2 ಪೂರ್ವಕಾಲ ವೃತ್ತಾಂತ 31:15 - ಕನ್ನಡ ಸತ್ಯವೇದವು C.L. Bible (BSI)15 ಇವನ ಕೈಕೆಳಗೆ ಏದೆನ್, ಮಿನ್ಯಾಮಿನ್, ಯೇಷೂವ, ಶೆಮಾಯ, ಅಮರ್ಯ, ಶೆಕನ್ಯ ಎಂಬವರಿದ್ದರು. ಇವರು ಯಾಜಕರ ಪಟ್ಟಣಗಳಲ್ಲಿದ್ದು, ತಮ್ಮ ಬಂಧುಗಳಿಗೆ ದೊಡ್ಡವರು ಚಿಕ್ಕವರು ಎಂಬ ವ್ಯತ್ಯಾಸಮಾಡದೆ, ಅವರವರ ವರ್ಗಗಳ ಪ್ರಕಾರ ಪಾಲುಕೊಡುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇವನ ಕೈಕೆಳಗೆ ಏದೆನ್, ಮಿನ್ಯಾಮಿನ್, ಯೇಷೂವ, ಶೆಮಾಯ, ಅಮರ್ಯ, ಶೆಕನ್ಯ ಎಂಬುವವರಿದ್ದರು. ಇವರು ಯಾಜಕರ ಪಟ್ಟಣಗಳಲ್ಲಿದ್ದು, ನಂಬಿಕೆಯಿಂದ ತಮ್ಮ ಬಂಧುಗಳಿಗೆ ದೊಡ್ಡವರು ಚಿಕ್ಕವರು ಎಂಬ ಭೇದಮಾಡದೆ ಅವರವರ ವರ್ಗಗಳ ಪ್ರಕಾರ ಪಾಲುಕೊಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇವನ ಕೈಕೆಳಗೆ ಏದೆನ್, ವಿುನ್ಯಾವಿುನ್, ಯೇಷೂವ, ಶೆಮಾಯ, ಅಮರ್ಯ, ಶೆಕನ್ಯ ಎಂಬವರಿದ್ದರು. ಇವರು ಯಾಜಕರ ಪಟ್ಟಣಗಳಲ್ಲಿದ್ದು ತಮ್ಮ ಬಂಧುಗಳಿಗೆ ದೊಡ್ಡವರು ಚಿಕ್ಕವರು ಎಂಬ ವ್ಯತ್ಯಾಸ ಮಾಡದೆ ವರ್ಗಗಳ ಪ್ರಕಾರ ಪಾಲುಕೊಡುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಏದೆನ್, ಮಿನ್ಯಾಮಿನ್, ಯೇಷೂವ, ಶೆಮಾಯ, ಅಮರ್ಯ ಮತ್ತು ಶೆಕನ್ಯ ಇವರು ಕೋರೆಯ ಸಹಾಯಕರು. ಇವರು ಯಾಜಕರು ವಾಸಿಸುವ ಪಟ್ಟಣಗಳಲ್ಲಿದ್ದು ನಂಬಿಗಸ್ತಿಕೆಯಿಂದ ಸೇವೆ ಮಾಡಿದರು. ಕೂಡಿಸಿದ ಕಾಣಿಕೆಗಳನ್ನು ನಂಬಿಗಸ್ತಿಕೆಯಿಂದ ಯಾಜಕರ ಕುಟುಂಬದವರಿಗೆ ಪಕ್ಷಪಾತವಿಲ್ಲದೆ ಹಂಚಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇವನ ತರುವಾಯ ಯಾಜಕರ ಪಟ್ಟಣಗಳಲ್ಲಿ ತಮ್ಮ ಸಹೋದರರಿಗೆ ನಂಬಿಗಸ್ತಿಕೆಯಿಂದ ಸರತಿ ಸರತಿಯಾಗಿ ಹಿರಿಯರು ಕಿರಿಯರು ಎಂಬ ವ್ಯತ್ಯಾಸಮಾಡದೆ ಪಾಲು ಹಂಚುವುದಕ್ಕೆ ಏದೆನನೂ, ಮಿನ್ಯಾಮೀನನೂ, ಯೇಷೂವನ ಶೆಮಾಯನೂ, ಅಮರ್ಯನೂ, ಶೆಕನ್ಯನೂ ಇದ್ದರು. ಅಧ್ಯಾಯವನ್ನು ನೋಡಿ |
ಇವರಲ್ಲಿ ಹಿರಿಕಿರಿಯರೂ ಗುರುಶಿಷ್ಯರೂ ಕೂಡಿಕೊಂಡು ಚೀಟಿನಿಂದ ತಮ್ಮ ಸೇವಾಕ್ರಮವನ್ನು ಗೊತ್ತುಮಾಡಿಕೊಳ್ಳುತ್ತಿದ್ದರು. ಈ ಚೀಟಿನ ಪ್ರಕಾರ ಇನ್ನೂರ ಎಂಬತ್ತೆಂಟು ಮಂದಿ ಸದಸ್ಯರು ಇಪ್ಪತ್ತನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದ್ದರು. ಪ್ರತಿಯೊಂದು ಗುಂಪಿಗೆ ಒಬ್ಬ ನಾಯಕನು, ಅವನ ಸಹೋದರರು ಹಾಗೂ ಮಕ್ಕಳು ಕೂಡಿ ಹನ್ನೆರಡು ಮಂದಿ ಸದಸ್ಯರು ಇದ್ದರು. ಕ್ರಮಾನುಸಾರ ಇಪ್ಪತ್ತನಾಲ್ಕು ನಾಯಕರ ಹೆಸರುಗಳು ಇವು: