Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:35 - ಕನ್ನಡ ಸತ್ಯವೇದವು C.L. Bible (BSI)

35 ಇದಲ್ಲದೆ, ಯಾಜಕರು ಸಮರ್ಪಿಸಬೇಕಾಗಿದ್ದ ದಹನಬಲಿ, ಶಾಂತಿಸಮಾಧಾನ ಬಲಿಗಳ ಕೊಬ್ಬು ಹಾಗು ದಹನಬಲಿ ಸಂಬಂಧವಾದ ಪಾನದ್ರವ್ಯ ಇವೂ ಅಪಾರವಾಗಿ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಇದಲ್ಲದೆ ಯಾಜಕರೂ ಯೆಹೋವನಿಗೆ ಸಮರ್ಪಿಸಬೇಕಾಗಿದ್ದ ಸರ್ವಾಂಗಹೋಮ, ಸಮಾಧಾನ ಯಜ್ಞಗಳ ಕೊಬ್ಬು ಹಾಗು ಸರ್ವಾಂಗಹೋಮ ಸಂಬಂಧವಾದ ಪಾನದ್ರವ್ಯ ಇವು ಅಪಾರವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ತಮ್ಮನ್ನು ಶುದ್ಧಪಡಿಸಿಕೊಳ್ಳುವದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು. ಇದಲ್ಲದೆ ಯಾಜಕರು ಸಮರ್ಪಿಸಬೇಕಾಗಿದ್ದ ಸರ್ವಾಂಗಹೋಮ, ಸಮಾಧಾನಯಜ್ಞಗಳ ಕೊಬ್ಬು, ಸರ್ವಾಂಗಹೋಮ ಸಂಬಂಧವಾದ ಪಾನದ್ರವ್ಯ ಇವು ಅಪಾರವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಆ ದಿವಸ ಎಷ್ಟೋ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಪಾನದ್ರವ್ಯದ ಹೋಮಗಳನ್ನೂ ಸಮರ್ಪಿಸಿದರು. ಹೀಗೆ ದೇವಾಲಯದಲ್ಲಿ ಆರಾಧನೆಯು ಮತ್ತೆ ಪ್ರಾರಂಭವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಇದಲ್ಲದೆ ದಹನಬಲಿಗಳೂ, ಸಮಾಧಾನದ ಬಲಿಗಳ ಕೊಬ್ಬೂ, ದಹನಬಲಿಗೆ ಬೇಕಾದ ಪಾನದ ಅರ್ಪಣೆಗಳೂ ಬಹಳವಾಗಿದ್ದವು. ಹೀಗೆ ಯೆಹೋವ ದೇವರ ಆಲಯದ ಸೇವೆಯು ಸಿದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:35
11 ತಿಳಿವುಗಳ ಹೋಲಿಕೆ  

ಅದರ ವಪೆಯನ್ನು, ಕಾಳಿಜದ ಮೇಲಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು ಹಾಗು ಅವುಗಳ ಮೇಲಿರುವ ಕೊಬ್ಬನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಹೋಮ ಮಾಡಬೇಕು.


ಅದರ ಸಮೇತ ಎಣ್ಣೆಬೆರೆತ ಎರಡು ಕಿಲೋಗ್ರಾಂ ಹಿಟ್ಟನ್ನು ಧಾನ್ಯನೈವೇದ್ಯವಾಗಿ ಅರ್ಪಿಸಬೇಕು. ಸರ್ವೇಶ್ವರನಿಗೆ ಪ್ರಿಯವಾದ ಸುವಾಸನೆಯುಂಟುಮಾಡುವುದಕ್ಕೆ ಅದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯ ಒಂದು ಲೀಟರ್ ದ್ರಾಕ್ಷಾರಸ.


ಯಕೋಬನು ತನ್ನೊಡನೆ ದೇವರು ಮಾತನಾಡಿದ ಆ ಸ್ಥಳದಲ್ಲಿ ಕಲ್ಲಿನ ಸ್ತಂಭವೊಂದನ್ನು ನಿಲ್ಲಿಸಿ, ಅದರ ಮೇಲೆ ಪಾನಕಾ ಅಭಿಷೇಕಮಾಡಿ, ಎಣ್ಣೆಹೊಯ್ದು ಅಭ್ಯಂಗಿಸಿದನು.


ಆದರೆ ಎಲ್ಲವನ್ನು ಒಪ್ಪವಾಗಿ, ಓರಣವಾಗಿ ಮಾಡಿರಿ.


ಆಮೇಲೆ ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳನ್ನು ಮೋಶೆಯ ಧರ್ಮಶಾಸ್ತ್ರನಿಯಮದ ಪ್ರಕಾರ, ಜೆರುಸಲೇಮಿನ ದೇವರ ಸೇವೆಗೆ ನೇಮಿಸಿದರು.


ಹೀಗೆ ಸಭಿಕರು ದಹನಬಲಿದಾನಕ್ಕಾಗಿ ತಂದೊಪ್ಪಿಸಿದ ಹೋರಿಗಳು ಎಪ್ಪತ್ತು, ಟಗರುಗಳು ನೂರು, ಕುರಿಮರಿಗಳು ಇನ್ನೂರು. ಇವೆಲ್ಲವು ಸರ್ವೇಶ್ವರನಿಗೆ ದಹನಬಲಿ ಸಮರ್ಪಣೆಗಾಗಿಯೇ ಕೊಡಲಾದುವು.


ಹೀಗೆ ಸರ್ವೇಶ್ವರನ ಆಲಯದ ಸೇವಾಕ್ರಮವು ಪುನಃ ಸ್ಥಾಪಿತವಾಯಿತು. ಯಾರೂ ಗಮನಿಸುವುದಕ್ಕೆ ಮುಂಚೆಯೇ, ದೇವರು ತಾವೇ ತಮ್ಮ ಪ್ರಜೆಗಳಿಗಾಗಿ ಈ ಕಾರ್ಯವನ್ನು ನೆರವೇರಿಸಿದ್ದರಿಂದ ಹಿಜ್ಕೀಯನೂ ಎಲ್ಲ ಜನರೂ ಸಂತೋಷಪಟ್ಟರು.


ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನಕೂಡದೆಂಬುದು ನಿಮಗೂ ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲ ಸ್ಥಳಗಳಲ್ಲಿಯೂ ಶಾಶ್ವತ ನಿಯಮವಾಗಿದೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು