Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:21 - ಕನ್ನಡ ಸತ್ಯವೇದವು C.L. Bible (BSI)

21 ಜೆರುಸಲೇಮಿನಲ್ಲಿ ಕೂಡಿಬಂದ ಇಸ್ರಯೇಲರು ಏಳು ದಿನಗಳವರೆಗೂ ಮಹಾಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಿದರು. ಲೇವಿಯರೂ ಯಾಜಕರೂ ಮಹಾವಾದ್ಯದೊಡನೆ ಸರ್ವೇಶ್ವರನನ್ನು ಪ್ರತಿದಿನವೂ ಕೀರ್ತಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಇಸ್ರಾಯೇಲರು ಏಳು ದಿನಗಳವರೆಗೂ ಮಹಾ ಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುತ್ತಾ ಇದ್ದರು. ಲೇವಿಯರೂ, ಯಾಜಕರೂ ಮಹಾವಾದ್ಯಗಳೊಡನೆ ಯೆಹೋವನನ್ನು ಪ್ರತಿದಿನವೂ ಸ್ತುತಿ ಕೀರ್ತಿಸುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆರೂಸಲೇವಿುನಲ್ಲಿ ಕೂಡಿಬಂದ ಇಸ್ರಾಯೇಲ್ಯರು ಏಳು ದಿನಗಳವರೆಗೂ ಮಹಾ ಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುತ್ತಾ ಇದ್ದರು. ಲೇವಿಯರೂ ಯಾಜಕರೂ ಮಹಾವಾದ್ಯದೊಡನೆ ಯೆಹೋವನನ್ನು ಪ್ರತಿದಿನವೂ ಕೀರ್ತಿಸುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇಸ್ರೇಲರು ಜೆರುಸಲೇಮಿನಲ್ಲಿ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿವಸಗಳ ತನಕ ಆಚರಿಸಿದರು. ಅವರೆಲ್ಲಾ ಹರ್ಷದಿಂದ ತುಂಬಿ ಹಬ್ಬವನ್ನು ಆಚರಿಸಿದರು. ಯಾಜಕರೂ ಲೇವಿಯರೂ ಪ್ರತಿದಿನ ಗಟ್ಟಿಯಾಗಿ ಸ್ತುತಿಗೀತೆಗಳನ್ನು ಹಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದ್ದರಿಂದ ಯೆರೂಸಲೇಮಿನಲ್ಲಿದ್ದ ಇಸ್ರಾಯೇಲರು ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಏಳು ದಿವಸ ಸಂತೋಷದಿಂದ ಆಚರಿಸಿದರು. ಲೇವಿಯರೂ ಯಾಜಕರೂ ಯೆಹೋವ ದೇವರಿಗೆ ಸಮರ್ಪಿತವಾದ ಮಹಾ ಶಬ್ದದ ವಾದ್ಯಗಳಿಂದ ಯೆಹೋವ ದೇವರಿಗೆ ಹಾಡಿ ಪ್ರತಿದಿನವೂ ಯೆಹೋವ ದೇವರನ್ನು ಸ್ತುತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:21
22 ತಿಳಿವುಗಳ ಹೋಲಿಕೆ  

ಏಳು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿನದಲ್ಲಿ ಸರ್ವೇಶ್ವರನ ಗೌರವಾರ್ಥ ಹಬ್ಬ ಮಾಡಬೇಕು.


ಏಳು ದಿವಸ ನೀವು ಹುಳಿರಹಿತ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲೇ ಹುಳಿಹಿಟ್ಟನ್ನೆಲ್ಲಾ ನಿಮ್ಮ ಮನೆಗಳಿಂದ ತೆಗೆದುಬಿಡಬೇಕು. ಆ ಏಳು ದಿನಗಳಲ್ಲಿ ಯಾವನಾದರೂ ಹುಳಿಬೆರಸಿದ್ದನ್ನು ತಿಂದರೆ ಅವನನ್ನು ಇಸ್ರಯೇಲರಿಂದ ಬಹಿಷ್ಕರಿಸಬೇಕು.


ಪ್ರಭುವಿನಲ್ಲಿ ನೀವು ಸತತವೂ ಆನಂದಿಸಿರಿ. ಆನಂದಿಸಬೇಕೆಂದು ಮತ್ತೆ ಒತ್ತಿ ಹೇಳುತ್ತೇನೆ.


ದಿನಂಪ್ರತಿ ಅವರು ಒಮ್ಮನಸ್ಸಿನಿಂದ ದೇವಾಲಯದಲ್ಲಿ ಸಭೆ ಸೇರುತ್ತಿದ್ದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುವ ಸಹಭೋಜನವನ್ನು ಏರ್ಪಡಿಸಿ ಸಂತೋಷದಿಂದಲೂ ಸಹೃದಯದಿಂದಲೂ ಭಾಗವಹಿಸುತ್ತಿದ್ದರು.


ಹುಳಿರಹಿತ ರೊಟ್ಟಿಯ ಹಬ್ಬ ಆರಂಭವಾಯಿತು. ಪಾಸ್ಕ ಕುರಿಮರಿಯನ್ನು ಕೊಯ್ಯಬೇಕಾದ ದಿನವು ಬಂದಿತು.


ಪಾಸ್ಕಮಹೋತ್ಸವವು ಸಮೀಪಿಸುತ್ತಿತ್ತು. ಅದು ಹುಳಿರಹಿತ ರೊಟ್ಟಿಯನ್ನು ಭುಜಿಸುವ ಹಬ್ಬ.


ಇದಲ್ಲದೆ, ಎಜ್ರನು ಅವರಿಗೆ, “ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿ; ತಮಗಾಗಿ ಏನೂ ಸಿದ್ಧಮಾಡದವರಿಗೆ ಒಂದು ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಸರ್ವೇಶ್ವರನಿಗೆ ಪ್ರತಿಷ್ಠಿತ ದಿನ! ವ್ಯಸನಪಡಬೇಡಿ; ಸರ್ವೇಶ್ವರನ ಆನಂದವೇ ನಿಮ್ಮ ಆಶ್ರಯವಾಗಿದೆ,” ಎಂದನು.


ದಾವೀದನ ಮಗನೂ ಇಸ್ರಯೇಲರ ಅರಸನೂ ಆದ ಸೊಲೊಮೋನನ ಕಾಲದಿಂದ ಜೆರುಸಲೇಮಿನಲ್ಲಿ ಅಂಥ ಉತ್ಸವ ನಡೆದಿರಲಿಲ್ಲ. ಆದುದರಿಂದ ಜೆರುಸಲೇಮಿನಲ್ಲಿ ಹೇಳತೀರದ ಆನಂದವಿತ್ತು.


ಆಮೇಲೆ ಜನರ ಸಮ್ಮತಿಯಿಂದ ಸರ್ವೇಶ್ವರನಿಗಾಗಿ ಗಾಯನಮಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡನು. ಅವರಿಗೆ, “ಪರಿಶುದ್ಧತ್ವವೆಂಬ ಭೂಷಣದೊಡನೆ ಯೋಧರ ಮುಂದೆ ಹೋಗುತ್ತಾ, “ಸರ್ವೇಶ್ವರನಿಗೆ ಕೃತಜ್ಞತಾ ಸ್ತುತಿಮಾಡಿರಿ, ಅವರ ಅಚಲಪ್ರೀತಿ ಶಾಶ್ವತ’ ಎಂದು ಭಜಿಸಿರಿ,” ಎಂಬುದಾಗಿ ಆಜ್ಞಾಪಿಸಿದನು.


ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿನ ಅರಸನು ಜನರಿಗೆ ಅಪ್ಪಣೆಕೊಟ್ಟನು; ಅವರು ದಾವೀದ - ಸೊಲೊಮೋನರಿಗೂ ಪ್ರಜೆಗಳಾದ ಇಸ್ರಯೇಲರಿಗೂ ಸರ್ವೇಶ್ವರ ಮಾಡಿದ ಉಪಕಾರಗಳನ್ನು ನೆನಸಿಕೊಂಡು, ಆನಂದಭರಿತರಾಗಿ ಹರ್ಷಿಸುತ್ತಾ, ತಮ್ಮ ತಮ್ಮ ನಿವಾಸಗಳಿಗೆ ಹಿಂದಿರುಗಿದರು.


ಅದರಲ್ಲಿ ನೀವೂ ನಿಮ್ಮ ಗಂಡುಹೆಣ್ಣು ಮಕ್ಕಳೂ ಗಂಡುಹೆಣ್ಣು ಆಳುಗಳೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಾಯಿತಂದೆಯಿಲ್ಲದವರೂ ಹಾಗು ವಿಧವೆಯರೂ ಸಂಭ್ರಮದಿಂದಿರಬೇಕು.


ನೀವು, ನಿಮ್ಮ ಗಂಡು ಹೆಣ್ಣು ಮಕ್ಕಳು, ದಾಸದಾಸಿಯರು ಹಾಗು ನಿಮ್ಮೊಡನೆ ಸೊತ್ತನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ಅಲ್ಲಿಯೇ ಅವರ ಸನ್ನಿಧಿಯಲ್ಲಿ ಊಟಮಾಡಿ, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.


ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ಹಬ್ಬವನ್ನು ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು. ಅಂದು ಮೊದಲ್ಗೊಂಡು ಏಳು ದಿನಗಳಲ್ಲೂ ಹುಳಿರಹಿತ ರೊಟ್ಟಿಯನ್ನು ಊಟಮಾಡಬೇಕು.


ಕೆಲವು ಮಂದಿ ಆಶೇರ್ಯರು, ಮನಸ್ಸೆಯವರು ಹಾಗು ಜೆಬುಲೂನ್ಯರು ಮಾತ್ರ ದೀನಮನಸ್ಕರಾಗಿ ಜೆರುಸಲೇಮಿಗೆ ಬಂದರು.


ಕೂಡಿಬಂದಿದ್ದ ಇಸ್ರಯೇಲರು ಆ ಸಂದರ್ಭದಲ್ಲಿ ಪಾಸ್ಕಹಬ್ಬವನ್ನು ಹಾಗು ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಏಳು ದಿನಗಳವರೆಗೆ ಆಚರಿಸಿದರು.


ನೂನನ ಮಗ ಯೆಹೋಶುವನ ಕಾಲದಿಂದ ಆವರೆಗೂ ಇಸ್ರಯೇಲರು ಹೀಗೆ ಮಾಡಿರಲಿಲ್ಲ. ಸೆರೆಯಿಂದ ಹಿಂತಿರುಗಿಬಂದ ಸರ್ವಸಮಾಜದವರು ಪರ್ಣಕುಟೀರಗಳನ್ನು ಮಾಡಿಕೊಂಡು, ಅವುಗಳಲ್ಲಿ ವಾಸಿಸುತ್ತಾ, ಬಹು ಸಂತೋಷಪಟ್ಟರು.


ಅರಸ ಹಿಜ್ಕೀಯನೂ ಪದಾಧಿಕಾರಿಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಸರ್ವೇಶ್ವರನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಿದರು. ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.


ಹಬ್ಬ ಮುಗಿಸಿಕೊಂಡು ಅವರು ಹಿಂದಿರುಗಿ ಬರುವಾಗ ಬಾಲಕಯೇಸು ಜೆರುಸಲೇಮಿನಲ್ಲಿಯೇ ಉಳಿದುಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು