2 ಪೂರ್ವಕಾಲ ವೃತ್ತಾಂತ 29:15 - ಕನ್ನಡ ಸತ್ಯವೇದವು C.L. Bible (BSI)15 ಎಂಬ ಲೇವಿಯರು ಮುಂದೆ ಬಂದು ತಮ್ಮ ಸಹೋದರರನ್ನು ಒಂದುಗೂಡಿಸಿದರು. ಅವರು ಅರಸನ ಆಜ್ಞಾಧಾರಕರಾಗಿ ಸರ್ವೇಶ್ವರನ ಧರ್ಮಶಾಸ್ತ್ರವಿಧಿಯ ಮೇರೆಗೆ ತಮ್ಮನ್ನು ಶುದ್ಧಪಡಿಸಿಕೊಂಡು ಸರ್ವೇಶ್ವರನ ಆಲಯವನ್ನು ಶುದ್ಧೀಕರಿಸುವುದಕ್ಕೆ ಸಿದ್ಧರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಎಂಬ ಲೇವಿಯರು ಎದ್ದು ತಮ್ಮ ಸಹೋದರರನ್ನು ಸೇರಿಕೊಂಡರು. ಅವರು ಅರಸನ ಆಜ್ಞಾನುಸಾರವಾಗಿ ಯೆಹೋವನ ಧರ್ಮಶಾಸ್ತ್ರ ವಿಧಿಯ ಮೇರೆಗೆ ತಮ್ಮನ್ನು ಶುದ್ಧೀಕರಿಸಿಕೊಂಡು ಯೆಹೋವನ ಆಲಯವನ್ನು ಶುದ್ಧೀಕರಿಸುವುದಕ್ಕೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವರು ಅರಸನ ಆಜ್ಞಾಧಾರಕರಾಗಿ ಯೆಹೋವನ ಧರ್ಮಶಾಸ್ತ್ರ ವಿಧಿಯ ಮೇರೆಗೆ ತಮ್ಮನ್ನು ಶುದ್ಧಪಡಿಸಿಕೊಂಡು ಯೆಹೋವನ ಆಲಯವನ್ನು ಶುದ್ಧೀಕರಿಸುವದಕ್ಕೆ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಈ ಲೇವಿಯರೆಲ್ಲಾ ಒಟ್ಟಾಗಿ ಸೇರಿ ತಮ್ಮ ಸಹೋದರರೊಂದಿಗೆ ದೇವಾಲಯದ ಪವಿತ್ರ ಸೇವೆಯನ್ನು ಆರಂಭಿಸಲು ಸಿದ್ಧರಾದರು; ಅರಸನ ಮೂಲಕವಾಗಿ ಬಂದ ದೇವರ ಆಜ್ಞೆಗೆ ವಿಧೇಯರಾದರು; ದೇವಾಲಯವನ್ನು ಶುದ್ಧೀಕರಿಸಲು ಪ್ರಾರಂಭಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇವರು ಅರಸನ ಆಜ್ಞಾಧಾರಕರಾಗಿ ಯೆಹೋವ ದೇವರ ವಾಕ್ಯವನ್ನು ಅನುಸರಿಸಿ, ತಮ್ಮ ಸಹೋದರರನ್ನು ಕೂಡಿಸಿ, ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರ ಆಲಯವನ್ನು ಶುಚಿಮಾಡಲು ಬಂದರು. ಅಧ್ಯಾಯವನ್ನು ನೋಡಿ |