Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:20 - ಕನ್ನಡ ಸತ್ಯವೇದವು C.L. Bible (BSI)

20 ಈ ಕಾರಣ ಅರಸ ಹಿಜ್ಕೀಯನು ಹಾಗು ಆಮೋಚನ ಮಗ ಯೆಶಾಯನೆಂಬ ಪ್ರವಾದಿಯು ಪರಲೋಕಕ್ಕೆ ಮೊರೆಯಿಟ್ಟು ಪ್ರಾರ್ಥಿಸಿದರು. ಸರ್ವೇಶ್ವರಸ್ವಾಮಿ ದೂತನನ್ನು ಕಳುಹಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಈ ಕಾರಣದಿಂದ ಅರಸನಾದ ಹಿಜ್ಕೀಯನು ಹಾಗು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಪರಲೋಕದ ದೇವರಿಗೆ ಮೊರೆಯಿಟ್ಟು ಪ್ರಾರ್ಥಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಈ ಕಾರಣದಿಂದ ಅರಸನಾದ ಹಿಜ್ಕೀಯನೂ ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯೂ ಪರಲೋಕಕ್ಕೆ ಮೊರೆಯಿಟ್ಟು ಪ್ರಾರ್ಥಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅರಸನಾದ ಹಿಜ್ಕೀಯನೂ ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯೂ ತಮಗೆ ಬಂದೊದಗಿದ ಸಮಸ್ಯೆಗಾಗಿ ಪರಲೋಕದ ಕಡೆಗೆ ನೋಡಿ ಗಟ್ಟಿಯಾಗಿ ಪ್ರಾರ್ಥಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇದರ ನಿಮಿತ್ತ ಅರಸನಾದ ಹಿಜ್ಕೀಯನೂ, ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:20
13 ತಿಳಿವುಗಳ ಹೋಲಿಕೆ  

ಆಸನು ತನ್ನ ದೇವರಾದ ಸರ್ವೇಶ್ವರನಿಗೆ, “ಸರ್ವೇಶ್ವರಾ, ಬಲಿಷ್ಠನು ಬಲಹೀನನ ಮೇಲೆ ಬೀಳುವಾಗ, ನಿಮ್ಮ ಹೊರತು ರಕ್ಷಕನಿಲ್ಲ. ನಿಮ್ಮಲ್ಲಿ ಭರವಸೆ ಇಟ್ಟು ನಿಮ್ಮ ಹೆಸರಿನಲ್ಲಿ ಈ ಮಹಾ ಸೇನೆಗೆ ವಿರುದ್ಧ ಯುದ್ಧಕ್ಕೆ ಬಂದಿದ್ದೇವೆ. ಸರ್ವೇಶ್ವರಾ, ನಮ್ಮ ದೇವರು ನೀವು; ನರರು ನಿಮ್ಮನ್ನು ಎದುರಿಸಿ ಗೆಲ್ಲಬಾರದು,” ಎಂದು ಮೊರೆ ಇಟ್ಟನು.


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ಈ ವರದಿಯನ್ನು ಕೇಳಿದ ಹಿಜ್ಕೀಯನು ಕೋಪದಿಂದ ತನ್ನ ಬಟ್ಟೆಯನ್ನು ಹರಿದುಕೊಂಡು, ಗೋಣಿತಟ್ಟನ್ನು ಕಟ್ಟಿಕೊಂಡು ಸರ್ವೇಶ್ವರನ ಆಲಯಕ್ಕೆ ಹೋದನು.


ಜೆರುಸಲೇಮಿನ ದೇವರು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳ ಜನರ ದೇವತೆಗಳಿಗೆ ಸಮಾನನಾಗಿರುತ್ತಾನೆ, ಎಂಬ ಅರ್ಥದಲ್ಲಿ ಅವರ ಬಗ್ಗೆ ಗಟ್ಟಿಯಾಗಿ ಕೂಗಿ ಹೇಳಿದರು; ಆ ಜನರೊಡನೆ ಹಿಬ್ರುಭಾಷೆಯಲ್ಲೆ ಮಾತಾಡಿದರು.


ಅಸ್ಸೀರಿಯದ ಅರಸನ ದಂಡಿನಲ್ಲಿದ್ದ ಎಲ್ಲ ಶೂರರನ್ನೂ ನಾಯಕರನ್ನೂ ಅಧಿಪತಿಗಳನ್ನೂ ಸಂಹರಿಸಿದರು; ಆ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದರು.


ಯೆಹೂದ್ಯರು ತಮ್ಮ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾಗಿರುವುದನ್ನು ಕಂಡು ಸರ್ವೇಶ್ವರನಿಗೆ ಅಭಿಮುಖರಾಗಿ ಮೊರೆಯಿಟ್ಟರು; ಯಾಜಕರು ಕಹಳೆಗಳನ್ನು ಊದಿದರು.


ಆಸನು ಅವನನ್ನು ಎದುರುಗೊಳ್ಳಲು ಹೋದನು. ಮಾರೇಷದ ಬಳಿಯಲ್ಲಿದ್ದ ಚೆಫಾತಾ ಬಯಲಿನಲ್ಲಿ ಉಭಯರೂ ವ್ಯೂಹಕಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು