Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:10 - ಕನ್ನಡ ಸತ್ಯವೇದವು C.L. Bible (BSI)

10 ಈಗ ನಮ್ಮ ಮೇಲಿರುವ ದೈವಕೋಪಾಗ್ನಿ ತೊಲಗಿಹೋಗುವಂತೆ ಇಸ್ರಯೇಲ್ ದೇವರಾದ ಸರ್ವೇಶ್ವರನೊಡನೆ ಒಡಂಬಡಿಕೆ ಮಾಡಿಕೊಳ್ಳುವುದಕ್ಕೆ ತೀರ್ಮಾನಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಈಗ ನಮ್ಮ ಮೇಲಿರುವ ಆತನ ಕೋಪಾಗ್ನಿಯು ತೊಲಗಿ ಹೋಗುವಂತೆ ಇಸ್ರಾಯೇಲಿನ ದೇವರಾದ ಯೆಹೋವನೊಡನೆ ಒಡಂಬಡಿಕೆ ಮಾಡಿಕೊಳ್ಳುವುದಕ್ಕೆ ಮನಸ್ಸುಳ್ಳವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಈಗ ನಮ್ಮ ಮೇಲಿರುವ ಆತನ ಕೋಪಾಗ್ನಿಯು ತೊಲಗಿಹೋಗುವಂತೆ ಇಸ್ರಾಯೇಲ್‍ದೇವರಾದ ಯೆಹೋವನೊಡನೆ ಒಡಂಬಡಿಕೆ ಮಾಡಿಕೊಳ್ಳುವದಕ್ಕೆ ಮನಸ್ಸುಳ್ಳವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದ್ದರಿಂದ ಹಿಜ್ಕೀಯನಾದ ನಾನು ಇಸ್ರೇಲರ ದೇವರಾದ ಯೆಹೋವನೊಂದಿಗೆ ಒಡಂಬಡಿಕೆ ಮಾಡುತ್ತೇನೆ. ಆತನು ಇನ್ನು ಮುಂದೆ ನಮ್ಮ ಮೇಲೆ ಸಿಟ್ಟುಗೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಉಗ್ರಕೋಪವು ನಮ್ಮನ್ನು ಬಿಟ್ಟುಹೋಗುವ ಹಾಗೆ, ನಾನು ಅವರ ಸಂಗಡ ಒಡಂಬಡಿಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:10
19 ತಿಳಿವುಗಳ ಹೋಲಿಕೆ  

ಸಿಯೋನಿಗೆ ಅಭಿಮುಖರಾಗಿ, ಮಾರ್ಗವನ್ನು ವಿಚಾರಿಸುತ್ತಾ, ‘ಬನ್ನಿ, ಸರ್ವೇಶ್ವರನನ್ನು ಆಶ್ರಯಿಸಿ, ಎಂದಿಗೂ ಮರೆಯಲಾಗದ ಶಾಶ್ವತ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.


ಅನಂತರ ಯೆಹೋಯಾದನು ಎಲ್ಲ ಜನರನ್ನೂ ಅರಸನನ್ನೂ ಪ್ರೇರಿಸಿ ತಾವೆಲ್ಲರೂ ಸರ್ವೇಶ್ವರನ ಪ್ರಜೆಗಳಾಗಿರುವೆವೆಂದು ಅವರೊಡನೆ ಪ್ರಮಾಣಮಾಡಿದನು.


ನೀನು ಹಾಗು ನಮ್ಮ ದೇವರ ಆಜ್ಞೆಯನ್ನು ಗೌರವಿಸುವವರು ಹೇಳಿಕೊಟ್ಟ ಬುದ್ಧಿವಾದಾನುಸಾರ ಅಂಥ ಎಲ್ಲ ಹೆಂಡತಿಯರನ್ನೂ ಅವರ ಮಕ್ಕಳನ್ನೂ ಕಳುಹಿಸಿಬಿಡುವುದಾಗಿ, ಈಗಲೇ ನಮ್ಮ ದೇವರಿಗೆ ಪ್ರತಿಜ್ಞೆಮಾಡಿ, ಧರ್ಮಶಾಸ್ತ್ರಕ್ಕನುಸಾರ ನಡೆಯೋಣ.


ಇದನ್ನು, ನಾವು ನಿರೀಕ್ಷಿಸಲೇ ಇಲ್ಲ! ಮೊಟ್ಟಮೊದಲು ಅವರು ತಮ್ಮನ್ನೇ ಪ್ರಭುವಿಗೆ ಸಮರ್ಪಿಸಿದರು. ಅನಂತರ ದೈವಚಿತ್ತಕ್ಕೆ ಅನುಗುಣವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು.


ನನ್ನ ನಿಬಂಧನೆಗಳನ್ನು ಕೈಗೊಳ್ಳದೆ, ನನ್ನ ಒಡಂಬಡಿಕೆಯನ್ನು ಮೀರಿದವರಿಗೆ ಇಬ್ಭಾಗವಾಗಿ ಸೀಳಿದ ಕರುವಿನ ಗತಿ ಬರುವಂತೆ ಮಾಡುವೆನು.


ನೀವೋ ಕೂಡಲೆ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ಬಿಡುಗಡೆಯನ್ನು ಪ್ರಕಟಿಸಿ ನನ್ನ ಚಿತ್ತಾನುಸಾರ ನಡೆದಿರಿ. ನನ್ನ ಹೆಸರಿನಿಂದ ಖ್ಯಾತಗೊಂಡಿರುವ ದೇವಾಲಯದಲ್ಲಿ, ನನ್ನ ಸಮ್ಮುಖದಲ್ಲಿ ಒಪ್ಪಂದಮಾಡಿಕೊಂಡಿರಿ.


ಈ ಎಲ್ಲ ಕಾರಣಗಳಿಂದ ನಾವು ಲೇಖನ ರೂಪವಾದ ಪ್ರತಿಜ್ಞೆಯನ್ನು ಮಾಡಿದೆವು. ಅದಕ್ಕೆ ನಮ್ಮ ಮುಖಂಡರು, ಲೇವಿಯರು ಹಾಗು ಯಾಜಕರು ಸಹಿಮಾಡಿ, ಮುದ್ರೆಹಾಕಿದರು.


ಆದರೂ ಮನಸ್ಸೆಯ ದುಷ್ಕೃತ್ಯಗಳ ನಿಮಿತ್ತ ಯೆಹೂದ್ಯರ ಮೇಲಿದ್ದ ಸರ್ವೇಶ್ವರನ ಉಗ್ರಕೋಪ ಇಳಿದಿರಲಿಲ್ಲ.


ಕಂಬದ ಬಳಿಯಲ್ಲಿ ನಿಂತು ತಾನು ಸರ್ವೇಶ್ವರನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಸರ್ವೇಶ್ವರನಿಗೆ ಪ್ರಮಾಣ ಮಾಡಿದನು. ಎಲ್ಲಾ ಜನರೂ ಹಾಗೆಯೇ ಪ್ರಮಾಣ ಮಾಡಿದರು.


ಈಗ ನಿಮ್ಮ ಪೂರ್ವಜರಂತೆ ಆಜ್ಞೆಗೆ ಮಣಿಯದವರಾಗಬೇಡಿ. ಸರ್ವೇಶ್ವರನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಸರ್ವೇಶ್ವರ ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡ ಪವಿತ್ರಾಲಯಕ್ಕೆ ಬಂದು ಅವರನ್ನು ಅವಲಂಬಿಸಿರಿ. ಆಗ ನಿಮ್ಮ ಮೇಲಿರುವ ಅವರ ಉಗ್ರಕೋಪ ತೊಲಗಿಹೋಗುವುದು.


ಆದುದರಿಂದ ನಮ್ಮ ಮುಂದಾಳುಗಳು ಸರ್ವಸಮೂಹದ ಪರವಾಗಿ ಈ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರೆಲ್ಲರು, ನೇಮಿತ ದಿನದಲ್ಲಿ, ತಮ್ಮ ಊರಿನ ಹಿರಿಯರೊಡನೆ ಹಾಗು ನ್ಯಾಯಾಧಿಪತಿಗಳೊಡನೆ ಇಲ್ಲಿಗೆ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಬಗ್ಗೆ ತಾಳಿರುವ ಉಗ್ರಕೋಪ ಹೀಗೆ ಪರಿಹಾರವಾಗಲಿ,” ಎಂದು ಉತ್ತರಕೊಟ್ಟರು.


ಅವನ ಮೇಲೆ ಕಲ್ಲುಗಳ ಒಂದು ದೊಡ್ಡ ಗುಡ್ಡೆಯನ್ನು ಹಾಕಿದರು. ಅದು ಇಂದಿನವರೆಗೂ ಇದೆ. ಬಳಿಕ ಸರ್ವೇಶ್ವರನ ಕೋಪಾಗ್ನಿ ತಣ್ಣಗಾಯಿತು. ಈ ಘಟನೆಯಿಂದಾಗಿ ಆ ಸ್ಥಳಕ್ಕೆ ‘ಆಕೋರಿನ ಕಣಿವೆ’ ಎಂಬ ಹೆಸರು ಬಂದಿತು.


ಎಜ್ರನು ಪರಾತ್ಪರ ದೇವರಾದ ಸರ್ವೇಶ್ವರನನ್ನು ಸ್ತುತಿಸಿದಾಗ ಸರ್ವಜನರೂ ತಮ್ಮ ಕೈಗಳನ್ನೆತ್ತಿ ‘ಆಮೆನ್, ಆಮೆನ್’ ಎಂದು ಹೇಳಿ ನೆಲದಮಟ್ಟಿಗೂ ತಲೆಬಾಗಿ ಸರ್ವೇಶ್ವರನನ್ನು ಆರಾಧಿಸಿದರು.


ನಿತ್ಯಕ್ಕೂ ಕೋಪ ಮಾಡಬೇಡಿ; ಕೊನೆಯತನಕ ಸಿಟ್ಟುಗೊಳ್ಳಬೇಡಿ’ ಎಂದು ಕೋರುತ್ತಿರುವೆ. ಹೀಗಲ್ಲ ನೀನು ಹೇಳುತ್ತಿರುವೆಯಾದರೂ ನಿನ್ನಿಂದ ಸಾಧ್ಯವಾಗುವಷ್ಟು ದುಷ್ಕೃತ್ಯಗಳನ್ನು ಮಾಡಿ ಕೃತಾರ್ಥಳಾಗಿರುವೆ!”


ನೀನು ಉತ್ತರ ದಿಕ್ಕಿಗೆ ಹೋಗಿ ಆ ಇಸ್ರಯೇಲಿಗೆ ಈ ಸಂದೇಶವನ್ನು ಸಾರು - ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ; ಭ್ರಷ್ಟಳಾದ ಇಸ್ರಯೇಲೇ, ಹಿಂದಿರುಗು; ನಾನು ಅಷ್ಟು ಕೋಪಮುಖದಿಂದ ನಿನ್ನನ್ನು ನೋಡುವುದಿಲ್ಲ. ನಾನು ಕರುಣಾಮೂರ್ತಿ, ನಿತ್ಯಕೋಪಿಯಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು