2 ಪೂರ್ವಕಾಲ ವೃತ್ತಾಂತ 30:18 - ಕನ್ನಡ ಸತ್ಯವೇದವು C.L. Bible (BSI)18 ಜನರಲ್ಲಿ ಅನೇಕಾನೇಕರು ಅಂದರೆ, ಹೆಚ್ಚಾಗಿ ಎಫ್ರಯಿಮ್, ಮನಸ್ಸೆ, ಇಸ್ಸಾಕಾರ್ ಹಾಗು ಜೆಬಲೂನ್ ಪ್ರಾಂತಗಳವರು, ತಮ್ಮನ್ನು ಶುದ್ಧಪಡಿಸಿಕೊಳ್ಳದೆ, ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ, ಪಾಸ್ಕಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು, “ಸರ್ವೇಶ್ವರಾ, ದಯಾಪರರಾದ ದೇವರೇ, ಈ ದೇವಾಲಯಕ್ಕೆ ಯಾತ್ರಿಕರಾಗಿ ಬಂದಿರುವವರಲ್ಲಿ ಇರಬೇಕಾದ ಪರಿಶುದ್ಧತೆ ಅನೇಕರಲ್ಲಿ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಜನರಲ್ಲಿ ಅನೇಕರು ಅಂದರೆ, ಹೆಚ್ಚಾಗಿ ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಹಾಗು ಜೆಬುಲೂನ್ ಪ್ರಾಂತ್ಯಗಳವರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ ಪಸ್ಕದ (ಹಬ್ಬ) ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು, “ಯೆಹೋವನೇ, ದಯಾಪರನಾದ ದೇವರೇ, ಅವರೆಲ್ಲರಿಗೆ ಕ್ಷಮೆಯನ್ನು ಅನುಗ್ರಹಿಸು” ಎಂದು ವಿಜ್ಞಾಪನೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಜನರಲ್ಲಿ ಅನೇಕಾನೇಕರು ಅಂದರೆ ಹೆಚ್ಚಾಗಿ ಎಫ್ರಾಯೀಮ್ ಮನಸ್ಸೆ ಇಸ್ಸಾಕಾರ್ ಜೆಬುಲೂನ್ ಪ್ರಾಂತಗಳವರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ ಪಸ್ಕಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು - ಯೆಹೋವನೇ, ದಯಾಪರನಾದ ದೇವರೇ, ದೇವಾಲಯಯಾತ್ರಿಕರಿಗಿರಬೇಕಾದ ಪರಿಶುದ್ಧತ್ವವು ಅನೇಕರಲ್ಲಿ ಇಲ್ಲದಿದ್ದರೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18-19 ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್ ಮತ್ತು ಜೆಬುಲೂನಿನಿಂದ ಬಂದಿದ್ದ ಎಷ್ಟೋ ಮಂದಿ ಪಸ್ಕಹಬ್ಬಕ್ಕಾಗಿ ತಮ್ಮನ್ನು ಸಿದ್ಧಮಾಡಿಕೊಂಡಿರಲಿಲ್ಲ. ಅವರು ಪಸ್ಕದ ಕುರಿಮರಿಯನ್ನು ಯೋಗ್ಯವಾದ ರೀತಿಯಲ್ಲಿ ತಿನ್ನಲಿಲ್ಲ. ಆದರೆ ಹಿಜ್ಕೀಯನು ಅಂಥವರಿಗೋಸ್ಕರವಾಗಿ, “ದೇವರಾದ ಯೆಹೋವನೇ, ನೀನು ಒಳ್ಳೆಯವನಾಗಿರುವೆ. ಇವರು ಯೋಗ್ಯವಾದ ರೀತಿಯಲ್ಲಿ ನಿನ್ನನ್ನು ಆರಾಧಿಸಲು ಬಂದಿದ್ದಾರೆ. ಆದರೆ ಧರ್ಮಶಾಸ್ತ್ರದ ಪ್ರಕಾರ ಅವರು ತಮ್ಮನ್ನು ಶುದ್ಧ ಮಾಡಿಕೊಳ್ಳಲಿಲ್ಲ. ದಯಮಾಡಿ ಅವರನ್ನು ಕ್ಷಮಿಸು. ನಮ್ಮ ಪಿತೃಗಳು ವಿಧೇಯರಾಗಿದ್ದ ದೇವರೇ, ಜನರು ಮೋಶೆಯ ನಿಯಮಕ್ಕನುಸಾರವಾಗಿ ತಮ್ಮನ್ನು ಶುದ್ಧಿ ಮಾಡಿಕೊಂಡಿಲ್ಲದಿದ್ದರೂ ನೀನು ಅವರನ್ನು ದಯವಿಟ್ಟು ಕ್ಷಮಿಸು” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವರಲ್ಲಿ ಅನೇಕರು ತಮ್ಮನ್ನು ಶುದ್ಧಮಾಡಿಕೊಳ್ಳದೆ ಮೋಶೆಯ ನಿಯಮಕ್ಕೆ ವಿರುದ್ಧ ರೀತಿಯಿಂದ ಪಸ್ಕದ ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿ, “ಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ, ಅಧ್ಯಾಯವನ್ನು ನೋಡಿ |