Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:2 - ಕನ್ನಡ ಸತ್ಯವೇದವು C.L. Bible (BSI)

2 ಯಾಜಕರಲ್ಲಿ ತಕ್ಕಷ್ಟು ಮಂದಿ ತಮ್ಮನ್ನು ಶುದ್ಧಪಡಿಸಿಕೊಂಡಿರಲಿಲ್ಲ. ಜನರು ಜೆರುಸಲೇಮಿನಲ್ಲಿ ಇನ್ನೂ ಕೂಡಿಬಂದಿರಲಿಲ್ಲವಾದುದರಿಂದ ಪಾಸ್ಕವನ್ನು ಕೂಡಲೆ ಆಚರಿಸಲಾಗದೆಂದು ಅರಸನು, ಅವನ ಪದಾಧಿಕಾರಿಗಳು ಹಾಗು ಜೆರುಸಲೇಮಿನ ಸರ್ವಸಂಘದವರು ತಿಳಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಎರಡನೆಯ ತಿಂಗಳಿನಲ್ಲಿ ಪಸ್ಕಹಬ್ಬವನ್ನು ಯೆರೂಸಲೇಮಿನಲ್ಲಿ ಆಚರಿಸಬೇಕೆಂದು ಅರಸನು, ಪದಾಧಿಕಾರಿಗಳು ಅಭಿಪ್ರಾಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯಾಜಕರಲ್ಲಿ ತಕ್ಕಷ್ಟು ಮಂದಿ ತಮ್ಮನ್ನು ಶುದ್ಧಪಡಿಸಿಕೊಂಡಿರಲಿಲ್ಲವಾದದರಿಂದಲೂ ಜನರು ಯೆರೂಸಲೇವಿುನಲ್ಲಿ ಇನ್ನೂ ಕೂಡಿರಲಿಲ್ಲವಾದದರಿಂದಲೂ ಕೂಡಲೆ ಪಸ್ಕವನ್ನು ಆಚರಿಸಲಾಗದೆಂದು ಅರಸನೂ ಅವನ ಸರದಾರರೂ ಯೆರೂಸಲೇವಿುನ ಸರ್ವಸಂಘದವರೂ ತಿಳಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಹಿಜ್ಕೀಯ ಅರಸನೂ ಅಧಿಕಾರಿಗಳೂ ಜೆರುಸಲೇಮಿನ ಸಭೆಯವರೆಲ್ಲರೂ ಎರಡನೆಯ ತಿಂಗಳಲ್ಲಿ ಹಬ್ಬವನ್ನು ಆಚರಿಸಲು ನಿರ್ಧರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆರೂಸಲೇಮಿನಲ್ಲಿರುವ ಅರಸನೂ ಅವನ ಪ್ರಧಾನರೂ ಸಮಸ್ತ ಸಭೆಯೂ ಎರಡನೆಯ ತಿಂಗಳಲ್ಲಿ ಪಸ್ಕವನ್ನು ಆಚರಿಸಲು ತೀರ್ಮಾನಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:2
11 ತಿಳಿವುಗಳ ಹೋಲಿಕೆ  

ಬುದ್ಧಿಮಾತಿಗೆ ಕಿವಿಗೊಡದ ಮೂರ್ಖನಾದ ಮುದಿಯರಸನಿಗಿಂತ ಜ್ಞಾನಿಯಾದ ಬಡ ಯುವಕನೇ ಮೇಲು.


ಆಲೋಚನೆಯಿಲ್ಲದೆ ಉದ್ದೇಶಗಳು ಈಡೇರವು; ಹಲವಾರು ಆಲೋಚನಾಪರರಿರುವಲ್ಲಿ ಅವು ಕೈಗೂಡುವುವು.


ನಾಯಕನಿಲ್ಲದ ಜನತೆ ನಾಶವಾಗುವುದು; ಹಲವರು ಸುಮಂತ್ರಿಗಳಿರುವಲ್ಲಿ ಸಂರಕ್ಷಣೆ ಇರುವುದು.


ಆಮೇಲೆ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನ ಪಾಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ವಧಿಸಿದರು. ಯಾಜಕರೂ ಲೇವಿಯರೂ, ಮೊದಲನೆಯ ಸಾರಿ ತಪ್ಪಿದ್ದಕ್ಕಾಗಿ ನಾಚಿಕೆಪಟ್ಟು, ತಮ್ಮನ್ನು ಶುದ್ಧಪಡಿಸಿಕೊಂಡರು. ಸರ್ವೇಶ್ವರನ ಆಲಯದಲ್ಲಿ ದಹನಬಲಿಗಳನ್ನು ಸಮರ್ಪಿಸಿದರು;


ಹೀಗೆ, ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿನಲ್ಲಿ ಕೂಡಿದರು; ಅದೊಂದು ಮಹಾಕೂಟವಾಗಿತ್ತು.


ತರುವಾಯ ಹಿಜ್ಕೀಯನು, ಇಸ್ರಯೇಲ್ ದೇವರಾದ ಸರ್ವೇಶ್ವರಸ್ವಾಮಿಯ ಪಾಸ್ಕವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿನಲ್ಲಿರುವ ಸರ್ವೇಶ್ವರನ ಮಹಾಲಯಕ್ಕೆ ಬರಬೇಕೆಂದು ಎಲ್ಲ ಇಸ್ರಯೇಲರಿಗೆ, ಯೆಹೂದ್ಯರಿಗೆ, ಎಫ್ರಯಿಮರಿಗೆ ಹಾಗು ಮನಸ್ಸೆಯವರಿಗೆ ದೂತರ ಮುಖಾಂತರ ಮತ್ತು ಪತ್ರಗಳ ಮೂಲಕ ತಿಳಿಯಪಡಿಸಿದನು.


ಇಂಥ ಪಾಸ್ಕಹಬ್ಬವು ಇಸ್ರಯೇಲರನ್ನು ಪಾಲಿಸಿದ ನ್ಯಾಯಸ್ಥಾಪಕರ ಕಾಲದಲ್ಲಾಗಲಿ ಇಸ್ರಯೇಲರ ಮತ್ತು ಜುದೇಯದ ಅರಸರ ಕಾಲದಲ್ಲಾಗಲಿ ನಡೆದಿರಲಿಲ್ಲ.


ಅವನು ತನ್ನ ಸಹಸ್ರಾಧಿಪತಿಗಳನ್ನು, ಶತಾಧಿಪತಿಗಳನ್ನು, ಸರಕಾರದ ಎಲ್ಲ ಪದಾಧಿಕಾರಿಗಳನ್ನು ಹಾಗೂ ಇಸ್ರಯೇಲ್ ಕುಲಗೋತ್ರಗಳ ನಾಯಕರನ್ನು ಬರಮಾಡಿ, ಅವರ ಸಮೇತ ಗಿಬ್ಯೋನಿನಲ್ಲಿದ್ದ ಪೂಜಾಸ್ಥಳಕ್ಕೆ ಹೋದನು.


ಯೋಷೀಯನು ಸರ್ವೇಶ್ವರನಿಗೆ ಜೆರುಸಲೇಮಿನಲ್ಲಿ ಪಾಸ್ಕಹಬ್ಬವನ್ನು ಆಚರಿಸುವಂತೆ ಮಾಡಿದನು. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಾಸ್ಕದ ಕುರಿಮರಿಗಳನ್ನು ವಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು