Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:14 - ಕನ್ನಡ ಸತ್ಯವೇದವು C.L. Bible (BSI)

14 ಅವರು ಜೆರುಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವರು ಯೆರೂಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವರು ಯೆರೂಸಲೇವಿುನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್‍ಹಳ್ಳದಲ್ಲಿ ಬೀಸಾಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆ ಜನರು ಜೆರುಸಲೇಮಿನೊಳಗಿದ್ದ ಅನ್ಯ ದೇವರುಗಳಿಗಾಗಿ ಮಾಡಿದ್ದ ಯಜ್ಞವೇದಿಕೆಗಳನ್ನು ಕೆಡವಿಹಾಕಿದರು; ವಿಗ್ರಹಗಳಿಗೆ ಧೂಪಸಮರ್ಪಣೆಗಾಗಿ ಮಾಡಿದ ವೇದಿಕೆಗಳನ್ನೂ ಹಾಳುಗೆಡವಿದರು. ಅವುಗಳನ್ನೆಲ್ಲಾ ಕಿದ್ರೋನ್ ಕಣಿವೆಯಲ್ಲಿ ಬಿಸಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ಮತ್ತು ಧೂಪಪೀಠಗಳನ್ನು ತೆಗೆದುಹಾಕಿದರು. ಆ ಧೂಪಪೀಠಗಳನ್ನೆಲ್ಲಾ ತೆಗೆದುಕೊಂಡುಹೋಗಿ ಕಿದ್ರೋನ್ ಹಳ್ಳದಲ್ಲಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:14
13 ತಿಳಿವುಗಳ ಹೋಲಿಕೆ  

ಇದಲ್ಲದೆ, ಅಹಾಜನು ದೇವಾಲಯದ ಸಾಮಗ್ರಿಗಳನ್ನು ಕೂಡಿಸಿ, ಅವುಗಳನ್ನು ಚೂರುಚೂರು ಮಾಡಿಬಿಟ್ಟನು; ಸರ್ವೇಶ್ವರನ ಆಲಯದ ಬಾಗಿಲುಗಳನ್ನು ಮುಚ್ಚಿ ಜೆರುಸಲೇಮಿನ ಪ್ರತಿಯೊಂದು ಮೂಲೆಯಲ್ಲೂ ಯಜ್ಞವೇದಿಗಳನ್ನು ಕಟ್ಟಿಸಿದನು.


ಯಾಜಕರು ಸರ್ವೇಶ್ವರನ ಆಲಯವನ್ನು‍ ಶುದ್ಧಮಾಡುವುದಕ್ಕೆ ಒಳಗೆ ಹೋಗಿ ಪವಿತ್ರಸ್ಥಾನದಲ್ಲಿದ್ದ ಹೊಲಸನ್ನೆಲ್ಲಾ ಹೊರಗೆ ತಂದು ಪ್ರಾಕಾರದಲ್ಲಿ ಹಾಕಿದರು. ಲೇವಿಯರು ಅದನ್ನು ಕೂಡಿಸಿ ಹೊರಗೆ ಒಯ್ದು ಕಿದ್ರೋನ್ ಹಳ್ಳದಲ್ಲಿ ಹಾಕಿದರು.


ಅರಸನಾದ ಆಸನ ತಾಯಿ ಮಾಕಳು ಅಶೇರ ದೇವತೆಯ ಒಂದು ಅಸಹ್ಯ ಮೂರ್ತಿಯನ್ನು ಮಾಡಿಸಿದ್ದಳು. ಆದ್ದರಿಂದ ಅವನು ಆಕೆಯನ್ನು ‘ರಾಜಮಾತೆ’ ಎಂಬ ಪದವಿಯಿಂದ ತೆಗೆದುಹಾಕಿದನು. ಆ ಮೂರ್ತಿಯನ್ನು ತೆಗೆಸಿ ಕಿದ್ರೋನ್ ಹಳ್ಳದ ಬಳಿಯಲ್ಲಿ ಚೂರುಚೂರು ಮಾಡಿ ಸುಡಿಸಿದನು.


ಇವರೆಲ್ಲರೂ ಬಹಳವಾಗಿ ನಡೆಯುವಾಗ ಸುತ್ತ-ಮುತ್ತಿನವರೆಲ್ಲರೂ ಬಹಳವಾಗಿ ಅತ್ತರು. ಅರಸನೂ ಎಲ್ಲ ಜನರೂ ಕಿದ್ರೋನ್ ಹಳ್ಳವನ್ನು ದಾಟಿ ಅರಣ್ಯಮಾರ್ಗ ಹಿಡಿದರು.


ಯೇಸು ಸ್ವಾಮಿ ಹೀಗೆ ಹೇಳಿದ ಬಳಿಕ ತಮ್ಮ ಶಿಷ್ಯರೊಡನೆ ಹೊರಟು, ಕೆದ್ರೋನ್ ಹಳ್ಳವನ್ನು ದಾಟಿ, ಅಲ್ಲೇ ಇದ್ದ ತೋಟವನ್ನು ಹೊಕ್ಕರು.


ಆಶೇರಸ್ತಂಭಗಳನ್ನೂ ವಿಗ್ರಹಗಳನ್ನೂ ಒಡೆಸಿದನು, ಇಸ್ರಯೇಲ್ ನಾಡಿನಲ್ಲಿದ್ದ ಸೂರ್ಯಸ್ತಂಭಗಳನ್ನು ಪುಡಿಪುಡಿಮಾಡಿಸಿ ಜೆರುಸಲೇಮಿಗೆ ಹಿಂದಿರುಗಿದನು.


ಇದಲ್ಲದೆ, ಅವನು ಬಾಳ್‍ದೇವತೆಗಳ ಬಲಿಪೀಠಗಳನ್ನು ತನ್ನೆದುರಿನಲ್ಲೇ ಹಾಳುಮಾಡಿಸಿ, ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕೆಡವಿಸಿ, ಅಶೇರಸ್ತಂಭ, ಕೆತ್ತಿದ ಮತ್ತು ಎರಕದ ವಿಗ್ರಹ, ಇವುಗಳನ್ನು ಒಡಿಸಿ, ಪುಡಿಪುಡಿಮಾಡಿಸಿ, ಅವುಗಳಿಗೆ ಬಲಿಯರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು.


“ಬಹುಶಃ, ನೀವು ‘ನಮ್ಮ ದೇವರಾದ ಸರ್ವೇಶ್ವರನನ್ನೇ ನಂಬಿಕೊಂಡಿದ್ದೇವೆ,’ ಎಂದು ಹೇಳಬಹುದು. ಜೆರುಸಲೇಮಿನ ಬಲಿಪೀಠದ ಮುಂದೆಯೇ ಆರಾಧನೆಮಾಡಬೇಕು ಎಂದು ಯೆಹೂದ್ಯರಿಗೂ ಮತ್ತು ಜೆರುಸಲೇಮಿನವರಿಗೂ ಹಿಜ್ಕೀಯನು ಆಜ್ಞಾಪಿಸಿ ಆ ಸರ್ವೇಶ್ವರ ಸ್ವಾಮಿಯ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೆ?


ಹಿಜ್ಕೀಯನು ಒಂದೇ ಬಲಿಪೀಠದ ಮುಂದೆ ಆರಾಧನೆಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬುದಾಗಿ ಯೆಹೂದ್ಯರಿಗೂ ಜೆರುಸಲೇಮಿಗೂ ಆಜ್ಞಾಪಿಸಿ, ದೇವರ ಬೇರೆ ಎಲ್ಲ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿದನು ಅಲ್ಲವೆ?


ಯೋಷೀಯನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ, ಇನ್ನೂ ಯೌವನಸ್ಥನಾಗಿರುವಾಗಲೇ, ತನ್ನ ಪೂರ್ವಜನಾದ ದಾವೀದನ ದೇವರನ್ನು ಅವಲಂಬಿಸುವವನಾದನು; ಹನ್ನೆರಡನೆಯ ವರ್ಷ ಜುದೇಯದಲ್ಲೂ, ಜೆರುಸಲೇಮಿನಲ್ಲೂ ಇದ್ದ ಪೂಜಾಸ್ಥಳಗಳನ್ನು, ಆಶೇರಸ್ತಂಭಗಳನ್ನು ಹಾಗು ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನು ತೆಗೆದುಹಾಕಿ ನಾಡನ್ನು ಶುದ್ಧಪಡಿಸಿದನು.


‘ಬಹುಶಃ, ನೀನು ‘ನಮ್ಮ ದೇವರಾದ ಸರ್ವೇಶ್ವರನನ್ನೇ ನಂಬಿಕೊಂಡಿದ್ದೇವೆ’, ಎಂದು ಹೇಳಬಹುದು. ಹಿಜ್ಕೀಯನು, ಇದೇ ಬಲಿಪೀಠದ ಮುಂದೆ ಆರಾಧನೆಮಾಡಬೇಕು ಎಂದು ಯೆಹೂದ್ಯರಿಗೆ ಮತ್ತು ಜೆರುಸಲೇಮಿನವರಿಗೆ ಆಜ್ಞಾಪಿಸಿ ಆ ಸರ್ವೇಶ್ವರ ಸ್ವಾಮಿಯ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು