Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 31:2 - ಕನ್ನಡ ಸತ್ಯವೇದವು C.L. Bible (BSI)

2 ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ದಹನಬಲಿ, ಶಾಂತಿಸಮಾಧಾನ ಬಲಿ ಇವುಗಳನ್ನು ಸಮರ್ಪಿಸುವುದಕ್ಕೂ ಸರ್ವೇಶ್ವರನ ಪಾಳೆಯದ ದ್ವಾರಗಳಲ್ಲಿ ಸೇರಿ ಸರ್ವೇಶ್ವರನನ್ನು ಆರಾಧಿಸುತ್ತಾ ಕೀರ್ತಿಸುತ್ತಾ ಕೃತಜ್ಞತಾಸ್ತುತಿ ಮಾಡುತ್ತಾ ಇರುವುದಕ್ಕೂ ಹಿಜ್ಕೀಯನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ಸರ್ವಾಂಗಹೋಮ, ಸಮಾಧಾನ ಯಜ್ಞ, ಇವುಗಳನ್ನು ಸಮರ್ಪಿಸುವುದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ, ಕೀರ್ತಿಸುತ್ತಾ, ಕೃತಜ್ಞತಾಸ್ತುತಿಮಾಡುತ್ತಾ ಇರುವುದಕ್ಕೂ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ ಸರ್ವಾಂಗಹೋಮ ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸುವದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ ಕೀರ್ತಿಸುತ್ತಾ ಕೃತಜ್ಞತಾಸ್ತುತಿ ಮಾಡುತ್ತಾ ಇರುವದಕ್ಕೂ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯಾಜಕರೂ ಲೇವಿಯರೂ ಬೇರೆಬೇರೆ ಗುಂಪುಗಳಾಗಿ ವಿಭಾಗಿಸಲ್ಪಟ್ಟಿದ್ದರು. ಪ್ರತಿಯೊಂದು ಗುಂಪಿನವರಿಗೂ ಪ್ರತ್ಯೇಕವಾದ ಸೇವಾಕಾರ್ಯವು ಕೊಡಲ್ಪಟ್ಟಿತ್ತು. ಅರಸನಾದ ಹಿಜ್ಕೀಯನು ಅವರ ಕೆಲಸಗಳನ್ನು ಮತ್ತೆ ಪ್ರಾರಂಭಿಸಲು ಈ ಗುಂಪಿನವರಿಗೆ ಹೇಳಿದನು. ಹೀಗೆ ಯಾಜಕರೂ ಲೇವಿಯರೂ ಮತ್ತೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುತ್ತಿದ್ದರು. ಅಲ್ಲದೆ ದೇವಾಲಯದೊಳಗೆ ದೇವರಿಗೆ ಸ್ತುತಿಗೀತೆ ಹಾಡುವ ಕೆಲಸವೂ ಅವರದೇ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಹಿಜ್ಕೀಯನು ಅವನವನ ಸೇವೆಯ ಪ್ರಕಾರ ಯಾಜಕರ, ಲೇವಿಯರ ಸರತಿಗಳನ್ನು ನೇಮಿಸಿದನು. ದಹನಬಲಿಗಳನ್ನೂ ಮತ್ತು ಸಮಾಧಾನದ ಬಲಿಗಳನ್ನೂ ಅರ್ಪಿಸುವುದಕ್ಕೂ, ಸೇವಿಸುವುದಕ್ಕೂ ಯೆಹೋವ ದೇವರ ಪಾಳೆಯದ ಬಾಗಿಲುಗಳಲ್ಲಿ ಸ್ತೋತ್ರ ಮಾಡುವುದಕ್ಕೂ, ಕೊಂಡಾಡುವುದಕ್ಕೂ ಯಾಜಕರನ್ನೂ, ಲೇವಿಯರನ್ನೂ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 31:2
23 ತಿಳಿವುಗಳ ಹೋಲಿಕೆ  

ಆರೋನನ ಸಂತಾನದವರನ್ನು ವರ್ಗಗಳಾಗಿ ವಿಂಗಡಿಸಲಾಗಿತ್ತು. ಆರೋನನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬ ನಾಲ್ವರು ಮಕ್ಕಳಿದ್ದರು.


ಜುದೇಯ ಪ್ರಾಂತ್ಯದ ಅರಸನಾಗಿದ್ದ ಹೆರೋದನ ಕಾಲದಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಇವನ ಪತ್ನಿಯ ಹೆಸರು ಎಲಿಜಬೇತ್‍. ಇವಳೂ ಆರೋನನ ಯಾಜಕವಂಶಕ್ಕೆ ಸೇರಿದವಳು.


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ, ಇವು ಮತ್ತೆ ಕೇಳಿಬರುವುವು. ‘ಸೇನಾಧೀಶ್ವರ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರ ಮಾಡಿ; ಆತ ಒಳ್ಳೆಯವನು, ಆತನ ಪ್ರೀತಿ ಶಾಶ್ವತ’ ಎಂದು ಹಾಡುತ್ತಾ ಕೃತಜ್ಞತಾಬಲಿಯನ್ನು ದೇವಾಲಯಕ್ಕೆ ತರುವರು. ಅವರ ಗಾನ ನಿಮ್ಮ ಕಿವಿಗೆ ಬೀಳುವುದು. ನಾಡನ್ನು ಬಿಡುಗಡೆಮಾಡಿ ಹಿಂದಿನ ಸುಸ್ಥಿತಿಗೆ ಏರಿಸುವೆನು.


ಭಜಿಸಿರಿ ಪ್ರಭುವನು ಆತನ ಸಕಲ ಸೇವಕರೇ I ಆತನ ಮಂದಿರದಲಿ ರಾತ್ರಿ ಕಾವಲಿರುವವರೇ II


ಮೀಕನ ಮಗ ಜಬ್ದೀಯ ಮೊಮ್ಮಗ, ಆಸಾಫನ ಮರಿಮಗ ಪ್ರಾರ್ಥನಾ ಸಮಯದಲ್ಲಿ ಕೃತಜ್ಞತಾ ಸ್ತುತಿಮಾಡಿರಿ ಎಂದು ಹೇಳಿ ಭಜಕರನ್ನು ನಡೆಸುತ್ತಿದ್ದ ಮತ್ತನ್ಯ, ತನ್ನ ಬಂಧುಗಳಲ್ಲಿ‍ ದ್ವಿತೀಯ ಸ್ಥಾನದವನಾದ ಬಕ್ಬುಕ್ಯ, ಶಮ್ಮೂವನ ಮಗನು; ಗಾಲಾಲನ ಮೊಮ್ಮಗನು, ಯೆದೂತೂನನ ಮರಿಮಗನು ಆದ ಅಬ್ದ ಎಂಬವರು.


ಆಮೇಲೆ ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳನ್ನು ಮೋಶೆಯ ಧರ್ಮಶಾಸ್ತ್ರನಿಯಮದ ಪ್ರಕಾರ, ಜೆರುಸಲೇಮಿನ ದೇವರ ಸೇವೆಗೆ ನೇಮಿಸಿದರು.


ಲೇವಿಯರೂ ಎಲ್ಲ ಯೆಹೂದ್ಯರೂ ಯಾಜಕ ಯೆಹೋಯಾದನ ಆಜ್ಞೆಯಂತೆ ನಡೆದುಕೊಂಡರು. ಅವನು ಸಬ್ಬತ್‍ದಿನದಲ್ಲಿ ಸೇವಾವಿಮುಕ್ತರಾದ ವರ್ಗದವರನ್ನು ಕಳುಹಿಸಿಬಿಡಲಿಲ್ಲ; ಆದುದರಿಂದ ಪ್ರತಿಯೊಬ್ಬನು ಸಬ್ಬತ್‍ದಿನ ಮನೆಗೆ ಹೋಗಬೇಕಾಗಿದ್ದ ಮತ್ತು ಬರಬೇಕಾಗಿದ್ದ ತನ್ನ ಕೈ ಕೆಳಗಿನವರನ್ನು ಕೂಡಿಸಿಕೊಂಡನು.


ಇದಲ್ಲದೆ, ತನ್ನ ತಂದೆ ದಾವೀದನ ವಿಧಿಗೆ ಅನುಸಾರವಾಗಿ ಯಾಜಕ ವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡಬೇಕಾಗಿತ್ತು. ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯಬೇಕಾಗಿತ್ತು. ಇದು ದೈವಪುರುಷ ದಾವೀದರಾಜನ ಅಪ್ಪಣೆ ಆಗಿತ್ತು.


ಕೂಡಿಬಂದಿದ್ದ ಯಾಜಕರು, ವರ್ಗವ್ಯತ್ಯಾಸವಿಲ್ಲದೆ ಎಲ್ಲರೂ ತಮ್ಮನ್ನು ಶುದ್ಧಪಡಿಸಿಕೊಂಡಿದ್ದರು.


ನಿಬಂಧನಾ ಮಂಜೂಷದ ಮುಂದೆ ಪ್ರತಿದಿನವೂ ಆರಾಧನೆ ನಡೆಸುವ ಜವಾಬ್ದಾರಿಯನ್ನು ಆಸಾಫ ಮತ್ತು ಅವನ ಜೊತೆ ಲೇವಿಯರಿಗೆ ಅರಸ ದಾವೀದ ಶಾಶ್ವತವಾಗಿ ವಹಿಸಿಕೊಟ್ಟನು. ಅಲ್ಲಿ ಅವರು ತಮ್ಮ ಕರ್ತವ್ಯವನ್ನು ದಿನನಿತ್ಯವೂ ನೆರವೇರಿಸಬೇಕಾಗಿತ್ತು.


ಒಮ್ಮೆ ತನ್ನ ವರ್ಗದ ಸರದಿ ಬಂದಾಗ ಜಕರೀಯನು ದೇವರ ಸನ್ನಿಧಿಯಲ್ಲಿ ಯಾಜಕ ವಿಧಿಯನ್ನು ನೆರವೇರಿಸುತ್ತಿದ್ದನು.


ಉಜ್ಜಿಯೇಲನ ಮಗ ಮೀಕನ ಸಂತಾನದವರಲ್ಲಿ ಶಾಮೀರನು


ಜಿಕ್ರೀಯ ಮಗನೂ ಆಗಿರುವ ಶೆಕೋಮೋತನೂ ಅವನ ಸಹೋದರರೂ ಪ್ರತಿಷ್ಠಿತ ವಸ್ತುಗಳ ಭಂಡಾರವನ್ನು ಕಾಯುವವರು; ಇವರು ಶೆಬೂವೇಲನ ಗೋತ್ರ ಬಂಧುಗಳು.


ಕೆಲಸ ಮುಗಿದಾಗ ಅವರು ಉಳಿದ ಹಣವನ್ನು ಅರಸನಿಗೂ ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಸರ್ವೇಶ್ವರನ ಆಲಯದಲ್ಲಿ ನಡೆವ ಆರಾಧನೆಗೆ ಹಾಗು ಬಲಿಯರ್ಪಣೆಗೆ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ, ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಸರ್ವೇಶ್ವರನ ಆಲಯದಲ್ಲಿ ಪ್ರತಿನಿತ್ಯವೂ ದಹನಬಲಿ ಸಮರ್ಪಣೆ ಆಗುತ್ತಿತ್ತು.


ಆ ಪಟ್ಟಿಯಲ್ಲಿ ಗೋತ್ರಗಳಿಗನುಸಾರ ಹಾಗು ಆಯಾ ಉದ್ಯೋಗ ವರ್ಗಗಳಿಗನುಸಾರ ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಯಾಜಕರು, ಲೇವಿಯರು,


ಯೋಷೀಯನು ಯಾಜಕರನ್ನು ಅವರವರ ಕೆಲಸಕ್ಕೆ ನೇಮಿಸಿ, ಸರ್ವೇಶ್ವರನ ಸೇವೆಮಾಡುವಂತೆ ಪ್ರೋತ್ಸಾಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು