Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:26 - ಕನ್ನಡ ಸತ್ಯವೇದವು C.L. Bible (BSI)

26 ಆ ಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿರಲು ಹಿಜ್ಕೀಯನು ಬಲಿಪೀಠದ ಮೇಲೆ ದಹನಬಲಿಯನ್ನು ಸಮರ್ಪಿಸುವುದಕ್ಕೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆ ಲೇವಿಯರು ದಾವೀದನ ವಾದ್ಯಗಳನ್ನೂ, ಯಾಜಕರೂ ತುತ್ತೂರಿಗಳನ್ನೂ ಹಿಡಿದು ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆ ಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿರಲು ಹಿಜ್ಕೀಯನು ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನು ಸಮರ್ಪಿಸುವದಕ್ಕೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಹೀಗೆ ಲೇವಿಯರು ದಾವೀದನ ಸಂಗೀತ ವಾದ್ಯಗಳೊಡನೆ ತಯಾರಾಗಿ ನಿಂತರು ಮತ್ತು ಯಾಜಕರು ತುತ್ತೂರಿಗಳೊಂದಿಗೆ ತಯಾರಾಗಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:26
13 ತಿಳಿವುಗಳ ಹೋಲಿಕೆ  

ದ್ವಾರಪಾಲಕರನ್ನಾಗಿ ನಾಲ್ಕು ಸಾವಿರ ಹಾಗು ತಾನು ಒದಗಿಸಿದ್ದ ವಾದ್ಯಗಳಿಂದ ಸರ್ವೇಶ್ವರನನ್ನು ಭಜಿಸುವುದಕ್ಕಾಗಿ ನಾಲ್ಕು ಸಾವಿರ ಜನರನ್ನು ದಾವೀದನು ನೇಮಿಸಿದನು.


ವೀಣೆಯನ್ನು ನುಡಿಸುತ್ತಾ ಮನಸ್ಸು ಬಂದಂತೆ ಹಾಡುವವರೇ, ದಾವೀದನಂತೆ ಹೊಸ ವಾದ್ಯಸಂಗೀತಗಳನ್ನು ರಚಿಸುವವರೇ, ನಿಮಗೆ ಧಿಕ್ಕಾರ!


ಸರ್ವೇಶ್ವರಾ, ನೀ ನನ್ನ ಉದ್ಧಾರಕ ಹೊಗಳುವೆ ನಿನ್ನ ನಾ ತಂತಿವಾದ್ಯ ಸಮೇತ ದಿನನಿತ್ಯ, ನಿನ್ನಾಲಯದೊಳು, ಜೀವವಿರುವ ತನಕ.


ಗಾಯಕ ನರ್ತಕರೂ ಹಾಡುವರೀ ಹಾಡ I “ನಮ್ಮೆಲ್ಲರ ಜೀವದೊರೆತೆ ನೀನೇ ನೋಡ” II


ಊದಿರಿ ಕೊಂಬನು ಅಮವಾಸ್ಯೆಯಲಿ I ಉತ್ಸವದಿನವಾದ ಪೂರ್ಣಿಮೆಯಲಿ II


ಬೆನಾಯ ಹಾಗೂ ಯಹಜೀಯೇಲ್ ಎಂಬ ಯಾಜಕರು ನಿಬಂಧನಾ ಮಂಜೂಷದ ಮುಂದೆ ಕ್ರಮವಾಗಿ ತುತೂರಿಗಳನ್ನು ಊದಬೇಕಾಗಿತ್ತು.


ಇದಲ್ಲದೆ, ಉತ್ಸವ ದಿನಗಳಲ್ಲೂ ಹಬ್ಬ ದಿನಗಳಲ್ಲೂ ಅಮಾವಾಸ್ಯೆಯಲ್ಲೂ ಮತ್ತು ದಹನಬಲಿಗಳನ್ನೂ ಸಮಾಧಾನ ಬಲಿಗಳನ್ನೂ ಅರ್ಪಿಸುವಾಗಲೂ ಆ ಕಹಳೆಗಳನ್ನು ಮೊಳಗಿಸಬೇಕು. ಆ ಧ್ವನಿ ನಿಮ್ಮನ್ನು ನಿಮ್ಮ ದೇವರ ನೆನಪಿಗೆ ತರಲು ನೆರವಾಗುವುದು. ನಾನೇ ನಿಮ್ಮ ದೇವರಾದ ಸರ್ವೇಶ್ವರ.”


ಆರೋನನ ವಂಶಸ್ಥರಾದ ಯಾಜಕರೇ ಆ ಕಹಳೆಗಳನ್ನು ಊದಬೇಕು. “ನಿಮಗೂ ನಿಮ್ಮ ಸಂತತಿಯವರಿಗೂ ಇದು ಶಾಶ್ವತ ನಿಯಮವಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು