Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:9 - ಕನ್ನಡ ಸತ್ಯವೇದವು C.L. Bible (BSI)

9 ನೀವು ಸರ್ವೇಶ್ವರನಿಗೆ ಅಭಿಮುಖರಾದರೆ, ನಿಮ್ಮ ಸಹೋದರರೂ ಮಕ್ಕಳೂ ತಮ್ಮನ್ನು ಸೆರೆಯೊಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ, ಮರಳಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಸರ್ವೇಶ್ವರ ದಯಾವಂತರು, ಕನಿಕರವುಳ್ಳವರು. ತಮಗೆ ಅಭಿಮುಖರಾಗುವ ನಿಮ್ಮನ್ನು ಕಟಾಕ್ಷಿಸದೆ ಇರುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀವು ಯೆಹೋವನ ಕಡೆಗೆ ತಿರುಗಿಕೊಳ್ಳವುದಾದರೆ ನಿಮ್ಮ ಸಹೋದರರೂ, ಮಕ್ಕಳೂ ತಮ್ಮನ್ನು ಸೆರೆ ಒಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ, ತಿರುಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ, ಕನಿಕರವೂ ಉಳ್ಳವನಾಗಿದ್ದಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವು ಯೆಹೋವನ ಕಡೆಗೆ ತಿರುಗಿಕೊಳ್ಳುವದಾದರೆ ನಿಮ್ಮ ಸಹೋದರರೂ ಮಕ್ಕಳೂ ತಮ್ಮನ್ನು ಸೆರೆಯೊಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ ತಿರಿಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ ಕನಿಕರವೂ ಉಳ್ಳವನಾಗಿರುತ್ತಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವದಿಲ್ಲ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀವು ಯೆಹೋವನಿಗೆ ವಿಧೇಯರಾದರೆ ನಿಮ್ಮ ಮಕ್ಕಳೂ ಬಂಧುಗಳೂ ತಮ್ಮನ್ನು ಸೆರೆಹಿಡಿದವರಿಂದ ಕರುಣೆಯನ್ನು ಹೊಂದಿ ಮತ್ತೆ ಈ ದೇಶಕ್ಕೆ ಬರುವರು. ದೇವರಾದ ಯೆಹೋವನು ದಯೆಯೂ ಕರುಣೆಯೂ ಉಳ್ಳವನಾಗಿದ್ದಾನೆ. ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮನ್ನು ತಳ್ಳಿಬಿಡುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀವು ಯೆಹೋವ ದೇವರ ಕಡೆಗೆ ತಿರುಗಿ ಈ ದೇಶಕ್ಕೆ ಬರುವಂತೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಅನುಕಂಪವನ್ನು ಹೊಂದುವರು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ಕೃಪೆಯೂ ಅನುಕಂಪವೂ ಉಳ್ಳವರಾಗಿದ್ದಾರೆ. ನೀವು ಅವರ ಕಡೆಗೆ ತಿರುಗಿದರೆ, ಅವರು ನಿಮ್ಮ ಕಡೆಯಿಂದ ತಮ್ಮ ಮುಖವನ್ನು ತಿರುಗಿಸುವುದಿಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:9
23 ತಿಳಿವುಗಳ ಹೋಲಿಕೆ  

ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.


ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ.


ಪ್ರಭು, ನೀನು ದಯಾವಂತನು, ಕ್ಷಮಿಸುವವನು I ಮೊರೆಯಿಡುವವರಿಗೆ ನೀನು ಕೃಪಾಪೂರ್ಣನು II


ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಈಜಿಪ್ಟ್ ದೇಶದಿಂದ ನೀವು ಬಿಡಿಸಿದ ಈ ಜನರು ನಿಮ್ಮ ಸ್ವಕೀಯಜನರಾಗಿದ್ದಾರೆಂಬುದನ್ನು ನೆನಸಿ,


ಮರೆತುಬಿಟ್ಟರು ನೀವೆಸಗಿದ ಮಹಾತ್ಕಾರ್ಯಗಳನು ಹಟಹಿಡಿದರು ತಮಗೊಬ್ಬ ನಾಯಕನ ನೇಮಿಸಿಕೊಳ್ಳಲು; ಈಜಿಪ್ಟಿಗೆ ತೆರಳಲಿದ್ದರು ಮರಳಿ ಗುಲಾಮರಾಗಲು. ನೀವಾದರೋ ಪಾಪಿಗಳನು ಕ್ಷಮಿಸುವವರು ದಯಾಪೂರಿತರು, ದೀರ್ಘಶಾಂತರು, ಕೃಪಾಳು ದೇವರು, ಅವರನು ಕೈಬಿಡದೆ ಕಾಪಾಡಿ ನಡೆಸಿದವರು.


ಆಗ ಅವನು ಹೀಗೆಂದು ಮೊರೆಯಿಟ್ಟನು: “ಸ್ವಾಮೀ, ಈ ರೀತಿ ಸಂಭವಿಸುವುದೆಂದು ನಾನು ಸ್ವದೇಶವನ್ನು ಬಿಡುವ ಮುನ್ನವೇ ನಿಮಗೆ ಹೇಳಿದ್ದೆನಲ್ಲವೆ? ಈ ಕಾರಣದಿಂದಲೇ ಅಲ್ಲವೆ ನಾನು ತಾರ್ಷಿಷಿಗೆ ಓಡಿಹೋಗಲು ಪ್ರತ್ನಿಸಿದ್ದು? ನೀವು ಪ್ರೀತಿಸ್ವರೂಪಿ, ಕರುಣಾಮಯಿ, ಸಹನಾಶೀಲರಾದ ದೇವರು, ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ಹಿಂತೆಗೆದುಕೊಳ್ಳುವ ದೇವರು - ಎಂದು ಆಗಲೇ ನನಗೆ ತಿಳಿದಿತ್ತು.


ಶತ್ರುಗಳು ಮೇಲೆ ಬಿದ್ದು ದಾಳಿಮಾಡಲು ಬಂದಾಗ ಮೂಡಣ ಬಿರುಗಾಳಿ ಮುಂದೆ ಧೂಳಿ ಮಣ್ಣಿನಂತೆ ನನ್ನ ಜನರನ್ನು ದಿಕ್ಕುಪಾಲಾಗಿ ಚದರಿಸುವೆನು. ಅವರ ಆ ವಿಪತ್ತಿನ ದಿನದಂದು ಅವರತ್ತ ಮುಖತಿರುಗಿಸದೆ ಬೆನ್ನು ಮಾಡುವೆನು.”


ಪಾಪಗಳನ್ನು ಮುಚ್ಚಿಟ್ಟುಕೊಳ್ಳುವವನಿಗೆ ಮುಕ್ತಿ ದೊರಕದು; ಅವುಗಳನ್ನು ಒಪ್ಪಿಕೊಂಡು ಬಿಟ್ಟರೆ ಕರುಣೆ ದೊರಕುವುದು.


ಆತನ ಅದ್ಭುತಕಾರ್ಯ ಸ್ಮರಣೀಯ I ಕರುಣಾವಂತ ಪ್ರಭು, ಪ್ರೀತಿಮಯ II


ಪ್ರಭು, ನೀ ದಯಾಳು, ದೇವಾ ನೀ ಕರುಣಾಮೂರ್ತಿ I ಸಹನಶೀಲನು, ಸತ್ಯಸ್ವರೂಪಿ, ಪ್ರೇಮಮೂರ್ತಿ II


ಆದರೆ, ನೀವು ದಯಾಪೂರಿತರು, ಕರುಣಾಮಯ ದೇವರು! ನಿಮ್ಮ ಮಹಾಕೃಪಾನುಸಾರ, ಕೈಬಿಡಲಿಲ್ಲ, ನಾಶಮಾಡಲಿಲ್ಲ ಅವರನು.


ಅವನು ಆಸನನ್ನು ಭೇಟಿಯಾಗಲು ಬಂದು, ಅವನಿಗೆ, “ಆಸ ರಾಜನೇ, ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರೇ, ಕಿವಿಗೊಡಿ; ನೀವು ಸರ್ವೇಶ್ವರನನ್ನು ಹೊಂದಿಕೊಂಡಿರುವ ತನಕ ಅವರೂ ನಿಮ್ಮೊಂದಿಗಿರುವರು; ನೀವು ಅವರನ್ನು ಅರಸಿದರೆ ನಿಮಗೆ ಸಿಕ್ಕುವರು. ಅವರನ್ನು ಬಿಟ್ಟರೆ ಅವರೂ ನಿಮ್ಮನ್ನು ಬಿಟ್ಟುಬಿಡುವರು.


ನನ್ನವರೆಂದು ಹೆಸರುಗೊಂಡ ನನ್ನ ಪ್ರಜೆಗಳು ತಮ್ಮನ್ನೇ ತಗ್ಗಿಸಿಕೊಂಡು, ನನ್ನ‍ನ್ನು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ನಾಡಿಗೆ ಆರೋಗ್ಯಭಾಗ್ಯವನ್ನು ದಯಪಾಲಿಸುವೆನು.


ನಿಮ್ಮ ದೇವರಾದ ಸರ್ವೇಶ್ವರ ದಯಾಮಯ ದೇವರು. ಅವರು ನಿಮ್ಮನ್ನು ಅಲಕ್ಷ್ಯ ಮಾಡುವುದಿಲ್ಲ. ವಿನಾಶಕ್ಕೆ ಬಿಟ್ಟುಬಿಡುವುದಿಲ್ಲ. ನಿಮ್ಮ ಪೂರ್ವಜರ ಸಂಗಡ ಅವರು ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಡುವುದಿಲ್ಲ.


“ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದ ಹಾಗು ಶಾಪ ನಿಮ್ಮ ಅನುಭವಕ್ಕೆ ಬರುವುವು; ಆಗ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಚದುರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು