Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:15 - ಕನ್ನಡ ಸತ್ಯವೇದವು C.L. Bible (BSI)

15 ನೀವು ಹಿಜ್ಕೀಯನಿಂದ ಮರುಳಾಗಿ ಮೋಸಹೋಗಬೇಡಿ; ಅವನನ್ನು ನಂಬಲೂಬೇಡಿ. ಯಾವ ರಾಜ್ಯಜನಾಂಗಗಳ ದೇವತೆಯೂ ತನ್ನ ಪ್ರಜೆಯನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆಹೋದರು. ಅಂದ ಮೇಲೆ, ನಿಮ್ಮ ದೇವರಂಥವನು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಬಲ್ಲನೇ?".

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀವು ಹಿಜ್ಕೀಯನಿಂದ ಮರುಳಾಗಿ ಈ ರೀತಿಯಾಗಿ ಮೋಸಹೋಗಬೇಡಿರಿ, ಅವನನ್ನು ನಂಬಲೂ ಬೇಡಿರಿ. ಯಾವ ರಾಜ್ಯಜನಾಂಗಗಳ ದೇವತೆಗಳೂ ತನ್ನ ಪ್ರಜೆಗಳನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆ ಹೋದನು ಅಂದ ಮೇಲೆ, ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕಿದಂತೆ ತಪ್ಪಿಸಬಲ್ಲನೇ?” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀವು ಹಿಜ್ಕೀಯನಿಂದ ಮರುಳಾಗಿ ಈ ಪ್ರಕಾರ ಮೋಸಹೋಗಬೇಡಿರಿ. ಅವನನ್ನು ನಂಬಲೂಬೇಡಿರಿ. ಯಾವ ರಾಜ್ಯ ಜನಾಂಗಗಳ ದೇವತೆಯಾದರೂ ತನ್ನ ಪ್ರಜೆಯನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ನಿಮ್ಮ ದೇವರಂಥವನು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಬಲ್ಲನೇ ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಹಿಜ್ಕೀಯನು ನಿಮ್ಮನ್ನು ಮೋಸಗೊಳಿಸದಂತೆ ಜಾಗರೂಕರಾಗಿರಿ, ಅವನನ್ನು ನಂಬಬೇಡಿರಿ. ಯಾವ ದೇಶದ ದೇವರಿಗಾಗಲಿ ಅವನ ಜನರಿಗಾಗಲಿ ನನ್ನನ್ನು ನನ್ನ ಪೂರ್ವಿಕರನ್ನು ತಡೆಯಲು ಸಾಧ್ಯವಾಗಲಿಲ್ಲ. ನಿಮ್ಮ ದೇವರೂ ನನ್ನನ್ನು ತಡೆಯಲು ಸಾಧ್ಯವಿಲ್ಲ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದ್ದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ನಿಮ್ಮನ್ನು ದಾರಿತಪ್ಪಿಸಲು ಬಿಡಬೇಡಿರಿ. ಅವನ ಮಾತು ನಂಬಬೇಡಿರಿ. ನನ್ನ ಕೈಯೊಳಗಿಂದಲೂ, ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು? ಅನ್ನುತ್ತಾನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:15
14 ತಿಳಿವುಗಳ ಹೋಲಿಕೆ  

ಈಗಲಾದರು ನೀವು ಸಿದ್ಧರಾಗಿದ್ದು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿ ಕೇಳಿದ ಕೂಡಲೆ ಅಡ್ಡಬಿದ್ದು ನಾನು ಸ್ಥಾಪಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಇಲ್ಲವಾದರೆ ಈ ಗಳಿಗೆಯಲ್ಲೆ ನಿಮ್ಮನ್ನು ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲಾಗುವುದು. ನಿಮ್ಮನ್ನು ನನ್ನ ಕೈಯಿಂದ ಬಿಡಿಸಬಲ್ಲ ದೇವರು ಯಾರಿದ್ದಾನೆ?” ಎಂದು ಹೇಳಿದನು.


ಅದಕ್ಕೆ ಫರೋಹನು, “ 'ಸರ್ವೇಶ್ವರ' ಎಂಬುವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಯೇಲರನ್ನು ಹೋಗಬಿಡಬೇಕೊ? ಆ ಸರ್ವೇಶ್ವರನು ಯಾರೋ ನನಗೆ ಗೊತ್ತಿಲ್ಲ. ಇಸ್ರಯೇಲರನ್ನು ನಾನು ಹೋಗಬಿಡುವುದಿಲ್ಲ,” ಎಂದು ಬಿಟ್ಟನು.


‘ಸರ್ವೇಶ್ವರ ನಮ್ಮನ್ನು ರಕ್ಷಿಸುವರು’ ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಮೂಡಿಸದಂತೆ ಎಚ್ಚರಿಕೆಯಾಗಿರಿ. ಯಾವ ರಾಷ್ಟ್ರದ ದೇವರುಗಳು ತಾನೇ ಅಸ್ಸೀರಿಯದ ಅರಸನ ಕೈಯಿಂದ ನಾಡನ್ನು ಬಿಡಿಸಿಕೊಂಡಿದ್ದಾರೆ?


ಇದರಿಂದ ನಾನು ಯಾರನ್ನು ಒಲಿಸಿಕೊಳ್ಳಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮಾನವರ ಮೆಚ್ಚುಗೆಯನ್ನು ಗಳಿಸಿಕೊಳ್ಳಲು ಯತ್ನಿಸುತ್ತಿಲ್ಲ; ನಾನಿನ್ನೂ ಜನರ ಮೆಚ್ಚುಗೆಯನ್ನು ಗಳಿಸುವವನೇ ಆಗಿದ್ದರೆ ಕ್ರಿಸ್ತಯೇಸುವಿನ ದಾಸನಾಗಿರಲು ಸಾಧ್ಯವೇ ಇಲ್ಲ.


ಪೌಲ ಎಂಬವನು ಏನು ಮಾಡುತ್ತಿರುವನೆಂದು ನೀವು ನೋಡಿದ್ದೀರಿ ಹಾಗೂ ಕೇಳಿದ್ದೀರಿ; ಕೈಯಿಂದ ಮಾಡಿದ ಆಕೃತಿಗಳು ದೇವರೇ ಅಲ್ಲವೆಂದು ಇಲ್ಲಿ ಎಫೆಸದಲ್ಲೂ ಹೆಚ್ಚುಕಡಿಮೆ ಇಡೀ ಏಷ್ಯದಲ್ಲೂ ಪ್ರಚಾರಮಾಡುತ್ತಿದ್ದಾನೆ; ಮಾತ್ರವಲ್ಲ, ಅನೇಕ ಜನರನ್ನು ಮನವೊಲಿಸಿ ಮಾರ್ಪಡಿಸಿಬಿಟ್ಟಿದ್ದಾನೆ.


ಹಿಜ್ಕೀಯನು, ‘ನಮ್ಮ ದೇವರಾದ ಸರ್ವೇಶ್ವರಸ್ವಾಮಿ ಅಸ್ಸೀರಿಯಾದ ಅರಸನ ಕೈಯಿಂದ ನಮ್ಮನ್ನು ರಕ್ಷಿಸುವನು,’ ಎಂಬ ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುತ್ತಿರುವುದು ನಿಮ್ಮನ್ನು ಹಸಿವೆ ನೀರಡಿಕೆಗಳಿಂದ ಸಾಯಿಸುವುದಕ್ಕೇ ಅಲ್ಲದೆ ಮತ್ತೇನಕ್ಕೂ ಅಲ್ಲ.


“ಜೆರುಸಲೇಮ್ ನನ್ನ ವಶವಾಗುವುದಿಲ್ಲವೆಂದು ನೀನು ನಂಬುವ ದೇವರು ನಿನಗೆ ಹೇಳಿ ನಿನ್ನನ್ನು ಮೋಸಗೊಳಿಸಬಹುದು.


ಹಿಜ್ಕೀಯನ ಮಾತನ್ನು ಕೇಳಿ ಮೋಸಹೋಗಬೇಡಿ; ನಿಮ್ಮನ್ನು ಬಿಡಿಸಲು ಅವನಿಂದಾಗದು.


‘ಹೇಗೆ ಪ್ರೇರಿಸುವೆ?’ ಎಂದು ಸರ್ವೇಶ್ವರ ಕೇಳಿದರು. ಅದು, ‘ನಾನು ಅಸತ್ಯವಾಡುವ ಆತ್ಮವಾಗಿ ಅವನ ಎಲ್ಲ ಪ್ರವಾದಿಗಳಲ್ಲಿ ಸೇರುವೆನು,’ ಎಂದು ಉತ್ತರಕೊಟ್ಟಿತು. ಆಗ ಸರ್ವೇಶ್ವರ, ‘ಹೋಗಿ ಅದರ ಅಂತೆಯೇ ಮಾಡು; ಅವನನ್ನು ಪ್ರೇರಿಸಿ ಸಫಲನಾಗುವೆ,’ ಎಂದರು.


ದೇವರಾದ ಸರ್ವೇಶ್ವರನಿಗೂ ಅವರ ಸೇವಕನಾದ ಹಿಜ್ಕೀಯನಿಗೂ ವಿರೋಧವಾದ ಈ ಮೊದಲಾದ ಮಾತುಗಳನ್ನು ಸನ್ಹೇರೀಬನು ತನ್ನ ಸೇವಕರ ಮುಖಾಂತರ ಹೇಳಿಕಳುಹಿಸಿದ್ದನು;


ಅದು ಮಾತ್ರವಲ್ಲ, ಆ ನಕ್ಷತ್ರಗಣದ ಅಧಿಪತಿಯನ್ನೇ ಎದುರಿಸುವಷ್ಟು ಉಬ್ಬಿಹೋಗಿ ಅನುದಿನದ ಬಲಿಯರ್ಪಣೆ ಆತನಿಗೆ ಸಲ್ಲದಂತೆ ಮಾಡಿತು.


ಆಗ ಫರೋಹನು, “ನೀವು ನಿಮ್ಮ ಮನೆಯವರೆಲ್ಲರನ್ನು ಕರೆದುಕೊಂಡು ಹೋಗುವುದಕ್ಕೆ ನಾನೆಂದಿಗೂ ಅಪ್ಪಣೆಕೊಡುವುದಿಲ್ಲ. ಕೊಟ್ಟೆನಾದರೆ ಸರ್ವೇಶ್ವರನ ದಯೆಯೊಂದೇ ನಿಮ್ಮನ್ನು ಕಾಪಾಡಬೇಕಾಗುವುದು. ನೋಡಿ, ನೀವು ದುರಾಲೋಚನೆಯಿಂದ ಕೂಡಿದವರು ಎಂಬುದು ಸರಿಯಷ್ಟೆ!


ನಿನ್ನವರು ದೊಡ್ಡ ಬಾಯಿಮಾಡಿ ನನ್ನ ಮೇಲೆ ಆಡಿದ ಅತಿಯಾದ ಹರಟೆಗಳನ್ನು ಕೇಳಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು