಳನ್ನೂ ಇವುಗಳಿಗೆ ಸೇರಿದ ಗ್ರಾಮಗಳನ್ನೂ ಸ್ವಾಧೀನಮಾಡಿಕೊಂಡು ಅವುಗಳಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಫಿಲಿಷ್ಟಿಯರು ಸಹ ಬೆಟ್ಟಪ್ರದೇಶಗಳ ಪಟ್ಟಣಗಳ ಮೇಲೆಯೂ ಧಾಳಿ ಮಾಡಿದರು. ಬೇತ್ಷಮೆಷ್, ಅಯ್ಯಾಲೋನ್, ಗೆದೇರೋತ್, ಸೋಕೋ, ತಿಮ್ನಾ ಮತ್ತು ಗಿಮ್ಜೋ ಪಟ್ಟಣಗಳನ್ನು ಅವರು ವಶಪಡಿಸಿಕೊಂಡರು. ಅಲ್ಲದೆ ಆ ಪಟ್ಟಣಗಳ ಸುತ್ತಮುತ್ತಲಿನ ಊರುಗಳನ್ನೂ ವಶಪಡಿಸಿಕೊಂಡರು. ಫಿಲಿಷ್ಟಿಯರು ಆ ಪಟ್ಟಣಗಳಲ್ಲಿ ವಾಸ ಮಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇದಲ್ಲದೆ ಫಿಲಿಷ್ಟಿಯರು ತಗ್ಗಿನ ದೇಶದ ಪಟ್ಟಣಗಳಲ್ಲಿಯೂ, ಯೆಹೂದದ ದಕ್ಷಿಣ ಪ್ರಾಂತದಲ್ಲಿಯೂ ನುಗ್ಗಿ, ಬೇತ್ ಷೆಮೆಷ್, ಅಯ್ಯಾಲೋನ್, ಗೆದೇರೋತ್, ಸೋಕೋ ಅದರ ಗ್ರಾಮಗಳನ್ನೂ, ತಿಮ್ನಾ ಅದರ ಗ್ರಾಮಗಳನ್ನೂ, ಗಿಮ್ಜೋ ಅದರ ಗ್ರಾಮಗಳನ್ನೂ ತೆಗೆದುಕೊಂಡು ಅಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:18
13 ತಿಳಿವುಗಳ ಹೋಲಿಕೆ  

ನೀನು ಗರ್ವಪಡುತ್ತಿದ್ದ ಆ ಕಾಲದಲ್ಲಿ ಸೊದೋಮೆಂಬ ನಿನ್ನ ತಂಗಿಯ ಹೆಸರು ನಿನ್ನ ಬಾಯಲ್ಲಿ ಬರಲೇ ಇಲ್ಲ;


“ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನ ಆಹಾರವನ್ನು ಕಡಿಮೆಮಾಡಿದೆ; ನಿನ್ನನ್ನು ದ್ವೇಷಿಸಿ, ನಿನ್ನ ಕೆಟ್ಟನಡತೆಗೆ ಅಸಹ್ಯಪಡುವ ಪಿಲಿಷ್ಟಿಯ ಕುವರಿಯರ ಕೈಗೆ ನಿನ್ನನ್ನು ಒಪ್ಪಿಸಿದೆ.


ಅಜೇಕ, ಚೊರ್ಗ, ಅಯ್ಯಾಲೋನ್ ಹಾಗೂ ಹೆಬ್ರೋನ್. ಕೋಟೆಕೊತ್ತಲಗಳಿಂದ ಕೂಡಿದ್ದ ಈ ಪಟ್ಟಣಗಳು ಯೆಹೂದ-ಬೆನ್ಯಾಮೀನ್ ಕುಲ ಪ್ರಾಂತ್ಯಗಳಾಗಿದ್ದವು.


ಬಂಡಿ ಹೋಗುವ ದಾರಿಯನ್ನು ಗಮನಿಸಿರಿ. ಅದು ತಾನಾಗಿ ಸ್ವದೇಶದ ದಾರಿಹಿಡಿದು ಬೇತ್‍ಷೆಮೆಷಿನ ಕಡೆಗೆ ಹೋದರೆ ಈಗ ಬಂದಿರುವ ಕೇಡನ್ನು ಕಳುಹಿಸಿದವನು ಆ ಸರ್ವೇಶ್ವರನೇ ಎಂದು ತಿಳಿಯಿರಿ. ಬಂಡಿ ಆ ಮಾರ್ಗವನ್ನು ಹಿಡಿಯದಿದ್ದರೆ ಆ ಸರ್ವೇಶ್ವರನ ಹಸ್ತ ನಮ್ಮನ್ನು ಮುಟ್ಟಲಿಲ್ಲ, ಈ ಕೇಡು ಆಕಸ್ಮಿಕವಾಗಿ ಬಂದಿದೆ ಎಂದು ತಿಳಿದುಕೊಳ್ಳಿ,” ಎಂದು ಹೇಳಿದರು.


ಸಂಸೋನನು ತಿಮ್ನಾ ಊರಿಗೆ ಇಳಿದುಹೋಗಿ ಅಲ್ಲಿನ ಫಿಲಿಷ್ಟಿಯರ ಹೆಣ್ಣುಗಳಲ್ಲಿ ಒಬ್ಬಳನ್ನು ನೋಡಿದನು.


ಮಲೆನಾಡಿನ ಪ್ರದೇಶದಲ್ಲಿರುವ ಶಾಮೀರ್, ಯತ್ತೀರ್, ಸೋಕೋ,


ಮಕ್ಕೇದಾ ಎಂಬ ಹದಿನಾರು ನಗರಗಳು, ಅವುಗಳ ಗ್ರಾಮಗಳು;


ಅಲ್ಲಿಂದ ಪಶ್ಚಿಮದಲ್ಲಿ ಇರುವ ಸೇಯಿರ್ ಬೆಟ್ಟದ ಕಡೆಗೆ ತಿರುಗಿಕೊಂಡು ಕೆಸಾಲೋನ್ ಎನಿಸಿಕೊಳ್ಳುವ ಯಾರೀಮ್ ಬೆಟ್ಟದ ಉತ್ತರಮಾರ್ಗವಾಗಿ ಇಳಿಯುತ್ತಾ ಬೇತ್ ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಬಂದು


ಯೆಹೂದ ಪ್ರಾಂತ್ಯದ ಸೋಕೋವಿನಲ್ಲಿ ಫಿಲಿಷ್ಟಿಯರು ಯುದ್ಧಕ್ಕಾಗಿ ಸೈನ್ಯವನ್ನು ಜಮಾಯಿಸಿದ್ದರು. ಸೋಕೋವಿಗೂ ಅಜೇಕಕ್ಕೂ ಮಧ್ಯೆಯಿರುವ ಎಫೆಸ್ದಮ್ಮೀಮಿನಲ್ಲಿ ಬೀಡುಬಿಟ್ಟಿದ್ದರು.


ಗಾಜಪ್ರಾಂತ್ಯದವರೆಗೆ ವಾಸವಾಗಿದ್ದ ಫಿಲಿಷ್ಟಿಯರನ್ನು ಸೋಲಿಸಿ ಕಾವಲುಗಾರರ ಗೋಪುರವಿದ್ದ ಚಿಕ್ಕ ಹಳ್ಳಿ ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಮಹಾನಗರಗಳವರೆಗೂ ಎಲ್ಲಾ ಊರುಗಳನ್ನು ಹಾಳುಮಾಡಿದನು.


ಇವರು ಇಸ್ರಯೇಲರನ್ನು ನುಂಗಿಬಿಡಲು ಬಾಯಿ ತೆರೆದಿದ್ದಾರೆ. ಇಷ್ಟಾದರೂ ಸ್ವಾಮಿಯ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಬೇತ್ಚೂರ್, ಸೋಕೋ, ಅದುಲ್ಲಾಮ್, ಗತ್‍ಊರು,


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಫಿಲಿಷ್ಟಿಯರು ಜುದೇಯಕ್ಕೆ ಪ್ರತೀಕಾರ ಮಾಡಿದ್ದಾರೆ; ಹೌದು, ಮುಯ್ಯಿಗೆ ಮುಯ್ಯಿ ತೀರಿಸುತ್ತಾ, ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ದೀರ್ಘದ್ವೇಷದಿಂದ ಹಾಳುಮಾಡಿದ್ದಾರೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು