2 ಪೂರ್ವಕಾಲ ವೃತ್ತಾಂತ 28:6 - ಕನ್ನಡ ಸತ್ಯವೇದವು C.L. Bible (BSI)6 ರೆಮಲ್ಯನ ಮಗ ಪೆಕಹ ಎಂಬವನು ಒಂದೇ ದಿವಸ ಯೆಹೂದ್ಯರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಲ್ಲಿಸಿದನು. ಇವರೆಲ್ಲರು ರಣವೀರರು. ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ಬಿಟ್ಟದ್ದೇ ಇದಕ್ಕೆ ಕಾರಣವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ರೆಮಲ್ಯನ ಮಗನು ಇಸ್ರಾಯೇಲ್ಯರ ಅರಸನು ಆದ ಪೆಕಹ ಎಂಬವನು ಒಂದೇ ದಿನ ಯೆಹೂದ್ಯರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಲ್ಲಿಸಿದನು. ಇವರೆಲ್ಲರೂ ಯುದ್ಧವೀರರು. ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತೊರೆದು ಬಿಟ್ಟಿದ್ದೇ ಇದಕ್ಕೆ ಕಾರಣವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ರೆಮಲ್ಯನ ಮಗನಾದ ಪೆಕಹ ಎಂಬವನು ಒಂದೇ ದಿವಸ ಯೆಹೂದ್ಯರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಲ್ಲಿಸಿದನು. ಇವರೆಲ್ಲರೂ ರಣವೀರರು. ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಯೆಹೋವನನ್ನು ಬಿಟ್ಟದ್ದೇ ಇದಕ್ಕೆ ಕಾರಣ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ರೆಮಲ್ಯನ ಮಗ ಪೆಕಹನು ಒಂದೇ ದಿವಸದೊಳಗೆ ಅವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು. ಇವರೆಲ್ಲರು ಪರಾಕ್ರಮಶಾಲಿಗಳಾಗಿದ್ದರು. ಅಧ್ಯಾಯವನ್ನು ನೋಡಿ |