Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 31:20 - ಕನ್ನಡ ಸತ್ಯವೇದವು C.L. Bible (BSI)

20 ಹಿಜ್ಕೀಯನು ಜುದೇಯದಲ್ಲೆಲ್ಲಾ ಇದೇ ವ್ಯವಸ್ಥೆಯನ್ನು ಮಾಡಿದನು. ಅವನು ತನ್ನ ದೇವರಾದ ಸರ್ವೇಶ್ವರನಿಗೆ ಒಳ್ಳೆಯವನು, ನೀತಿವಂತನು ಹಾಗು ನಂಬಿಗಸ್ತನು ಆಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಹಿಜ್ಕೀಯನು ಯೆಹೂದದಲ್ಲೆಲ್ಲಾ ಇದೇ ವ್ಯವಸ್ಥೆಯನ್ನು ಮಾಡಿದನು. ಅವನು ತನ್ನ ದೇವರಾದ ಯೆಹೋವನಿಗೆ ಒಳ್ಳೆಯವನೂ, ನೀತಿವಂತನೂ, ನಂಬಿಗಸ್ತನೂ ಆಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಹಿಜ್ಕೀಯನು ಯೆಹೂದದಲ್ಲೆಲ್ಲಾ ಇದೇ ವ್ಯವಸ್ಥೆಯನ್ನು ಮಾಡಿದನು. ಅವನು ತನ್ನ ದೇವರಾದ ಯೆಹೋವನಿಗೆ ಒಳ್ಳೆಯವನೂ ನೀತಿವಂತನೂ ನಂಬಿಗಸ್ತನೂ ಆಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಹೀಗೆ ಅರಸನಾದ ಹಿಜ್ಕೀಯನು ಯೆಹೂದ ದೇಶದಲ್ಲಿ ಈ ಒಳ್ಳೆಯ ಕಾರ್ಯವನ್ನು ಮಾಡಿದನು. ದೇವರಾದ ಯೆಹೋವನ ದೃಷ್ಟಿಯಲ್ಲಿ ಯೋಗ್ಯವಾದದ್ದನ್ನು ನಂಬಿಗಸ್ತಿಕೆಯಿಂದ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಯೆಹೋವ ದೇವರ ಸಮ್ಮುಖದಲ್ಲಿ ಉತ್ತಮವಾದದ್ದನ್ನೂ, ಸರಿಯಾದದ್ದನ್ನೂ, ಸತ್ಯವಾದದ್ದನ್ನೂ ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 31:20
11 ತಿಳಿವುಗಳ ಹೋಲಿಕೆ  

“ಸರ್ವೇಶ್ವರಾ, ನಾನು ಶ್ರದ್ಧೆಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆದುಕೊಂಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥಿಸಿದನು.


ಅವನು ಎಡಕ್ಕಾಗಲಿ ಬಲಕ್ಕಾಗಲಿ ವಾಲದೆ ತನ್ನ ಪೂರ್ವಜ ದಾವೀದನ ಮಾರ್ಗದಲ್ಲಿ ನೇರವಾಗಿ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು.


ಅಂತೆಯೇ, ದೇವರ ಹಾಗೂ ಮಾನವರ ಮುಂದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ಬಾಳಲು ಪ್ರಯತ್ನಿಸುತ್ತಿದ್ದೇನೆ.


ಪ್ರಿಯನೇ, ಸಹೋದರರಿಗೆ - ಮುಖ್ಯವಾಗಿ ಅಪರಿಚಿತರಿಗೆ ಸತ್ಕಾರ್ಯವನ್ನು ಮಾಡುವುದರಲ್ಲಿ ನೀನು ತುಂಬಾ ನಿಷ್ಠಾವಂತನು.


ವಿಶ್ವಾಸಿಗಳಾದ ನಿಮ್ಮ ನಡುವೆ ನಾವು ಎಷ್ಟು ಶುದ್ಧರಾಗಿ, ನೀತಿವಂತರಾಗಿ, ನಿರ್ದೋಷಿಗಳಾಗಿ ನಡೆದುಕೊಂಡೆವು ಎಂಬುದಕ್ಕೆ ನೀವೇ ಸಾಕ್ಷಿಗಳು, ಮಾತ್ರವಲ್ಲದೆ ದೇವರೂ ಸಾಕ್ಷಿಯೇ.


ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು.


ಜೆರುಸಲೇಮನ್ನೂ ಇವನ ಸಂತಾನವನ್ನೂ ಉಳಿಸಿದರು.


ಇವನು ಎಲ್ಲಾ ವಿಷಯಗಳಲ್ಲೂ ತನ್ನ ಪೂರ್ವಜ ದಾವೀದನಂತೆ ಸರ್ವೇಶ್ವರನ ಚಿತ್ತಾನುಸಾರ ನಡೆದನು.


ಅಬೀಯನು ಮೃತನಾಗಿ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಆಸನು ಅರಸನಾದನು. ಇವನ ಕಾಲದಲ್ಲಿ, ನಾಡಿನಲ್ಲಿ ಹತ್ತು ವರ್ಷ ಶಾಂತಿಸಮಾಧಾನವಿತ್ತು.


ಸ್ಥಾಪಿತವಾಗುವುದಾಗ ಅಚಲ ಒಲವಿನ ಸಿಂಹಾಸನವು, ಅದನಲಂಕರಿಸುವನು ಪ್ರಾಮಾಣಿಕ ದಾವೀದ ವಂಶಜನು. ದೊರಕಿಸುವನಾತ ನ್ಯಾಯನೀತಿಯನು, ಶೀಘ್ರದಲೆ ನೆರವೇರಿಸುವನು ಸರಿಕಂಡದುದನು.”


ಐದು ತಲೆಂತು ಪಡೆದ ಸೇವಕ ಒಡನೇ ಹೋಗಿ ಆ ಮೊತ್ತದಿಂದ ವ್ಯಾಪಾರಮಾಡಿ ಇನ್ನೂ ಐದನ್ನು ಸಂಪಾದಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು