Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 31:4 - ಕನ್ನಡ ಸತ್ಯವೇದವು C.L. Bible (BSI)

4 ಯಾಜಕರು ಮತ್ತು ಲೇವಿಯರು ಸರ್ವೇಶ್ವರನ ಧರ್ಮದಲ್ಲಿ ಆಸಕ್ತರಾಗಿರುವುದಕ್ಕಾಗಿ ಅವರಿಗೆ ಸಲ್ಲತಕ್ಕ ಜೀವನಾಂಶವನ್ನು, ಜೆರುಸಲೇಮಿನಲ್ಲಿ ವಾಸಿಸುವ ಜನರು ಕೊಡಬೇಕೆಂತಲೂ ಗೊತ್ತುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಾಜಕರು ಮತ್ತು ಲೇವಿಯರು ಯೆಹೋವನ ಧರ್ಮಶಾಸ್ತ್ರದಲ್ಲಿ ಆಸಕ್ತರಾಗಿರುವುದಕ್ಕಾಗಿ ಅವರಿಗೆ ಸಲ್ಲತಕ್ಕ ಜೀವನಾಂಶವನ್ನು ಯೆರೂಸಲೇಮಿನಲ್ಲಿ ವಾಸಿಸುವ ಜನರು ಕೊಡಬೇಕೆಂತಲೂ ಗೊತ್ತುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯಾಜಕರು ಮತ್ತು ಲೇವಿಯರು ಯೆಹೋವ ಧರ್ಮದಲ್ಲಿ ಆಸಕ್ತರಾಗಿರುವದಕ್ಕಾಗಿ ಅವರಿಗೆ ಸಲ್ಲತಕ್ಕ ಜೀವನಾಂಶವನ್ನು ಯೆರೂಸಲೇವಿುನಲ್ಲಿ ವಾಸಿಸುವ ಜನರು ಕೊಡಬೇಕೆಂತಲೂ ಗೊತ್ತುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇಶದ ಜನರು ಯಾಜಕರಿಗೂ ಲೇವಿಯರಿಗೂ ತಮ್ಮ ಬೆಳೆಯ ಒಂದು ಪಾಲನ್ನು ಕೊಡಬೇಕಾಗಿತ್ತು. ಹಿಜ್ಕೀಯನು ಯಾಜಕರಿಗೂ ಲೇವಿಯರಿಗೂ ಅವರು ಕೊಡಬೇಕಾಗಿದ್ದ ಪಾಲನ್ನು ಕೊಡಬೇಕೆಂದು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದ ಜನರಿಗೆ ಆಜ್ಞಾಪಿಸಿದನು. ಹೀಗಿರುವಾಗ ಯಾಜಕರೂ ಲೇವಿಯರೂ ತಮ್ಮ ಸಮಯವನ್ನೆಲ್ಲಾ ದೇವರ ಸೇವೆಯಲ್ಲಿ ಕಳೆಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯಾಜಕರೂ ಲೇವಿಯರೂ ಯೆಹೋವ ದೇವರ ನಿಯಮದಲ್ಲಿ ಆಸಕ್ತರಾಗಿರುವುದಕ್ಕಾಗಿ ಅವರಿಗೆ ತಕ್ಕ ಭಾಗವನ್ನು ಕೊಡಬೇಕೆಂದು ಯೆರೂಸಲೇಮಿನಲ್ಲಿ ಜನರಿಗೆ ಅವನು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 31:4
12 ತಿಳಿವುಗಳ ಹೋಲಿಕೆ  

ಯಾಜಕನ ತುಟಿಗಳು ದೈವಜ್ಞಾನದ ದ್ವಾರಗಳು. ಅವನ ಬಾಯಿಂದ ಜನರು ಧರ್ಮೋಪದೇಶವನ್ನು ಕೇಳಬೇಕು. ಅವನು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೂತನು.”


ದೇವರ ವಾಕ್ಯದ ಉಪದೇಶ ಪಡೆಯುವವನು ಉಪದೇಶ ಮಾಡುವವನೊಂದಿಗೆ ತನಗೆ ಇರುವ ಒಳ್ಳೆಯದನ್ನೆಲ್ಲಾ ಹಂಚಿಕೊಳ್ಳಲಿ.


(ಆಯಾ ಉದ್ಯೋಗ ವರ್ಗಗಳಿಗನುಸಾರ ಅನುದಿನ ಸೇವೆಗಾಗಿ ಸರ್ವೇಶ್ವರನ ಆಲಯಕ್ಕೆ ಬರುತ್ತಿದ್ದ ಗಂಡಸರಲ್ಲಿ ಮೂವತ್ತು ವರ್ಷ ಮತ್ತು ಅದಕ್ಕೂ ಮೇಲ್ಪಟ್ಟ ವಯಸ್ಸು ಉಳ್ಳವರಿಗೆ ಪಟ್ಟಿಯಲ್ಲಿ ಬರೆದಿದ್ದ ಹಾಗೆ ಕೊಡುತ್ತಿದ್ದರು.


ಲೇವಿಯ ಕುಲದವರಲ್ಲಿ ಯಾಜಕ ಪದವಿಯನ್ನು ಹೊಂದಿದವರು ಜನರಿಂದ, ಅಂದರೆ ಅಬ್ರಹಾಮನ ವಂಶಜರಾದ ತಮ್ಮ ಸ್ವಜನರಿಂದ, ದಶಮಾಂಶವನ್ನು ತೆಗೆದುಕೊಳ್ಳುವುದಕ್ಕೆ ಧರ್ಮಶಾಸ್ತ್ರದಲ್ಲಿ ಅಪ್ಪಣೆ ಉಂಟು.


ಅಂಥವನ ಕೈಯಲ್ಲಿ ಪಿತ್ರಾರ್ಜಿತ ಸೊತ್ತನ್ನು ಮಾರಿದ ಹಣವಿದ್ದರೂ ಮಿಕ್ಕ ಲೇವಿಯರೊಂದಿಗೆ ಸಮವಾದ ಪಾಲಿಗೆ ಬಾಧ್ಯನಾಗಿರುವನು.


ಎಲ್ಲ ಪ್ರಥಮಫಲಗಳಲ್ಲಿ ಉತ್ಕೃಷ್ಟವಾದದ್ದು ಹಾಗು ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸುವ ಎಲ್ಲ ಪದಾರ್ಥಗಳು ಅವರದಾಗಬೇಕು. ನಿಮ್ಮ ಮನೆ ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ಯಾಜಕರಿಗೆ ಕೊಡತಕ್ಕದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು