2 ಪೂರ್ವಕಾಲ ವೃತ್ತಾಂತ 31:10 - ಕನ್ನಡ ಸತ್ಯವೇದವು C.L. Bible (BSI)10 ಚಾದೋಕ್ ಸಂತಾನದ ಮಹಾಯಾಜಕ ಅಜರ್ಯನು, “ಜನರು ದೇವರಾದ ಸರ್ವೇಶ್ವರನಿಗೆ ಪ್ರತ್ಯೇಕಿಸತಕ್ಕದ್ದನ್ನು ಅವರ ಆಲಯಕ್ಕೆ ತಂದಂದಿನಿಂದ ಸರ್ವೇಶ್ವರ ತಮ್ಮ ಪ್ರಜೆಗೆ ಸಮೃದ್ಧಿಯನ್ನು ಅನುಗ್ರಹಿಸಿದ್ದಾರೆ. ನಾವು ಉಂಡು ತೃಪ್ತರಾಗಿ, ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಚಾದೋಕ್ ಸಂತಾನದ ಮಹಾಯಾಜಕನಾದ ಅಜರ್ಯನು ಅವನಿಗೆ, “ಜನರು ದೇವರಾದ ಯೆಹೋವನಿಗೋಸ್ಕರ ನೈವೇದ್ಯಕ್ಕಾಗಿ ಪ್ರತ್ಯೇಕಿಸತಕ್ಕದ್ದನ್ನು ಆತನ ಆಲಯಕ್ಕೆ ತಂದಂದಿನಿಂದ ಯೆಹೋವನು ತನ್ನ ಪ್ರಜೆಗಳಿಗೆ ಸಮೃದ್ಧಿಯಾಗಿ ಅನುಗ್ರಹಿಸಿದ್ದಾನೆ. ನಾವು ಉಂಡು ತೃಪ್ತರಾಗಿ ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತಾರೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಚಾದೋಕ್ ಸಂತಾನದ ಮಹಾಯಾಜಕನಾದ ಅಜರ್ಯನು ಅವನಿಗೆ - ಜನರು ದೇವರಾದ ಯೆಹೋವನಿಗೋಸ್ಕರ ಪ್ರತ್ಯೇಕಿಸತಕ್ಕದ್ದನ್ನು ಆತನ ಆಲಯಕ್ಕೆ ತಂದಂದಿನಿಂದ ಯೆಹೋವನು ತನ್ನ ಪ್ರಜೆಗೆ ಸಮೃದ್ಧಿಯನ್ನನುಗ್ರಹಿಸಿದ್ದಾನೆ. ನಾವು ಉಂಡು ತೃಪ್ತರಾಗಿ ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಚಾದೋಕನ ಕುಲದ ಮಹಾಯಾಜಕನಾದ ಅಜರ್ಯನು ಹಿಜ್ಕೀಯನಿಗೆ, “ದೇವಾಲಯಕ್ಕೆ ಜನರು ಕಾಣಿಕೆಗಳನ್ನು ತರಲು ಪ್ರಾರಂಭ ಮಾಡಿದಂದಿನಿಂದ ನಮಗೆ ಊಟಕ್ಕೆ ಯಾವ ಕೊರತೆಯೂ ಇಲ್ಲವಾಗಿದೆ. ನಾವು ತೃಪ್ತಿಯಾಗುವಷ್ಟು ಊಟಮಾಡಿದರೂ ಇನ್ನೂ ಉಳಿದಿರುತ್ತದೆ. ದೇವರು ನಿಜವಾಗಲೂ ತನ್ನ ಜನರನ್ನು ಆಶೀರ್ವದಿಸಿರುತ್ತಾನೆ. ಆದ್ದರಿಂದಲೇ ನಮಗೆ ಹೇರಳವಾಗಿ ಉಳಿದಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಚಾದೋಕ್ ಸಂತಾನದ ಮುಖ್ಯಯಾಜಕ ಅಜರ್ಯನು, “ಜನರು ದೇವರಾದ ಯೆಹೋವ ದೇವರಿಗೆ ಕಾಣಿಕೆಯಾಗಿ ಪ್ರತ್ಯೇಕಿಸತಕ್ಕದ್ದನ್ನು ಅವರ ಆಲಯಕ್ಕೆ ತಂದಂದಿನಿಂದ ಯೆಹೋವ ದೇವರು ತಮ್ಮ ಪ್ರಜೆಗೆ ಸಮೃದ್ಧಿಯನ್ನು ಅನುಗ್ರಹಿಸಿದ್ದಾರೆ. ನಾವು ಉಂಡು ತೃಪ್ತರಾಗಿ, ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ,” ಎಂದನು. ಅಧ್ಯಾಯವನ್ನು ನೋಡಿ |