Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:6 - ಕನ್ನಡ ಸತ್ಯವೇದವು C.L. Bible (BSI)

6 ಅರಸನ ಮತ್ತು ಅವನ ಪದಾಧಿಕಾರಿಗಳ ಪತ್ರವನ್ನು ತೆಗೆದುಕೊಂಡುಹೋದ ದೂತರು ಇಸ್ರಯೇಲ್ ಹಾಗು ಜುದೇಯ ನಾಡುಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಯೇಲರೇ, ಅಬ್ರಹಾಮ್, ಇಸಾಕ್, ಇಸ್ರಯೇಲರ ದೇವರಾದ ಸರ್ವೇಶ್ವರನಿಗೆ ಅಭಿಮುಖರಾಗಿರಿ. ಆಗ ಅವರೂ ನಿಮ್ಮಲ್ಲಿ ಅಸ್ಸೀರಿಯಾದ ಅರಸನ ಕೈಗೆ ಸಿಕ್ಕದೆ ತಪ್ಪಿಸಿಕೊಂಡ ಅಳಿದುಳಿದವರಿಗೆ ಅಭಿಮುಖರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅರಸನ ಮತ್ತು ಅವನ ಪದಾಧಿಕಾರಿಗಳಿಂದ ಪತ್ರಗಳನ್ನು ತೆಗೆದುಕೊಂಡು ಹೋದ ದೂತರು ಇಸ್ರಾಯೇಲ್ ಮತ್ತು ಯೆಹೂದ ದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಾಯೇಲರೇ, ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನು ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದಿರುವ ನಿಮ್ಮ ಕಡೆಗೆ ತಿರುಗಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅರಸನ ಮತ್ತು ಅವನ ಸರದಾರರ ಪತ್ರಗಳನ್ನು ತೆಗೆದುಕೊಂಡುಹೋದ ದೂತರು ಇಸ್ರಾಯೇಲ್ ಯೆಹೂದದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಪ್ರಕಟಿಸಿದ್ದೇನಂದರೆ - ಇಸ್ರಾಯೇಲ್ಯರೇ, ಅಬ್ರಹಾಮ್ ಇಸಾಕ್ ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನೂ ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದವರ ಕಡೆಗೆ ತಿರುಗಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅದಕ್ಕಾಗಿ ಸಂದೇಶಕರು ರಾಜನ ಪತ್ರವನ್ನು ಇಡೀ ಇಸ್ರೇಲ್ ಮತ್ತು ಯೆಹೂದ ಪ್ರಾಂತ್ಯದ ಜನರಿಗೆ ಕೊಟ್ಟರು. ಅದರಲ್ಲಿ ಹೀಗೆ ಬರೆದಿದ್ದನು: “ಇಸ್ರೇಲಿನ ಮಕ್ಕಳೇ, ಅಬ್ರಹಾಮನೂ ಇಸಾಕನೂ ಯಾಕೋಬನೂ ಆರಾಧಿಸಿದ ದೇವರಾದ ಯೆಹೋವನ ಕಡೆಗೆ ತಿರುಗಿರಿ. ಆಗ ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದವರ ಕಡೆಗೆ ಆತನು ತಿರುಗಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅದೇ ಪ್ರಕಾರ ಓಟಗಾರರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತೆಗೆದುಕೊಂಡು, ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್ ಮತ್ತು ಯೆಹೂದ ದೇಶಗಳಿಗೆ ಹೋಗಿ, “ಇಸ್ರಾಯೇಲರೇ, ಅಬ್ರಹಾಮನ, ಇಸಾಕನ, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿರಿ. ಆಗ ಅವರು ಅಸ್ಸೀರಿಯದ ಅರಸರ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಕಡೆಗೆ ತಿರುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:6
25 ತಿಳಿವುಗಳ ಹೋಲಿಕೆ  

ಒಬ್ಬ ಸುದ್ದಿಗಾರ ಇನ್ನೊಬ್ಬ ಸುದ್ದಿಗಾರನತ್ತ ಓಡುತ್ತಾನೆ. ಒಬ್ಬ ದೂತ ಇನ್ನೊಬ್ಬ ದೂತನತ್ತ ದೌಡಾಯಿಸುತ್ತಾನೆ. ‘ರಾಜಧಾನಿಯನ್ನು ಎಲ್ಲಾ ಕಡೆಯಿಂದಲೂ ಆಕ್ರಮಿಸಿದ್ದಾರೆ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಇಸ್ರಯೇಲಿನ ಜನರೇ, ನೀವು ಹಿಂದಿರುಗುವಿರಾದರೆ ನನ್ನ ಬಳಿಗೆ ಬನ್ನಿ. ಅಸಹ್ಯವಾದ ನಿಮ್ಮ ಮೂರ್ತಿ ಪೂಜಾವಸ್ತುಗಳನ್ನು ನನ್ನ ಕಣ್ಣೆದುರಿನಿಂದ ತೆಗೆದುಬಿಡಿ. ಆಗ ನೀವು ಅತ್ತಿತ್ತ ತೂರಾಡಲಾರಿರಿ.


ಅರಸನ ಈ ರಾಜಾಜ್ಞೆ ಶೂಷನ್ ನಗರದಲ್ಲಿ ಪ್ರಕಟವಾದ ಕೂಡಲೆ ಅದರಿಂದ ಪ್ರೇರಿತರಾದ ಅಂಚೆಯವರು ಅರಮನೆಯ ಸವಾರಿ ಕುದುರೆಗಳನ್ನೇರಿ ಅತಿಶೀಘ್ರವಾಗಿ ಧಾವಿಸಿದರು.


ಇಸ್ರಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯಾ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಮತ್ತು ಗಿಲ್ಯಾದ್ ಹಾಗು ಗಲಿಲೇಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು, ಅವುಗಳ ನಿವಾಸಿಗಳನ್ನು ಅಸ್ಸೀರಿಯಾ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.


ಅಸ್ಸೀರಿಯಾ ದೇಶದ ಅರಸನಾದ ಪೂಲನೆಂಬವನು ಇಸ್ರಯೇಲ್ ದೇಶಕ್ಕೆ ವಿರುದ್ಧ ದಾಳಿಯಿಟ್ಟಾಗ, ಮೆನಹೇಮನು ಅವನ ಮುಖಾಂತರ ತನ್ನ ಅರಸುತನವನ್ನು ದೃಢಪಡಿಸಿಕೊಳ್ಳುವುದಕ್ಕಾಗಿ, ಅವನಿಗೆ ಮೂವತ್ತನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟನು.


ನನ್ನ ದಿನಗಳು ಓಟಗಾರನಿಗಿಂತ ವೇಗ ಅವು ಓಡುತ್ತವೆ ಕಾಣದೆ ಯಾವುದೊಂದು ಸುಖ.


ಅಸ್ಸೀರಿಯದ ಅರಸ ತಿಲ್ಗತ್ಪಿಲ್ನೆಸರನು ಬಂದು, ಅವನಿಗೆ ನೆರವಾಗುವುದಕ್ಕೆ ಬದಲಾಗಿ ಅವನು ತಲೆತಗ್ಗಿಸುವಂತೆ ಮಾಡಿದ್ದನು.


ಆದುದರಿಂದ ಅಸ್ಸೀರಿಯದ ರಾಜಪೂಲ್ (ಇವನಿಗೆ ತಿಲ್ಗತ್ಪಿಲೆಸರ್ ಎಂಬ ಹೆಸರೂ ಇದೆ) ಅವರ ಮೇಲೆ ದಾಳಿಮಾಡುವಂತೆ ಇಸ್ರಯೇಲ್ ದೇವರು ಪ್ರೇರಿಸಿದರು. ಅವನು ರೂಬೇನ್, ಗಾದ್ ಮತ್ತು ಪೂರ್ವದಲ್ಲಿಯ ಮನಸ್ಸೆ ಗೋತ್ರ ಗೋತ್ರಗಳವರನ್ನು ಗಡೀಪಾರು ಮಾಡಿ ಅವರನ್ನು ಹಲಹ, ಹಾಬೋರ್, ಹಾರ ಎಂಬ ಪ್ರಾಂತ್ಯಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆ ಒಯ್ದನು. ಅವರು ಅಲ್ಲಿಯೇ ನೆಲೆಸುವಂತೆ ಮಾಡಿದನು.


ದೇವರ ಸಮೀಪಕ್ಕೆ ಬನ್ನಿ, ಆಗ ಅವರು ನಿಮ್ಮ ಸಮೀಪಕ್ಕೆ ಬರುವರು. ಪಾಪಾತ್ಮರೇ, ನಿಮ್ಮ ಕೈ ಶುದ್ಧವಾಗಿರಲಿ. ಎರಡು ಮನಸ್ಸಿನವರೇ, ನಿಮ್ಮ ಹೃದಯ ನಿರ್ಮಲವಾಗಿರಲಿ.


ಇಸ್ರಯೇಲ್, ನಿನ್ನ ಸರ್ವೇಶ್ವರನಾದ ದೇವರ ಬಳಿಗೆ ಹಿಂದಿರುಗು. ನಿನ್ನ ಪಾಪದ್ರೋಹಗಳೇ ನಿನ್ನ ಪತನಕ್ಕೆ ಕಾರಣ.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲವಲೇಶವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿ, ಬಿಟ್ಟುಬಿಡಿ; ನೀವು ಏಕೆ ಸಾಯಬೇಕು?” ಇದು ಸರ್ವೇಶ್ವರನಾದ ದೇವರ ನುಡಿ.


ಹೇ ಸರ್ವೇಶ್ವರಾ, ನಮ್ಮ ಮೇಲೆ ನೀ ಬಲು ಸಿಟ್ಟುಗೊಂಡಿರುವೆಯೋ? ಬಹುಶಃ ನಮ್ಮನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿರುವೆಯೋ?


“ನಾಡಿನ ಹತ್ತನೇ ಒಂದು ಭಾಗ ಉಳಿದಿದ್ದರೂ ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ” ಎಂದರು. ಹೀಗೆ ಉಳಿದ ಬುಡವು ಮುಂದೆ ದೇವಜನರಾಗಿ ಚಿಗುರುವುದು.


ಸೇನಾಧೀಶ್ವರ ಸರ್ವೇಶ್ವರ ಕೆಲವು ಜನರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ, ಗೊಮೋರದ ದುರ್ದೆಶೆಯೇ ನಮಗೆ ಸಂಭವಿಸುತ್ತಿತ್ತು.


ಪತ್ರಗಳನ್ನು ಅಂಚೆಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳಿಸಲಾಯಿತು. ಅವುಗಳಲ್ಲಿ ಈ ರೀತಿ ಬರೆದಿತ್ತು: “ಒಂದೇ ದಿನದಲ್ಲಿ, ಅಂದರೆ, ಹನ್ನೆರಡನೆ ತಿಂಗಳಾದ ಫಾಲ್ಗುಣ ಮಾಸದ ಹದಿಮೂರನೆಯ ದಿನದಲ್ಲಿ ಹಿರಿಯರು, ಕಿರಿಯರು, ಮಕ್ಕಳು, ಮಹಿಳೆಯರೆನ್ನದೆ ನಿಮ್ಮ ಮಧ್ಯೆ ವಾಸಿಸುವ ಎಲ್ಲಾ ಯೆಹೂದ್ಯರನ್ನು ಕೊಂದುಹಾಕಿ, ನಿರ್ಮೂಲಮಾಡಿ, ನಿರ್ನಾಮಗೊಳಿಸಿ.


ಜೆರುಸಲೇಮಿನಿಂದ ಬಾಬಿಲೋನಿಗೆ ನೆಬೂಕದ್ನೆಚ್ಚರನು ಸೆರೆ ಒಯ್ದಿದ್ದ ಹಿರಿಯರಿಗೂ ಯಾಜಕರಿಗೂ ಪ್ರವಾದಿಗಳಿಗೂ ಸಕಲ ಜನರಿಗೂ ಪ್ರವಾದಿ ಯೆರೆಮೀಯನು ಜೆರುಸಲೇಮಿನಿಂದ ಒಂದು ಪತ್ರವನ್ನು ಬರೆದನು.


ಸಂಧ್ಯಾನೈವೇದ್ಯದ ಹೊತ್ತಿಗೆ, ಪ್ರವಾದಿ ಎಲೀಯನು ಪೀಠದ ಹತ್ತಿರ ಬಂದು, “ಅಬ್ರಹಾಮ್, ಇಸಾಕ್, ಇಸ್ರಯೇಲರ ದೇವರೇ, ಸರ್ವೇಶ್ವರಾ, ನೀವೊಬ್ಬರೇ ಇಸ್ರಯೇಲರ ದೇವರಾಗಿರುತ್ತೀರಿ ಎಂಬುದನ್ನು, ನಾನು ನಿನ್ನ ದಾಸನಾಗಿರುತ್ತೇನೆಂಬುದನ್ನು ಹಾಗು ಇದನ್ನೆಲ್ಲಾ ನಿಮ್ಮ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನು ಈ ದಿನ ತೋರಿಸಿಕೊಡಿ.


ನಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರ ದೇವರೇ, ಸರ್ವೇಶ್ವರಾ, ನಿಮ್ಮ ಪ್ರಜೆಗಳಲ್ಲಿ ಇಂಥ ಮನೋಭಾವ ಸದಾ ಇರುವಂತೆ ಮಾಡಿರಿ; ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ ಇರಲು ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸಿರಿ.


“ಭ್ರಷ್ಟರಾದ ಜನರೇ, ನನಗೆ ಅಭಿಮುಖರಾಗಿರಿ, ನಾನು ನಿಮಗೆ ಅಧಿಪತಿ. ನಿಮ್ಮಲ್ಲಿ ಒಂದು ಪಟ್ಟಣಕ್ಕೆ ಒಬ್ಬನಂತೆ, ಗೋತ್ರಕ್ಕೆ ಇಬ್ಬರಂತೆ ಆರಿಸಿ ಸಿಯೋನಿಗೆ ಕರೆತರುವೆನು.


ನಮ್ಮ ನಡತೆಯನ್ನು ಪರೀಕ್ಷಿಸಿ ಪರಿಶೋಧಿಸೋಣ ಸರ್ವೇಶ್ವರನ ಕಡೆಗೆ ತಿರುಗಿಕೊಳ್ಳೋಣ;


ನನ್ನನ್ನು ಜನರು ಮರೆಹೋಗುತ್ತಾ ಹೀಗೆನ್ನುವರು: “ಬನ್ನಿ, ಸರ್ವೇಶ್ವರಸ್ವಾಮಿಯ ಬಳಿಗೆ ಹಿಂದಿರುಗೋಣ. ಅವರು ನಮ್ಮನ್ನು ಛಿದ್ರಗೊಳಿಸಿದವರು. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ; ಅವರೇ ನಮ್ಮ ಗಾಯಗಳನ್ನು ಕಟ್ಟಿ ಗುಣಪಡಿಸುವರು. ಒಂದೆರಡು ದಿನಗಳ ನಂತರ ಅವರು ನಮ್ಮನ್ನು ಬದುಕಿಸುವರು.


ಎಂದೇ ನೀನು ನನ್ನ ಜನರಿಗೆ ಹೀಗೆಂದು ಹೇಳು: “ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ಮರಳಿ ನನಗೆ ಅಭಿಮುಖರಾಗಿರಿ. ಆಗ ನಾನು ನಿಮಗೆ ಮರಳಿ ಅಭಿಮುಖನಾಗುವೆನು.


ನಿಮ್ಮ ಪಿತೃಗಳಂತೆ ಆಗಬೇಡಿ. ಅವರಿಗೆ ಪೂರ್ವಕಾಲದ ಪ್ರವಾದಿಗಳು, ‘ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ನಿಮ್ಮ ದುರ್ಮಾರ್ಗಗಳನ್ನೂ ದುಷ್ಕೃತ್ಯಗಳನ್ನೂ ಬಿಟ್ಟು ಹಿಂದಿರುಗಿ’ ಎಂದು ಸಾರಿದರು. ಆದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು