Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:36 - ಕನ್ನಡ ಸತ್ಯವೇದವು C.L. Bible (BSI)

36 ಹೀಗೆ ಸರ್ವೇಶ್ವರನ ಆಲಯದ ಸೇವಾಕ್ರಮವು ಪುನಃ ಸ್ಥಾಪಿತವಾಯಿತು. ಯಾರೂ ಗಮನಿಸುವುದಕ್ಕೆ ಮುಂಚೆಯೇ, ದೇವರು ತಾವೇ ತಮ್ಮ ಪ್ರಜೆಗಳಿಗಾಗಿ ಈ ಕಾರ್ಯವನ್ನು ನೆರವೇರಿಸಿದ್ದರಿಂದ ಹಿಜ್ಕೀಯನೂ ಎಲ್ಲ ಜನರೂ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಹೀಗೆ ಯೆಹೋವನ ಆಲಯದ ಸೇವಾಕ್ರಮವು ಪುನಃ ಸ್ಥಾಪಿತವಾಯಿತು. ದೇವರು ತಾನೇ ತನ್ನ ಪ್ರಜೆಗಳಿಗಾಗಿ ಈ ಕಾರ್ಯವನ್ನು ನೆರವೇರಿಸಿದ್ದರಿಂದ, ಹಿಜ್ಕೀಯನೂ ಮತ್ತು ಎಲ್ಲಾ ಜನರೂ ಸಂತೋಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಹೀಗೆ ಯೆಹೋವನ ಆಲಯದ ಸೇವಾಕ್ರಮವು ಪುನಃಸ್ಥಾಪಿತವಾಯಿತು. ಯಾರೂ ನೆನಸದೆ ಇರುವಲ್ಲಿ ದೇವರು ತಾನೇ ತನ್ನ ಪ್ರಜೆಗಳಿಗೋಸ್ಕರ ಈ ಕಾರ್ಯವನ್ನು ನೆರವೇರಿಸಿದ್ದರಿಂದ ಹಿಜ್ಕೀಯನೂ ಎಲ್ಲಾ ಜನರೂ ಸಂತೋಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ದೇವರು ಅವುಗಳನ್ನು ತನ್ನ ಜನರಿಗಾಗಿ ಸಿದ್ಧಪಡಿಸಿದ್ದಕ್ಕಾಗಿಯೂ ಅದನ್ನು ಅಲ್ಪಕಾಲಾವಧಿಯಲ್ಲಿ ಮಾಡಿದ್ದಕ್ಕಾಗಿಯೂ ಹಿಜ್ಕೀಯನು ಮತ್ತು ಯೆಹೂದದ ಜನರು ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಆಗ ದೇವರು ತಮ್ಮ ಜನರನ್ನು ಸಿದ್ಧಮಾಡಿದ್ದರಿಂದ ಹಿಜ್ಕೀಯನೂ, ಜನರೆಲ್ಲರೂ ಸಂತೋಷಪಟ್ಟರು. ಏಕೆಂದರೆ ಈ ಕಾರ್ಯವು ತ್ವರೆಯಾಗಿ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:36
10 ತಿಳಿವುಗಳ ಹೋಲಿಕೆ  

ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನ ಪಡೆದರು. ಅಂದೇ ಸುಮಾರು ಮೂರು ಸಾವಿರ ಜನರು ಸಭೆಯನ್ನು ಸೇರಿಕೊಂಡರು.


ಆಲೋಚನೆ ಮಾಡುವುದು ಮನುಷ್ಯನ ಇಚ್ಛೆ; ಅದನ್ನು ಸಫಲವಾಗಿಸುವುದು ಸರ್ವೇಶ್ವರನ ಇಚ್ಛೆ.


ದೀನ ಕೋರಿಕೆಯನು ಪ್ರಭು, ತೀರಿಸುವೆ I ಹುರಿದುಂಬಿಸಿ, ಅವರ ಮೊರೆಗೆ ಕಿವಿಗೊಡುವೆ II


ಇದಲ್ಲದೆ, ಆಡಂಬರದಿಂದ ಏಳು ದಿವಸಗಳವರೆಗೂ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಿದರು. ಏಕೆಂದರೆ, ಇಸ್ರಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಸ್ಸೀರಿಯದ ಅರಸ, ತಮಗೆ ಸಹಾಯಮಾಡುವಂತೆ ಸರ್ವೇಶ್ವರ ಅವನ ಮನಪರಿವರ್ತಿಸಿ, ಅವರಿಗೆ ಸಂತೋಷವನ್ನು ಉಂಟುಮಾಡಿದ್ದರು.


ಅವರು ಪೂರ್ಣಮನಸ್ಸಿನಿಂದ ಹಾಗೂ ಸ್ವೇಚ್ಛೆಯಿಂದ ಸರ್ವೇಶ್ವರನಿಗೆ ಕಾಣಿಕೆ ಕೊಟ್ಟಿದ್ದಕ್ಕಾಗಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷ ಆಯಿತು.


ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ, ಅವರ ಪ್ರೇರಣೆಯಿಂದ, ಏಕಮನಸ್ಸುಳ್ಳವರಾಗಿ, ಸರ್ವೇಶ್ವರನ ಧರ್ಮಶಾಸ್ತ್ರಾನುಸಾರ, ಅರಸನಿಂದಲೂ ಅಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.


ಇದಲ್ಲದೆ, ಯಾಜಕರು ಸಮರ್ಪಿಸಬೇಕಾಗಿದ್ದ ದಹನಬಲಿ, ಶಾಂತಿಸಮಾಧಾನ ಬಲಿಗಳ ಕೊಬ್ಬು ಹಾಗು ದಹನಬಲಿ ಸಂಬಂಧವಾದ ಪಾನದ್ರವ್ಯ ಇವೂ ಅಪಾರವಾಗಿ ಇದ್ದವು.


ತರುವಾಯ ಹಿಜ್ಕೀಯನು, ಇಸ್ರಯೇಲ್ ದೇವರಾದ ಸರ್ವೇಶ್ವರಸ್ವಾಮಿಯ ಪಾಸ್ಕವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿನಲ್ಲಿರುವ ಸರ್ವೇಶ್ವರನ ಮಹಾಲಯಕ್ಕೆ ಬರಬೇಕೆಂದು ಎಲ್ಲ ಇಸ್ರಯೇಲರಿಗೆ, ಯೆಹೂದ್ಯರಿಗೆ, ಎಫ್ರಯಿಮರಿಗೆ ಹಾಗು ಮನಸ್ಸೆಯವರಿಗೆ ದೂತರ ಮುಖಾಂತರ ಮತ್ತು ಪತ್ರಗಳ ಮೂಲಕ ತಿಳಿಯಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು