Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:24 - ಕನ್ನಡ ಸತ್ಯವೇದವು C.L. Bible (BSI)

24 ಇದಲ್ಲದೆ, ಅಹಾಜನು ದೇವಾಲಯದ ಸಾಮಗ್ರಿಗಳನ್ನು ಕೂಡಿಸಿ, ಅವುಗಳನ್ನು ಚೂರುಚೂರು ಮಾಡಿಬಿಟ್ಟನು; ಸರ್ವೇಶ್ವರನ ಆಲಯದ ಬಾಗಿಲುಗಳನ್ನು ಮುಚ್ಚಿ ಜೆರುಸಲೇಮಿನ ಪ್ರತಿಯೊಂದು ಮೂಲೆಯಲ್ಲೂ ಯಜ್ಞವೇದಿಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇದಲ್ಲದೆ, ಆಹಾಜನು ದೇವಾಲಯದ ಸಾಮಾನುಗಳನ್ನು ಒಟ್ಟುಗೂಡಿಸಿ ಅವುಗಳನ್ನು ಒಡೆದುಹಾಕಿದನು; ಯೆಹೋವನ ಆಲಯದ ಬಾಗಿಲುಗಳನ್ನು ಮುಚ್ಚಿ ಯೆರೂಸಲೇಮಿನ ಪ್ರತಿಯೊಂದು ಮೂಲೆಯಲ್ಲಿಯೂ ಯಜ್ಞವೇದಿಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇದಲ್ಲದೆ ಆಹಾಜನು ದೇವಾಲಯದ ಸಾಮಾನುಗಳನ್ನು ಕೂಡಿಸಿ ಅವುಗಳನ್ನು ಕತ್ತರಿಸಿಬಿಟ್ಟನು; ಯೆಹೋವನ ಆಲಯದ ಬಾಗಲುಗಳನ್ನು ಮುಚ್ಚಿ ಯೆರೂಸಲೇವಿುನ ಪ್ರತಿಯೊಂದು ಮೂಲೆಯಲ್ಲಿಯೂ ಯಜ್ಞವೇದಿಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಇದಲ್ಲದೆ ದೇವಾಲಯದಿಂದ ಉಪಕರಣಗಳನ್ನೆಲ್ಲಾ ಆಹಾಜನು ಹೊರತೆಗೆದು ಅವುಗಳನ್ನು ಒಡೆದು ಚೂರುಚೂರು ಮಾಡಿದನು; ದೇವಾಲಯದ ಬಾಗಿಲನ್ನು ಮುಚ್ಚಿಸಿದನು. ಅವನು ವೇದಿಕೆಗಳನ್ನು ಮಾಡಿಸಿ ಜೆರುಸಲೇಮಿನ ರಸ್ತೆಗಳ ಮೂಲೆ ಮೂಲೆಗಳಲ್ಲಿ ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇದಲ್ಲದೆ ಆಹಾಜನು ದೇವರ ಮನೆಯ ಸಲಕರಣೆಗಳನ್ನು ಕೂಡಿಸಿ, ದೇವರ ಆಲಯದ ಸಾಮಗ್ರಿಗಳನ್ನು ಚೂರುಚೂರು ಮಾಡಿ ಕತ್ತರಿಸಿ, ಯೆಹೋವ ದೇವರ ಮನೆಯ ಬಾಗಿಲುಗಳನ್ನು ಮುಚ್ಚಿಬಿಟ್ಟು, ಯೆರೂಸಲೇಮಿನ ಸಮಸ್ತ ಮೂಲೆಗಳಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:24
12 ತಿಳಿವುಗಳ ಹೋಲಿಕೆ  

ಅದರ ಮಂಟಪದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ನಂದಿಸಿದರು; ಇಸ್ರಯೇಲ್‍ದೇವರ ಪವಿತ್ರಸ್ಥಾನದಲ್ಲಿ ಧೂಪಾರತಿ ಎತ್ತುವುದನ್ನೂ ದಹನಬಲಿ ಸಮರ್ಪಿಸುವುದನ್ನೂ ನಿಲ್ಲಿಸಿಬಿಟ್ಟರು.


ಅವರು ಜೆರುಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು.


ನಿಮ್ಮ ಪಟ್ಟಣದಲ್ಲಿ ನಾನು ತಿರುಗಾಡುತ್ತಾ, ನೀವು ಪೂಜಿಸುವ ವಿಗ್ರಹಗಳನ್ನು ಗಮನಿಸುತ್ತಾ ಇದ್ದಾಗ ಒಂದು ಬಲಿಪೀಠವು ಕಣ್ಣಿಗೆ ಬಿದ್ದಿತು. ಅದರ ಮೇಲೆ ‘ಅಜ್ಞಾತ ದೇವರಿಗೆ’ ಎಂಬ ಲಿಖಿತವಿತ್ತು. ನೀವು ಅರಿಯದೆ ಆರಾಧಿಸುವ ಆ ದೇವರನ್ನೇ ಅರುಹಿಸಲು ನಾನು ಬಂದಿರುತ್ತೇನೆ.


ಅಥೆನ್ಸಿನಲ್ಲಿ ಪೌಲನು, ಸೀಲ ಮತ್ತು ತಿಮೊಥೇಯರನ್ನು ಎದುರುನೋಡುತ್ತಿದ್ದನು. ಆ ಪಟ್ಟಣದಲ್ಲಿ ಎಲ್ಲಿ ನೋಡಿದರಲ್ಲಿ ವಿಗ್ರಹಗಳಿರುವುದನ್ನು ಕಂಡು, ಅವನ ಮನಸ್ಸು ಕುದಿಯಿತು.


ಆದರೂ ಗಿಲ್ಯಾದಿನಲ್ಲಿ ಅಧರ್ಮ ನೆಲೆಗೊಂಡಿದೆ. ಅದಕ್ಕೆ ದುರ್ಗತಿ ಕಾದಿದೆ. ಗಿಲ್ಗಾಲಿನಲ್ಲಿ ಬಸವನಿಗೆ ಯಜ್ಞಗಳನ್ನು ಅರ್ಪಿಸಲಾಗುತ್ತಿದೆ. ಅಲ್ಲಿನ ಯಜ್ಞವೇದಿಗಳು ಪುಡಿಪುಡಿಯಾಗುವುವು; ಉಳುವ ನೇಗಿಲಿಗೆ ಸಿಕ್ಕುವ ಕಲ್ಲುಕುಪ್ಪೆಗಳಾಗುವುವು.”


“ಎಲೈ ಯೆಹೂದ ಜನರೇ, ನೀವು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿಮಗೆ ಕೇಡು ಸಂಭವಿಸಿದಾಗ ನಿಮ್ನನ್ನು ಉದ್ಧರಿಸಲು ಅವರು ಶಕ್ತರಾಗಿದ್ದರೆ ಎದ್ದುಬರಲಿ ! ನಿಮಗೆ ನಗರಗಳು ಎಷ್ಟಿವೆಯೋ ಅಷ್ಟೂ ದೇವರುಗಳು ಇದ್ದಾರೆ!


ಹಿಜ್ಕೀಯನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಸರ್ವೇಶ್ವರನ ಆಲಯದ ಬಾಗಿಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು.


ಅನ್ಯದೇವತೆಗಳಿಗೆ ಧೂಪಹಾಕುವುದಕ್ಕಾಗಿ ಜುದೇಯದ ಎಲ್ಲ ಪಟ್ಟಣಗಳಲ್ಲೂ ಪೂಜಾಸ್ಥಳಗಳನ್ನು ನಿರ್ಮಿಸಿದನು. ಹೀಗೆ ತನ್ನ ಪಿತೃಗಳ ದೇವರಾದ ಸರ್ವೇಶ್ವರನನ್ನು ರೇಗಿಸಿದನು.


ಅರಸ ಅಹಾಜನು, ತನ್ನ ಆಳ್ವಿಕೆಯಲ್ಲಿ ದೇವದ್ರೋಹಿಯಾಗಿ ತಳ್ಳಿಬಿಟ್ಟಿದ್ದ ಪಾತ್ರೆಗಳನ್ನು ಮತ್ತೆ ತಂದು ಇಟ್ಟು ಪ್ರತಿಷ್ಠಿಸಿದ್ದೇವೆ; ಅವು ಈಗ ಸರ್ವೇಶ್ವರನ ಬಲಿಪೀಠದ ಮುಂದಿರುತ್ತವೆ,” ಎಂದು ವರದಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು