Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:6 - ಕನ್ನಡ ಸತ್ಯವೇದವು C.L. Bible (BSI)

6 ನಿಮ್ಮ ಪೂರ್ವಜರು ನಮ್ಮ ದೇವರಾದ ಸರ್ವೇಶ್ವರನಿಗೆ ದ್ರೋಹಮಾಡಿ ಅವರ ಚಿತ್ತಕ್ಕೆ ವಿರುದ್ಧ ನಡೆದು ಅವರನ್ನು ತೊರೆದುಬಿಟ್ಟರು; ಅವರ ನಿವಾಸ ಸ್ಥಳಕ್ಕೆ ಬೆನ್ನುಕೊಟ್ಟು ವಿಮುಖರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಮ್ಮ ಪೂರ್ವಿಕರು ನಮ್ಮ ದೇವರಾದ ಯೆಹೋವನಿಗೆ ದ್ರೋಹಮಾಡಿ, ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದು ಆತನನ್ನು ತೊರೆದುಬಿಟ್ಟರು. ಅವರು ಆತನ ನಿವಾಸ ಸ್ಥಳವನ್ನು ತೊರೆದು ವಿಮುಖರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಮ್ಮ ಪಿತೃಗಳು ನಮ್ಮ ದೇವರಾದ ಯೆಹೋವನಿಗೆ ದ್ರೋಹ ಮಾಡಿ ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದು ಆತನನ್ನು ಬಿಟ್ಟರು. ಅವರು ಆತನ ನಿವಾಸ ಸ್ಥಳಕ್ಕೆ ಬೆನ್ನುಕೊಟ್ಟು ವಿಮುಖರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಮ್ಮ ಪೂರ್ವಿಕರು ಯೆಹೋವನನ್ನು ತೊರೆದು ಆತನ ದೃಷ್ಟಿಯಲ್ಲಿ ಪಾಪಮಾಡಿದರು; ಆತನ ಆಲಯಕ್ಕೆ ವಿಮುಖರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಏಕೆಂದರೆ ನಮ್ಮ ಪಿತೃಗಳು ಅಪನಂಬಿಗಸ್ತರಾಗಿ, ನಮ್ಮ ದೇವರಾದ ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದನ್ನು ಮಾಡಿ, ಅವರನ್ನು ಬಿಟ್ಟುಬಿಟ್ಟರು. ಇದಲ್ಲದೆ ಅವರು ಯೆಹೋವ ದೇವರ ನಿವಾಸ ಸ್ಥಾನದ ಕಡೆಯಿಂದ ತಮ್ಮ ಮುಖಗಳನ್ನು ತಿರುಗಿಸಿ, ತಮ್ಮ ಬೆನ್ನುಗಳನ್ನು ತೋರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:6
21 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆದುತಂದರು; ಇಗೋ, ಆ ಆಲಯದ ಬಾಗಿಲ ಮುಂದೆ, ಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಸುಮಾರು ಇಪ್ಪತ್ತೈದು ಜನರು ಸರ್ವೇಶ್ವರನ ಆಲಯಕ್ಕೆ ಬೆನ್ನುಮಾಡಿ ಪೂರ್ವದ ಕಡೆಗೆ ಮುಖಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು.


ನನಗೆ ಅಭಿಮುಖರಾಗದೆ ಬೆನ್ನುಮಾಡಿದ್ದೀರಿ. ಕೇಡು ಸಂಭವಿಸಿದಾಗ ಮಾತ್ರ, ‘ಎದ್ದು ಬಂದು ನಮ್ಮನ್ನು ಉದ್ಧರಿಸು’ ಎಂದು ಮೊರೆಯಿಡುತ್ತೀರಿ.


“ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆಯನ್ನು ಅಥವಾ ತಾಯಿಯನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಅಥವಾ ಮಗಳನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.


ಸರ್ವೇಶ್ವರಾ, ನಿಮ್ಮ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿಮ್ಮ ನಗರವೂ ನಿಮ್ಮ ಪವಿತ್ರ ಪರ್ವತವೂ ಆದ ಜೆರುಸಲೇಮ್ ಮೇಲೆ ನಿಮಗಿರುವ ಕೋಪವನ್ನೂ ರೋಷಾಗ್ನಿಯನ್ನೂ ದಯಮಾಡಿ ತೊಲಗಿಸಿಬಿಡಿ. ನಮ್ಮ ಮತ್ತು ನಮ್ಮ ಪೂರ್ವಜರ ಪಾಪಾಪರಾಧಗಳ ನಿಮಿತ್ತ ಜೆರುಸಲೇಮ್ ಮತ್ತು ನಿಮ್ಮ ಜನತೆ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆ.


ನಮ್ಮ ಪಿತೃಗಳು ಪಾಪಮಾಡಿ ಗತಿಸಿಹೋದರು ಅವರ ದೋಷಫಲವನ್ನು ನಾವು ಸವಿಯಬೇಕಾಗಿ ಬಂದಿತು.


ನೀವು, ನಿಮ್ಮ ಪೂರ್ವಜರು, ನಿಮ್ಮ ಅರಸರು, ಅಧಿಕಾರಿಗಳು, ಜನಸಾಮಾನ್ಯರು ಮತ್ತು ನೀವೆಲ್ಲರು ಜುದೇಯದ ಊರುಗಳಲ್ಲೂ ಜೆರುಸಲೇಮಿನ ಬೀದಿಗಳಲ್ಲೂ ಎತ್ತಿದ ಧೂಪಾರತಿ ಸರ್ವೇಶ್ವರನ ನೆನಪಿನಲ್ಲಿ ಇದೆ ಅಲ್ಲವೆ? ಅದನ್ನು ಅವರು ಮರೆತುಬಿಟ್ಟಿದ್ದಾರೆಯೇ?


“ಹೇ ಸರ್ವೇಶ್ವರಾ, ನನ್ನ ಶಕ್ತಿಯೇ, ನನ್ನ ಕೋಟೆಯೇ, ಆಪತ್ತು ಕಾಲದಲ್ಲಿ ನನ್ನ ಆಶ್ರಯವೇ, ಜಗದ ಕಟ್ಟಕಡೆಯಿಂದ ಜನಾಂಗಗಳು ನಿಮ್ಮ ಸಮ್ಮುಖಕ್ಕೆ ಬರುವುವು. ‘ನಮ್ಮ ಪೂರ್ವಜರು ಪಾರಂಪರ್ಯವಾಗಿ ಪಡೆದವುಗಳು ನಿಶ್ಚಯವಾಗಿ ಅಬದ್ಧವಾದವುಗಳು, ಮಾಯರೂಪವಾದವುಗಳು ಹಾಗು ನಿಷ್ಪ್ರಯೋಜನವಾದವುಗಳು.


ನಿನಗೆ ಮಾರ್ಗದರ್ಶಿಯಾಗಿದ್ದ, ನಿನಗೆ ದೇವರಾಗಿದ್ದ ಸರ್ವೇಶ್ವರನಾದ ನನ್ನನ್ನೇ ತೊರೆದುಬಿಟ್ಟು ಇದನ್ನೆಲ್ಲ ನೀನೇ ನಿನ್ನ ಮೇಲೆ ಬರಮಾಡಿಕೊಂಡಿರುವೆ.


“ನನ್ನ ಜನರು ಇಬ್ಬಗೆಯ ಅಪರಾಧಗಳನ್ನು ಎಸಗಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನೇ ತೊರೆದುಬಿಟ್ಟಿದ್ದಾರೆ! ತೊಟ್ಟಿಗಳನ್ನು, ನೀರುನಿಲ್ಲದ ಬಿರುಕು ತೊಟ್ಟಿಗಳನ್ನು ತಮಗಾಗಿ ಕೊರೆದುಕೊಂಡಿದ್ದಾರೆ!”


ಓ ನಮ್ಮ ದೇವರೇ, ನೀವು ಮಹೋನ್ನತರು, ಶಕ್ತಿಸಾಮರ್ಥ್ಯರು, ಭಯಭಕ್ತಿಗೆ ಪಾತ್ರರು, ಕೃಪಾವಾಗ್ದಾನಗಳ ನೆರವೇರಿಸುವವರು. ಅಲ್ಪವೆಂದೆಣಿಸಬೇಡಿ - ನಮ್ಮ ರಾಜರು, ರಾಜ್ಯಪಾಲರು. ಯಾಜಕರು, ಪ್ರವಾದಿಗಳು, ಹಿರಿಯರು, ಪ್ರಜೆಗಳು ಸಹಿಸಬೇಕಾಗಿಬಂದಿರುವ ಈ ಕಷ್ಟಕಾರ್ಪಣ್ಯಗಳನು.


ಇಷ್ಟಾದರೂ ಗರ್ವಿಗಳಾದರು, ನಮ್ಮೀ ಪಿತೃಗಳು ಹಟಹಿಡಿದು ಅವಿಧೇಯರಾದರು ಉಲ್ಲಂಘಿಸಿ ನಿಮ್ಮಾಜ್ಞಾವಿಧಿಗಳನು.


ನಾವು ನಮ್ಮ ಪಿತೃಗಳ ಕಾಲದಿಂದ ಇಂದಿನವರೆಗೂ ಮಹಾಪರಾಧಿಗಳೇ; ನಮ್ಮ ಪಾಪಗಳ ನಿಮಿತ್ತ ನಾವೂ ನಮ್ಮ ಅರಸರೂ ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಸಿಕ್ಕಿಬಿದ್ದೆವು. ಈಗಿರುವಂತೆ, ಕತ್ತಿಗೂ ಸೆರೆಗೂ ಸುಲಿಗೆಗೂ ಅಪಮಾನಕ್ಕೂ ಗುರಿ ಆದೆವು.


ಆದರೆ ನಮ್ಮ ಪೂರ್ವಿಕರು ಪರಲೋಕ ದೇವರನ್ನು ರೇಗಿಸಿದ್ದರಿಂದ ಆ ದೇವರು ಅವರನ್ನು ಬಾಬಿಲೋನಿನ ಕಸ್ದೀಯ ರಾಜನಾದ ನೆಬೂಕದ್ನೆಚ್ಚರನ ಕೈಗೆ ಒಪ್ಪಿಸಿಕೊಟ್ಟರು. ಅವನು ಈ ಆಲಯವನ್ನು ಹಾಳುಮಾಡಿ, ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದನು.


“ನಮ್ಮ ಪೂರ್ವಜರು ಈ ಗ್ರಂಥದಲ್ಲಿ ಬರೆದಿರುವ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ಕೈಗೊಳ್ಳದೆ ಹೋದುದರಿಂದಲೇ ಸರ್ವೇಶ್ವರ ತಮ್ಮ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾರೆ. ಆದುದರಿಂದ ನೀವು ನನ್ನ ಪರವಾಗಿ, ಹಾಗು ಇಸ್ರಯೇಲರಲ್ಲಿ ಮತ್ತು ಯೆಹೂದ್ಯರಲ್ಲಿ ಉಳಿದಿರುವವರ ಪರವಾಗಿ ಸರ್ವೇಶ್ವರನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಬಗ್ಗೆ ವಿಚಾರಿಸಿರಿ,” ಎಂದು ಆಜ್ಞಾಪಿಸಿದನು.


ಕೃಪೆಮಾಡಿ ನನಗೆ ಕಿವಿಗೊಡಿ, ಕಟಾಕ್ಷಿಸಿ ನೋಡಿ; ನಿಮ್ಮ ದಾಸನ ಪ್ರಾರ್ಥನೆಯನ್ನು ಆಲಿಸಿ, ನಾನು ಈಗ ಹಗಲಿರುಳೂ ನಿಮ್ಮ ಸನ್ನಿಧಿಯಲ್ಲಿ ನಿಮ್ಮ ದಾಸರಾದ ಇಸ್ರಯೇಲರ ಪರವಾಗಿ ಪ್ರಾರ್ಥಿಸುತ್ತಾ ಇದ್ದೇನೆ; ಅವರು ನಿಮಗೆ ವಿರುದ್ಧ ಮಾಡಿದ ಪಾಪಗಳನ್ನು ಅರಿಕೆಮಡುತ್ತಾ ಇದ್ದೇನೆ; ನಾನೂ ನನ್ನ ಪೂರ್ವಜರೂ ಆ ಪಾಪಗಳಲ್ಲಿ ಪಾಲುಗಾರರು.


ಆಗ ಜುದೇಯದ ಅರಸ ಹಿಜ್ಕೀಯನು ಮತ್ತು ಯೆಹೂದ್ಯರೆಲ್ಲರು, “ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಬದಲಿಗೆ ಆ ಅರಸ ಭಯಭಕ್ತಿಯಿಂದ ಸರ್ವೇಶ್ವರನ ದಯೆಯನ್ನು ಬೇಡಿಕೊಂಡ. ಆಗ ಸರ್ವೇಶ್ವರ ವಿಧಿಸಬೇಕೆಂದಿದ್ದ ದಂಡನೆಯನ್ನು ವಿಧಿಸದೆ ಮನಸ್ಸನ್ನು ಬದಲಾಯಿಸಿಕೊಂಡರಲ್ಲವೆ? ಇವನನ್ನು ಕೊಂದುಹಾಕುವುದರಿಂದ ನಾವು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿಕೊಳ್ಳುತ್ತೇವೆ,” ಎಂದರು.


“ಇಗೋ, ಇವನು ಪಡೆದ ಮಗನು ತನ್ನ ತಂದೆ ಮಾಡಿದ ಪಾಪಗಳನ್ನೆಲ್ಲಾ ಕಂಡು ಭಯಪಟ್ಟು, ಇಂಥಾ ಕಾರ್ಯಗಳನ್ನು ನಡೆಸದೆ


ನಮ್ಮ ಅರಸರು, ರಾಜ್ಯಪಾಲರು, ಯಾಜಕರು, ಹಿರಿಯರು ಅನುಸರಿಸಲಿಲ್ಲ, ನಿಮ್ಮಾಜ್ಞೆಯನು, ಧರ್ಮೋಪದೇಶವನು. ಲಕ್ಷಿಸಲಿಲ್ಲ ನೀವಿತ್ತ ಎಚ್ಚರಿಕೆಯ ಮಾತುಗಳನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು