Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:26 - ಕನ್ನಡ ಸತ್ಯವೇದವು C.L. Bible (BSI)

26 ಅಹಾಜನ ಉಳಿದ ಪೂರ್ವೋತ್ತರ ಚರಿತ್ರೆ ಹಾಗು ಅವನ ಎಲ್ಲ ಪ್ರವರ್ತನೆಗಳು ಯೆಹೂದ್ಯರ ಮತ್ತು ಇಸ್ರಯೇಲರ ರಾಜಗ್ರಂಥದಲ್ಲಿ ಲಿಖಿತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಹಾಜನ ಉಳಿದ ಪೂರ್ವೋತ್ತರ ಚರಿತ್ರೆಯೂ ಮತ್ತು ಮಾಡಿದ ಅವನ ಎಲ್ಲಾ ಕೃತ್ಯಗಳೂ ಯೆಹೂದ್ಯರ ಮತ್ತು ಇಸ್ರಾಯೇಲರ ರಾಜ ಗ್ರಂಥದಲ್ಲಿ ಬರೆಯಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಹಾಜನ ಉಳಿದ ಪೂರ್ವೋತ್ತರ ಚರಿತ್ರೆಯೂ ಅವನ ಎಲ್ಲಾ ಪ್ರವರ್ತನೆಗಳೂ ಯೆಹೂದ್ಯರ ಮತ್ತು ಇಸ್ರಾಯೇಲ್ಯರ ರಾಜಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆರಂಭದಿಂದ ಕೊನೆಯ ತನಕ ಆಹಾಜನು ಮಾಡಿದ ಇತರ ಕಾರ್ಯಗಳೆಲ್ಲವನ್ನು ಕುರಿತು ಯೆಹೂದದ ಮತ್ತು ಇಸ್ರೇಲರ ಅರಸರ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವನ ಆಳ್ವಿಕೆಯಲ್ಲಿಯ ಇತರ ಕ್ರಿಯೆಗಳೂ, ಅವನ ಸಕಲ ಮಾರ್ಗಗಳೂ, ಮೊದಲನೆಯವುಗಳೂ, ಕಡೆಯವುಗಳೂ ಯೆಹೂದದ ಮತ್ತು ಇಸ್ರಾಯೇಲರ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:26
6 ತಿಳಿವುಗಳ ಹೋಲಿಕೆ  

ಯೆಹೋಷಾಫಾಟನ ಉಳಿದ ಪೂರ್ವೋತ್ತರ ಚರಿತ್ರೆ ಇಸ್ರಯೇಲ್ ರಾಜರ ಗ್ರಂಥದಲ್ಲಿ ಹನಾನೀಯನ ಮಗ ಯೇಹುವಿನ ವೃತ್ತಾಂತದಲ್ಲಿ ದಾಖಲಾಗಿದೆ.


ಅನ್ಯದೇವತೆಗಳಿಗೆ ಧೂಪಹಾಕುವುದಕ್ಕಾಗಿ ಜುದೇಯದ ಎಲ್ಲ ಪಟ್ಟಣಗಳಲ್ಲೂ ಪೂಜಾಸ್ಥಳಗಳನ್ನು ನಿರ್ಮಿಸಿದನು. ಹೀಗೆ ತನ್ನ ಪಿತೃಗಳ ದೇವರಾದ ಸರ್ವೇಶ್ವರನನ್ನು ರೇಗಿಸಿದನು.


ರೆಹಬ್ಬಾಮನ ಪೂರ್ವೋತ್ತರ ಕೃತ್ಯಗಳು ಪ್ರವಾದಿಯಾದ ಶೆಮಾಯ ಹಾಗೂ ದರ್ಶಿಯಾದ ಇದ್ದೋ ಎಂಬುವರ ಚರಿತ್ರೆಗಳ ವಂಶಾವಳಿ ಭಾಗದಲ್ಲಿ ಬರೆದಿರುತ್ತವೆ. ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು.


ಅವನು ಪಟ್ಟಕ್ಕೆ ಬಂದಾಗ ಮೂವತ್ತ ಎರಡು ವರ್ಷದವನಾಗಿದ್ದನು. ಜೆರುಸಲೇಮಿನಲ್ಲಿ ಎಂಟುವರ್ಷ ಆಳಿದನು. ಅವನು ತೀರಿಹೋದಾಗ ಯಾರೂ ಶೋಕಿಸಲಿಲ್ಲ. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು; ಆದರೆ ರಾಜಸ್ಮಶಾನದಲ್ಲಿ ಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು