Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 31:18 - ಕನ್ನಡ ಸತ್ಯವೇದವು C.L. Bible (BSI)

18 ಅವರವರ ಹೆಂಡತಿಯರು, ಗಂಡು-ಹೆಣ್ಣು ಮಕ್ಕಳು, ಅಂತು ತಮ್ಮ ಉದ್ಯೋಗದ ನಿಮಿತ್ತ ತಮ್ಮನ್ನೇ ದೇವರಿಗೆ ಪ್ರತಿಷ್ಠಿಸಿಕೊಂಡ ಸಮೂಹದವರೂ ಅವರಿಗೆ ಸೇರಿದವರೆಲ್ಲರೂ ಲಿಖಿತರಾಗಿದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರವರ ಹೆಂಡತಿಯರು, ಗಂಡುಹೆಣ್ಣು ಮಕ್ಕಳು, ಅಂತು ತಮ್ಮ ಉದ್ಯೋಗದ ನಿಮಿತ್ತ ತಮ್ಮನ್ನು ದೇವರಿಗೆ ನಂಬಿಕೆಯಿಂದ ಪ್ರತಿಷ್ಠಿಸಿಕೊಂಡ ಸಮೂಹದವರೂ ಅವರಿಗೆ ಸೇರಿದವರೆಲ್ಲರೂ ಲಿಖಿತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಲೇವಿಯರು, ಅವರವರ ಹೆಂಡತಿಯರು, ಗಂಡು ಹೆಣ್ಣು ಮಕ್ಕಳು ಅಂತು ತಮ್ಮ ಉದ್ಯೋಗದ ನಿವಿುತ್ತ ತಮ್ಮನ್ನು ದೇವರಿಗೆ ಪ್ರತಿಷ್ಠಿಸಿಕೊಂಡ ಸಮೂಹದವರೂ ಅವರಿಗೆ ಸೇರಿದವರೆಲ್ಲರೂ ಲಿಖಿತರಾಗಿದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಲೇವಿಯರ ಹೆಂಡತಿಯರಿಗೂ ಮಕ್ಕಳಿಗೂ ಎಲ್ಲರಿಗೂ ಅದರಲ್ಲಿ ಪಾಲು ದೊರೆಯಿತು. ಯಾರ್ಯಾರ ಹೆಸರುಗಳು ಲೇವಿಯರ ಕುಟುಂಬದ ಪಟ್ಟಿಯಲ್ಲಿ ಬರೆಯಲ್ಪಟ್ಟಿತ್ತೊ ಅವರೆಲ್ಲರಿಗೆ ಪಾಲು ದೊರೆಯಿತು. ಯಾಕೆಂದರೆ ಲೇವಿಯರು ತಮ್ಮನ್ನು ದೇವಾಲಯದ ಸೇವೆಗೆ ಯಾವಾಗಲೂ ಸಿದ್ಧಪಡಿಸಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರ ಹೆಂಡತಿಯರಿಗೂ ಚಿಕ್ಕವರಿಗೂ ಪುತ್ರಪುತ್ರಿಯರಿಗೂ ಪಾಲು ಕೊಡುವುದಕ್ಕೂ ಇದ್ದರು. ಏಕೆಂದರೆ ಅವರು ತಮ್ಮ ಉದ್ಯೋಗದಲ್ಲಿ ತಮ್ಮನ್ನೇ ತಾವು ಪರಿಶುದ್ಧಗೊಳಿಸುವಲ್ಲಿ ನಂಬಿಗಸ್ತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 31:18
6 ತಿಳಿವುಗಳ ಹೋಲಿಕೆ  

ಈ ವರದಿಂದಲೇ ಯೆಹೂದ್ಯರಲ್ಲದ ಜನರಿಗೆ ನಾನು ಕ್ರಿಸ್ತಯೇಸುವಿನ ದಾಸನಾದೆ. ಯೆಹೂದ್ಯರಲ್ಲದವರು ಪವಿತ್ರಾತ್ಮರ ಮೂಲಕ ಪರಿಶುದ್ಧರಾಗಿ, ದೇವರಿಗೆ ಸಮರ್ಪಕ ಕಾಣಿಕೆಯಾಗುವಂತೆ ದೇವರ ಶುಭಸಂದೇಶವನ್ನು ಸಾರುವುದೇ ನನ್ನ ಪೂಜ್ಯಸೇವೆ, ಅದುವೇ ನನ್ನ ಯಾಜಕಸೇವೆ.


ಸೇನಾಧೀಶ್ವರ ಸ್ವಾಮಿಯಾದರೋ ನ್ಯಾಯತೀರಿಸುವುದರಲ್ಲಿ ಸರ್ವಶ್ರೇಷ್ಠರು. ಧರ್ಮಪಾಲನೆಯಲ್ಲಿ ಪರಮಪರಿಶುದ್ಧರು ಎಂದು ಕಾಣಿಸಿಕೊಳ್ಳುತ್ತಾರೆ.


ಇವನ ಕೈಕೆಳಗೆ ಏದೆನ್, ಮಿನ್ಯಾಮಿನ್, ಯೇಷೂವ, ಶೆಮಾಯ, ಅಮರ್ಯ, ಶೆಕನ್ಯ ಎಂಬವರಿದ್ದರು. ಇವರು ಯಾಜಕರ ಪಟ್ಟಣಗಳಲ್ಲಿದ್ದು, ತಮ್ಮ ಬಂಧುಗಳಿಗೆ ದೊಡ್ಡವರು ಚಿಕ್ಕವರು ಎಂಬ ವ್ಯತ್ಯಾಸಮಾಡದೆ, ಅವರವರ ವರ್ಗಗಳ ಪ್ರಕಾರ ಪಾಲುಕೊಡುತ್ತಿದ್ದರು.


ಒಟ್ಟು ಇನ್ನೂರ ಹನ್ನೆರಡು ಮಂದಿ, ದ್ವಾರಪಾಲಕರಾಗಿ ನೇಮಕಗೊಂಡಿದ್ದರು. ಅವರು ನೆಲೆಸಿದ್ದ ಗ್ರಾಮಗಳಲ್ಲಿ ಅವರ ಹೆಸರುಗಳು ದಾಖಲಾಗಿದ್ದವು. ಈ ಜವಾಬ್ದಾರಿಯ ಸ್ಥಾನಗಳಿಗೆ ಅವರ ಪೂರ್ವಜರನ್ನು ನೇಮಿಸಿದವರು ಅರಸ ದಾವೀದನು ಮತ್ತು ಪ್ರವಾದಿ ಸಮುವೇಲನು.


ಆ ಪಟ್ಟಿಯಲ್ಲಿ ಗೋತ್ರಗಳಿಗನುಸಾರ ಹಾಗು ಆಯಾ ಉದ್ಯೋಗ ವರ್ಗಗಳಿಗನುಸಾರ ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಯಾಜಕರು, ಲೇವಿಯರು,


ಇದಲ್ಲದೆ ಆಯಾ ಪಟ್ಟಣಗಳಿಗೆ ಸೇರಿದ ಗೋಮಾಳಗಳಲ್ಲಿದ್ದ ಆರೋನನ ಸಂತಾನದ ಯಾಜಕರಿಗೆ ಪಾಲುಕೊಡುತ್ತಿದ್ದರು. ಯಾಜಕ ಸಂತಾನದ ಎಲ್ಲ ಗಂಡಸರಿಗೂ, ಪಟ್ಟಿಯಲ್ಲಿ ಲಿಖಿತರಾದ ಎಲ್ಲ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಹಂಚಿಕೊಡುವುದಕ್ಕೆ ಹೆಸರಿಸಲಾದ ಪುರುಷರಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು