Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 3:4 - ಕನ್ನಡ ಸತ್ಯವೇದವು C.L. Bible (BSI)

4 ದೇವಾಲಯದ ಮುಂದುಗಡೆಯಲ್ಲಿದ್ದ ಮಂಟಪದ ಉದ್ದ ಆಲಯದ ಅಗಲಕ್ಕೆ ಸರಿಯಾಗಿ ಒಂಬತ್ತು ಮೀಟರ್, ಎತ್ತರ ಇಪ್ಪತ್ತನಾಲ್ಕು ಮೀಟರ್, ಸೊಲೊಮೋನನು ದೇವಾಲಯದ ಒಳಮೈಯನ್ನು ಚೊಕ್ಕಬಂಗಾರದ ತಗಡಿನಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೇವಾಲಯದ ಮುಂಭಾಗದಲ್ಲಿದ್ದ ಮಂಟಪದ ಉದ್ದವು ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಎತ್ತರವು ಇಪ್ಪತ್ತು ಮೊಳ ಆಗಿತ್ತು. ಸೊಲೊಮೋನನು ಅದರ ಒಳಭಾಗವನ್ನು ಶುದ್ಧ ಬಂಗಾರದ ತಗಡಿನಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅಗಲವು ಇಪ್ಪತ್ತು ಮೊಳ, ದೇವಾಲಯದ ಮುಂದುಗಡೆಯಲ್ಲಿದ್ದ ಮಂಟಪದ ಉದ್ದವು ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಎತ್ತರವು ಇಪ್ಪತ್ತು ಮೊಳ. ಸೊಲೊಮೋನನು ಅದರ ಒಳಮೈಯನ್ನು ಚೊಕ್ಕಬಂಗಾರದ ತಗಡಿನಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವಾಲಯದ ಮುಂದುಗಡೆಯಿದ್ದ ಮಂಟಪವು ಇಪ್ಪತ್ತು ಮೊಳ ಉದ್ದ ಮತ್ತು ಇಪ್ಪತ್ತು ಮೊಳ ಎತ್ತರವಿತ್ತು. ಮಂಟಪದ ಒಳಮೈಯನ್ನು ಸೊಲೊಮೋನನು ಅಪ್ಪಟ ಬಂಗಾರದ ತಗಡಿನಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮುಂದೆ ಇರುವ ದ್ವಾರಾಂಗಳ ಆಲಯದ ಅಗಲದ ಪ್ರಕಾರ ಸುಮಾರು 9 ಮೀಟರ್ ಉದ್ದವಾಗಿತ್ತು; 54 ಮೀಟರ್ ಎತ್ತರವಾಗಿತ್ತು. ಅವನು ಅದನ್ನು ಒಳಗಡೆ ಶುದ್ಧ ಬಂಗಾರದಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 3:4
6 ತಿಳಿವುಗಳ ಹೋಲಿಕೆ  

ಜನರೆಲ್ಲರ ಕಣ್ಮುಂದೆ ಅನೇಕ ಅದ್ಭುತಕಾರ್ಯಗಳೂ ಸೂಚಕಕಾರ್ಯಗಳೂ ಪ್ರೇಷಿತರ ಮುಖಾಂತರ ನಡೆಯುತ್ತಿದ್ದವು. ಭಕ್ತವಿಶ್ವಾಸಿಗಳೆಲ್ಲರೂ ಸೊಲೊಮೋನನ ಮಂಟಪದಲ್ಲಿ ಸಭೆಸೇರುತ್ತಿದ್ದರು.


‘ಸೊಲೊಮೋನನ ಮಂಟಪ’ದಲ್ಲಿ ಪೇತ್ರ ಮತ್ತು ಯೊವಾನ್ನರ ಜೊತೆ ಆ ಭಿಕ್ಷುಕನು ಇನ್ನೂ ನಿಂತಿದ್ದನು. ಆಶ್ಚರ್ಯಭರಿತರಾದ ಜನರು ಅಲ್ಲಿಗೆ ಓಡಿಬಂದರು.


ಯೇಸು ಸ್ವಾಮಿ ಆ ದೇವಾಲಯದ ಆವರಣದಲ್ಲಿದ್ದ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಿದ್ದರು.


ದೇವಾಲಯದ ಪರಿಶುದ್ಧ ಸ್ಥಳದ ಮುಂದುಗಡೆಯಲ್ಲಿ ಒಂದು ಮಂಟಪವಿತ್ತು; ಅದರ ಉದ್ದಳತೆ ದೇವಾಲಯದ ಅಗಲಕ್ಕೆ ಸರಿಯಾಗಿ 4:5 ಮೀಟರ್, ಅಗಲಳತೆ 9 ಮೀಟರ್.


ಕೂಡಲೆ ಆ ಪುರುಷ ನನ್ನನ್ನು ದೇವಸ್ಥಾನದ ದ್ವಾರಮಂಟಪಕ್ಕೆ ಕರೆದುತಂದು ಅದನ್ನು ಅಳೆದನು. ಅದರ ಎದುರುಬದುರಿನ ನಿಲವುಕಂಬಗಳ ಅಗಲ ಎರಡುವರೆ ಮೀಟರುಗಳು, ಬಾಗಿಲಿನ ಎರಡು ಪಕ್ಕದ ಗೋಡೆಗಳ ಅಗಲ ಅರ್ಧರ್ಧ ಮೀಟರ್,


ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಈ ಶುದ್ಧೀಕರಣವನ್ನು ಪ್ರಾರಂಭಿಸಿದರು. ಎಂಟನೆಯ ದಿನದಲ್ಲಿ ಸರ್ವೇಶ್ವರನ ಆಲಯದ ಮಂಟಪಕ್ಕೆ ಕೈಹಾಕಿದರು; ಹೀಗೆ ಸರ್ವೇಶ್ವರನ ಆಲಯವನ್ನು ಶುದ್ಧಪಡಿಸುವುದರಲ್ಲಿ ಎಂಟು ದಿನಗಳು ಕಳೆದವು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಕೆಲಸವೆಲ್ಲಾ ಮುಗಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು