Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:19 - ಕನ್ನಡ ಸತ್ಯವೇದವು C.L. Bible (BSI)

19 ಆದರೂ ಪಿತೃಗಳ ದೇವರಾದ ನಿಮ್ಮನ್ನು ಅರಸುವ ಮನಸ್ಸಿನಿಂದ ಬಂದಿರುವವರಿಗೆಲ್ಲಾ ಕ್ಷಮೆಯನ್ನು ಅನುಗ್ರಹಿಸಿರಿ,” ಎಂದು ವಿಜ್ಞಾಪನೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ದೇವಾಲಯಕ್ಕೆ ಯಾತ್ರಿಕರಾಗಿ ಬಂದಿರುವವರಲ್ಲಿ ಇರಬೇಕಾದ ಪರಿಶುದ್ಧತ್ವವು ಅನೇಕರಲ್ಲಿ ಇಲ್ಲದಿದ್ದರೂ ಪೂರ್ವಿಕರ ದೇವರಾದ ಯೆಹೋವನನ್ನು ಹುಡುಕಬೇಕೆಂದು ಮನಸ್ಸುಮಾಡಿರುವವರಿಗೆಲ್ಲರಿಗೂ ಕ್ಷಮೆಯನ್ನು ಅನುಗ್ರಹಿಸು ಎಂದು ವಿಜ್ಞಾಪನೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಪಿತೃಗಳ ದೇವರಾದ ನಿನ್ನನ್ನು ಹುಡುಕಬೇಕೆಂದು ಮನಸ್ಸು ಮಾಡಿರುವವರಿಗೆಲ್ಲಾ ಕ್ಷಮೆಯನ್ನು ಅನುಗ್ರಹಿಸು ಎಂದು ವಿಜ್ಞಾಪನೆ ಮಾಡಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆಹೋವ ದೇವರೇ, ತಮ್ಮ ಪಿತೃಗಳ ದೇವರಾದ ನಿಮ್ಮನ್ನು ಹುಡುಕಬೇಕೆಂದು ಮನಸ್ಸು ಮಾಡುವವರಿಗೆಲ್ಲ ಕ್ಷಮೆಯನ್ನು ಅನುಗ್ರಹಿಸಿರಿ,” ಎಂದು ವಿಜ್ಞಾಪನೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:19
16 ತಿಳಿವುಗಳ ಹೋಲಿಕೆ  

ಆದರೂ ನೀವು ನಾಡಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದುಹಾಕಿದ್ದೀರಿ. ಸರ್ವೇಶ್ವರನ ಭಕ್ತಿ ನಿಮ್ಮಲ್ಲಿ ಬೇರೂರಿದೆ, ನಿಮ್ಮಲ್ಲಿ ಸುಶೀಲತೆ ಉಂಟೆಂದು ತಿಳಿದುಬಂದಿದೆ,” ಎಂಬುದಾಗಿ ಹೇಳಿದನು.


ಮಗನೇ, ನಾನು ಹೇಳುವುದು ನಾಟಲಿ ನಿನ್ನ ಮನಸ್ಸಿಗೆ; ನನ್ನ ನಡತೆ ಆದರ್ಶಕವಾಗಿರಲಿ ನಿನ್ನ ಕಣ್ಣುಗಳಿಗೆ.


ದೀನ ಕೋರಿಕೆಯನು ಪ್ರಭು, ತೀರಿಸುವೆ I ಹುರಿದುಂಬಿಸಿ, ಅವರ ಮೊರೆಗೆ ಕಿವಿಗೊಡುವೆ II


ಸರಿಪಡಿಸಿಕೋ ನಿನ್ನ ಅಂತರಂಗವನ್ನು ದೇವರತ್ತ ಎತ್ತು ನಿನ್ನ ಕರಗಳನ್ನು.


ಸರ್ವೇಶ್ವರನ ಧರ್ಮಶಾಸ್ತ್ರವನ್ನು ಅಭ್ಯಸಿಸಿ ಅನುಸರಿಸಲೂ ಇಸ್ರಯೇಲರಿಗೆ ಅದರ ವಿಧಿನಿಯಮಗಳನ್ನು ಕಲಿಸಲೂ ಅವನು ದೃಢಮನಸ್ಸು ಮಾಡಿಕೊಂಡಿದ್ದನು.


ಆದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರ ಮನಸ್ಸು ಇನ್ನೂ ತಮ್ಮ ಪಿತೃಗಳ ದೇವರ ಮೇಲೆ ನಾಟಿರಲಿಲ್ಲ.


ನಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರ ದೇವರೇ, ಸರ್ವೇಶ್ವರಾ, ನಿಮ್ಮ ಪ್ರಜೆಗಳಲ್ಲಿ ಇಂಥ ಮನೋಭಾವ ಸದಾ ಇರುವಂತೆ ಮಾಡಿರಿ; ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ ಇರಲು ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸಿರಿ.


ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಸರ್ವೇಶ್ವರನಿಗೆ ಅಭಿಮುಖರಾಗಿ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿರಿ. ಸರ್ವೇಶ್ವರನ ಮೇಲೆಯೇ ಮನಸ್ಸಿಟ್ಟು ಅವರೊಬ್ಬರಿಗೇ ಸೇವೆಸಲ್ಲಿಸಿರಿ; ಆಗ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವರು,” ಎಂದನು.


ಆದರೆ ಕೆಲವರು ನರಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿದ್ದರು. ಆದ್ದರಿಂದ ಪಾಸ್ಕಹಬ್ಬವನ್ನು ನಿಯಮಿತ ದಿನದಂದು ಆಚರಿಸಲಾಗಲಿಲ್ಲ. ಅವರು ಮೋಶೆ - ಆರೋನರ ಬಳಿಗೆ ಬಂದು,


ಆಮೇಲೆ ಆಕೆ ಪೂರ್ಣಶುದ್ಧಳಾಗಲು ಮೂವತ್ತುಮೂರು ದಿನಗಳವರೆಗೆ ಕಾದಿರಬೇಕು. ಅದು ಮುಗಿಯುವ ತನಕ ಆಕೆ ದೇವರ ವಸ್ತುಗಳನ್ನು ಮುಟ್ಟಕೂಡದು, ದೇವಸ್ಥಾನಕ್ಕೆ ಬರಕೂಡದು.


ಈ ಪ್ರಕಾರ ದೇವರು ದೊಡ್ಡ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ನಾನಾ ವಿಧವಾದ ಜೀವಜಂತುಗಳನ್ನೂ ರೆಕ್ಕೆಗಳುಳ್ಳ ಸಕಲ ವಿಧವಾದ ಪಕ್ಷಿಗಳನ್ನೂ ಸೃಷ್ಟಿಮಾಡಿದರು. ದೇವರ ದೃಷ್ಟಿಗೆ ಅದೂ ಚೆನ್ನಾಗಿ ಕಂಡಿತು.


ಸೆರೆಯಿಂದ ಬಂದ ಇಸ್ರಯೇಲರು ಮತ್ತು ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ಅರಸುವುದಕ್ಕಾಗಿ, ದೇಶನಿವಾಸಿಗಳ ಅಶುದ್ಧತ್ವವನ್ನು ತೊರೆದು ಇವರೊಡನೆ ಕೂಡಿಕೊಂಡ ಎಲ್ಲರು, ಪಾಸ್ಕಭೋಜನ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು