2 ಪೂರ್ವಕಾಲ ವೃತ್ತಾಂತ 29:24 - ಕನ್ನಡ ಸತ್ಯವೇದವು C.L. Bible (BSI)24 ಅನಂತರ ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಯೇಲರ ದೋಷಪರಿಹಾರಕ್ಕಾಗಿ ಬಲಿಪೀಠದ ಮೇಲೆ ಸುರಿದರು. ಆ ದಹನಬಲಿಗಳೂ ದೋಷಪರಿಹಾರಕ ಬಲಿಗಳೂ ಎಲ್ಲ ಇಸ್ರಯೇಲರ ಪರವಾಗಿ ಆಗಬೇಕೆಂದು ಅರಸನು ಆಜ್ಞಾಪಿಸಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನಂತರ ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಾಯೇಲರ ದೋಷ ಪರಿಹಾರಕ್ಕಾಗಿ ಯಜ್ಞವೇದಿಯ ಮೇಲೆ ಸುರಿದರು. ಆ ಸರ್ವಾಂಗಹೋಮಗಳೂ, ದೋಷಪರಿಹಾರಕ ಯಜ್ಞಗಳೂ ಎಲ್ಲಾ ಇಸ್ರಾಯೇಲರಿಗಾಗಿ ಇರಬೇಕೆಂದು ಅರಸನು ಆಜ್ಞಾಪಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಾಯೇಲ್ಯರ ದೋಷಪರಿಹಾರಕ್ಕಾಗಿ ಯಜ್ಞವೇದಿಯ ಮೇಲೆ ಸುರಿದರು. ಆ ಸರ್ವಾಂಗಹೋಮಗಳೂ ದೋಷಪರಿಹಾರಕ ಯಜ್ಞಗಳೂ ಎಲ್ಲಾ ಇಸ್ರಾಯೇಲ್ಯರಿಗೋಸ್ಕರ ಆಗಬೇಕೆಂದು ಅರಸನು ಆಜ್ಞಾಪಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆಗ ಸಮಸ್ತ ಇಸ್ರಾಯೇಲರಿಗೋಸ್ಕರ ಪ್ರಾಯಶ್ಚಿತ್ತವಾಗಿ ಯಾಜಕರು ಅವುಗಳನ್ನು ವಧಿಸಿ, ಬಲಿಪೀಠದ ಮೇಲೆ ಅವುಗಳ ರಕ್ತದಿಂದ ಪಾಪ ನಿವಾರಣೆ ಮಾಡಿದರು. ದಹನಬಲಿಯೂ, ದೋಷಪರಿಹಾರದ ಬಲಿಯೂ ಸಮಸ್ತ ಇಸ್ರಾಯೇಲಿಗೋಸ್ಕರ ಆಗಬೇಕೆಂದು ಅರಸನು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |