Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 31:8 - ಕನ್ನಡ ಸತ್ಯವೇದವು C.L. Bible (BSI)

8 ಹಿಜ್ಕೀಯನೂ ಪದಾಧಿಕಾರಿಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಸರ್ವೇಶ್ವರನನ್ನು ಕೊಂಡಾಡಿ ಅವರ ಪ್ರಜೆಗಳಾದ ಇಸ್ರಯೇಲರನ್ನು ಹರಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹಿಜ್ಕೀಯನೂ ಮತ್ತು ಪದಾಧಿಕಾರಿಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಯೆಹೋವನನ್ನು ಕೊಂಡಾಡಿ ಆತನ ಪ್ರಜೆಗಳಾದ ಇಸ್ರಾಯೇಲರನ್ನು ಹರಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹಿಜ್ಕೀಯನೂ ಪ್ರಭುಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಯೆಹೋವನನ್ನು ಕೊಂಡಾಡಿ ಆತನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಹರಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಹಿಜ್ಕೀಯನೂ ಪ್ರಧಾನರೂ ಜನರ ಕಾಣಿಕೆಯ ರಾಶಿಯನ್ನು ನೋಡಿ ಯೆಹೋವನಿಗೆ ಸ್ತೋತ್ರ ಮಾಡಿದರು ಮತ್ತು ಅದನ್ನು ಅರ್ಪಿಸಿದ ಜನರಿಗಾಗಿ ಸ್ತೋತ್ರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹಿಜ್ಕೀಯನೂ ಪ್ರಧಾನರೂ ಬಂದು ರಾಶಿಗಳನ್ನು ನೋಡಿದಾಗ, ಅವರು ಯೆಹೋವ ದೇವರನ್ನೂ ಸ್ತುತಿಸಿದರು, ಅವರ ಜನರಾದ ಇಸ್ರಾಯೇಲರನ್ನೂ ಆಶೀರ್ವದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 31:8
20 ತಿಳಿವುಗಳ ಹೋಲಿಕೆ  

ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ.


ನಿಮ್ಮ ನಿಮಿತ್ತ ನಮಗೆ ಲಭಿಸಿರುವ ಆನಂದಕ್ಕಾಗಿ ದೇವರಿಗೆ ಎಷ್ಟು ಕೃತಜ್ಞತೆಯನ್ನು ಸಲ್ಲಿಸಿದರೂ ಸಾಲದು.


ನನ್ನ ದೇವರು ತಮ್ಮ ಮಹದೈಶ್ವರ್ಯದಿಂದ ನಿಮ್ಮ ಅಗತ್ಯಗಳನ್ನೆಲ್ಲಾ ಕ್ರಿಸ್ತಯೇಸುವಿನ ಮುಖಾಂತರ ಪೂರೈಸುವರು.


ನನ್ನ ಬಗ್ಗೆ ನಿಮಗಿರುವ ಮಮತೆಯು ಇಷ್ಟು ದಿನಗಳಾದ ಮೇಲೆ ಪುನಃ ಅರಳಿದ್ದಕ್ಕೆ ಪ್ರಭುವಿನಲ್ಲಿ ನಾನು ಬಹಳ ಸಂತೋಷಪಡುತ್ತೇನೆ. ಇಂಥ ಮಮತೆ ನಿಮಗೆ ಮೊದಲಿನಿಂದ ಇತ್ತಾದರೂ ಅದನ್ನು ವ್ಯಕ್ತಪಡಿಲು ನಿಮಗೆ ಸೂಕ್ತ ಸಂದರ್ಭ ಒದಗಿರಲಿಲ್ಲ.


ನಿಮ್ಮ ಮೇಲೆ ನನಗಿರುವ ಅದೇ ಅಕ್ಕರೆಯನ್ನು ತೀತನಲ್ಲೂ ಮೂಡಿಸಿದ ದೇವರಿಗೆ ಕೃತಜ್ಞತೆ ಸಲ್ಲಬೇಕು.


ಇಂತಹ ಸಮೃದ್ಧಿ ಪಡೆದಿರುವ ಜನರು ಭಾಗ್ಯವಂತರು I ಯಾರಿಗೆ ದೇವರು ಪ್ರಭುವಾಗಿಹನೋ ಅವರು ಧನ್ಯರು II


ಎಜ್ರನ ಮಾತುಗಳು ಇವು: “ನಮ್ಮ ಪಿತೃಗಳ ದೇವರಾದ ಸರ್ವೇಶ್ವರಸ್ವಾಮಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಶೋಭಿಸುವ ಸ್ಥಿತಿಗೆ ತರುವುದಕ್ಕೆ ಸರ್ವೇಶ್ವರನ ಪ್ರೇರಣೆಯಿಂದಲೇ ಅರಸನು ಮನಸ್ಸು ಮಾಡಿದ್ದಾನೆ:


ಇದಾದ ಮೇಲೆ ಎದ್ದು ನಿಂತಿದ್ದ ಇಸ್ರಯೇಲ್ ಸಮಾಜದ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿದನು.


ಇಸ್ರಯೇಲ್ ಸರ್ವಸಮಾಜದವರನ್ನು ಆಶೀರ್ವದಿಸುತ್ತಾ ಗಟ್ಟಿಯಾಗಿ ಹೀಗೆಂದನು:


ಇದಾದ ಮೇಲೆ ಅವನು ಸೇನಾಧೀಶ್ವರ ಸರ್ವೇಶ್ವರನ ಹೆಸರಿನಲ್ಲಿ ಎಲ್ಲರನ್ನೂ ಆಶೀರ್ವದಿಸಿದನು.


ಇಸ್ರಯೇಲಿನಾ ನಾಯಕರೊಡನೆ ಸೇರಿ ಸ್ವೇಚ್ಛೆಯಿಂದ ಸೈನ್ಯಸೇರಿದಾ ಜನರೊಡಗೂಡಿ ನಾ ನಲಿದು ಹಾಡುವೆನು, ಮಾಡಿರಿ ನೀವು ಸರ್ವೇಶ್ವರನ ಗುಣಗಾನವನು;


ಇಸ್ರಯೇಲ್, ನೀನು ಎಷ್ಟೋ ಧನ್ಯ! ಯಾರಿಗಿದೆ ನಿನಗಿರುವಂತೆ ಭಾಗ್ಯ! ಜಯಗಳಿಸಿರುವೆ ಸರ್ವೇಶ್ವರನ ಅನುಗ್ರಹದಿಂದ. ಆತನೇ ನಿನ್ನ ಕಾಪಾಡುವ ಗುರಾಣಿ ನಿನ್ನ ಗೌರವವನ್ನು ಕಾಯುವ ಕತ್ತಿ. ಎಂದೇ ಮುದುರಿಕೊಳ್ಳುವರು ಶತ್ರುಗಳು ನಿನ್ನ ಮುಂದೆ ಜಯಶೀಲನಾಗಿ ನೀ ಮೆರೆವೆ ಅವರ ಮಲೆನಾಡಿನಲ್ಲೆ.


ಹೀಗೆ ರಾಶಿಹಾಕುವುದು ಮೂರನೆಯ ತಿಂಗಳಲ್ಲಿ ಪ್ರಾರಂಭವಾಗಿ ಏಳನೆಯ ತಿಂಗಳಲ್ಲಿ ಮುಗಿಯಿತು.


ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಬಳಿ ಆ ರಾಶಿಗಳ ಬಗ್ಗೆ ವಿಚಾರಿಸಿಧಾಗ,


ಪ್ರಭುವನು ದೇವರಾಗಿ ಪಡೆದ ಜನಾಂಗ ಧನ್ಯ I ಸ್ವಜನರಾಗಿ ಆತನಾಯ್ದುಕೊಂಡ ಜನತೆ ಧನ್ಯ II


ಅವರು ಪೂರ್ಣಮನಸ್ಸಿನಿಂದ ಹಾಗೂ ಸ್ವೇಚ್ಛೆಯಿಂದ ಸರ್ವೇಶ್ವರನಿಗೆ ಕಾಣಿಕೆ ಕೊಟ್ಟಿದ್ದಕ್ಕಾಗಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷ ಆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು