Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:17 - ಕನ್ನಡ ಸತ್ಯವೇದವು C.L. Bible (BSI)

17 ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಈ ಶುದ್ಧೀಕರಣವನ್ನು ಪ್ರಾರಂಭಿಸಿದರು. ಎಂಟನೆಯ ದಿನದಲ್ಲಿ ಸರ್ವೇಶ್ವರನ ಆಲಯದ ಮಂಟಪಕ್ಕೆ ಕೈಹಾಕಿದರು; ಹೀಗೆ ಸರ್ವೇಶ್ವರನ ಆಲಯವನ್ನು ಶುದ್ಧಪಡಿಸುವುದರಲ್ಲಿ ಎಂಟು ದಿನಗಳು ಕಳೆದವು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಕೆಲಸವೆಲ್ಲಾ ಮುಗಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಶುದ್ಧೀಕರಣ ಕಾರ್ಯವನ್ನು ಪ್ರಾರಂಭಿಸಿದರು. ಎಂಟನೆಯ ದಿನದಲ್ಲಿ ಯೆಹೋವನ ಆಲಯದ ಮಂಟಪಕ್ಕೆ ಕೈಹಾಕಿದರು. ಹೀಗೆ ಯೆಹೋವನ ಆಲಯವನ್ನು ಪರಿಶುದ್ಧಪಡಿಸುವುದರಲ್ಲಿ ಎಂಟು ದಿನಗಳು ಕಳೆದು ಹೋದವು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಕೆಲಸವೆಲ್ಲಾ ಮುಗಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವರು ಮೊದಲನೆಯ ತಿಂಗಳಿನ ಮೊದನೆಯ ದಿನದಲ್ಲಿ ಶುದ್ಧೀಕರಣವನ್ನು ಪ್ರಾರಂಭಿಸಿದರು. ಎಂಟನೆಯ ದಿನದಲ್ಲಿ ಯೆಹೋವನ ಆಲಯದ ಮಂಟಪಕ್ಕೆ ಕೈಹಾಕಿದರು. ಯೆಹೋವನ ಆಲಯವನ್ನು ಶುದ್ಧಪಡಿಸುವದರಲ್ಲಿ ಎಂಟು ದಿನಗಳು ಕಳೆದುಹೋದವು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಕೆಲಸವೆಲ್ಲಾ ತೀರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಲೇವಿಯರು ಪವಿತ್ರ ಸೇವೆಯನ್ನು ಮಾಡಲು ಸಿದ್ಧರಾದರು. ತಿಂಗಳಿನ ಎಂಟನೆಯ ದಿನದಲ್ಲಿ ದೇವಾಲಯದ ಮಂಟಪಕ್ಕೆ ಲೇವಿಯರು ಬಂದರು. ಎಂಟು ದಿನಗಳಲ್ಲಿ ಅವರು ದೇವಾಲಯವನ್ನೆಲ್ಲಾ ಶುಚಿಮಾಡಿದರು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಅವರು ಶುಚಿಮಾಡುವ ಕಾರ್ಯವನ್ನು ಮುಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರು ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಪ್ರತಿಷ್ಠೆ ಮಾಡಲು ಆರಂಭಿಸಿ, ಆ ತಿಂಗಳ ಎಂಟನೆಯ ದಿವಸದಲ್ಲಿ ಯೆಹೋವ ದೇವರ ದ್ವಾರಾಂಗಳದವರೆಗೂ ಬಂದರು. ಹೀಗೆಯೇ ಎಂಟು ದಿವಸಗಳಲ್ಲಿ ಯೆಹೋವ ದೇವರ ಆಲಯವನ್ನು ಪ್ರತಿಷ್ಠೆಮಾಡಿ, ಅದನ್ನು ಮೊದಲನೆಯ ತಿಂಗಳಿನ ಹದಿನಾರನೆಯ ದಿವಸದಲ್ಲಿ ಮುಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:17
8 ತಿಳಿವುಗಳ ಹೋಲಿಕೆ  

ಅದರ ಮಂಟಪದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ನಂದಿಸಿದರು; ಇಸ್ರಯೇಲ್‍ದೇವರ ಪವಿತ್ರಸ್ಥಾನದಲ್ಲಿ ಧೂಪಾರತಿ ಎತ್ತುವುದನ್ನೂ ದಹನಬಲಿ ಸಮರ್ಪಿಸುವುದನ್ನೂ ನಿಲ್ಲಿಸಿಬಿಟ್ಟರು.


ಹಿಜ್ಕೀಯನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಸರ್ವೇಶ್ವರನ ಆಲಯದ ಬಾಗಿಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು.


ದೇವಾಲಯದ ಮುಂದುಗಡೆಯಲ್ಲಿದ್ದ ಮಂಟಪದ ಉದ್ದ ಆಲಯದ ಅಗಲಕ್ಕೆ ಸರಿಯಾಗಿ ಒಂಬತ್ತು ಮೀಟರ್, ಎತ್ತರ ಇಪ್ಪತ್ತನಾಲ್ಕು ಮೀಟರ್, ಸೊಲೊಮೋನನು ದೇವಾಲಯದ ಒಳಮೈಯನ್ನು ಚೊಕ್ಕಬಂಗಾರದ ತಗಡಿನಿಂದ ಹೊದಿಸಿದನು.


ತರುವಾಯ ದಾವೀದನು ತನ್ನ ಮಗ ಸೊಲೊಮೋನನಿಗೆ ದೇವಾಲಯದ ಮಂಟಪ, ಉಗ್ರಾಣಗಳು, ಭಂಡಾರಗಳು, ಮೇಲುಪ್ಪರಿಗೆಗಳು, ಒಳಗಣ ಕೋಣೆಗಳು, ಕೃಪಾಸನಮಂದಿರ, ಇವುಗಳ ನಕ್ಷೆಯನ್ನು ಕೊಟ್ಟನು. ಸರ್ವೇಶ್ವರನ ಆಲಯದ ಅಂಗಳಗಳು,


ದೇವಾಲಯದ ಪರಿಶುದ್ಧ ಸ್ಥಳದ ಮುಂದುಗಡೆಯಲ್ಲಿ ಒಂದು ಮಂಟಪವಿತ್ತು; ಅದರ ಉದ್ದಳತೆ ದೇವಾಲಯದ ಅಗಲಕ್ಕೆ ಸರಿಯಾಗಿ 4:5 ಮೀಟರ್, ಅಗಲಳತೆ 9 ಮೀಟರ್.


ಆಮೇಲೆ ಅವರು ಅರಮನೆಗೆ ಹೋಗಿ, ಅರಸ ಹಿಜ್ಕೀಯನಿಗೆ, “ನಾವು ಸರ್ವೇಶ್ವರನ ಆಲಯವನ್ನು ಪೂರ್ತಿಯಾಗಿ ಶುದ್ಧೀಕರಿಸಿದೆವು. ಬಲಿಪೀಠವನ್ನು, ಅದರ ಉಪಕರಣಗಳನ್ನು, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನು ಹಾಗು ಅದರ ಸಾಮಗ್ರಿಗಳನ್ನೂ ಶುದ್ಧಮಾಡಿದೆವು.


ಎರಡನೆಯ ತಿಂಗಳಿನಲ್ಲಿ ಅದನ್ನು ಆಚರಿಸಬೇಕೆಂದು ಅಭಿಪ್ರಾಯಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು